ಇಲಾಖೆಗಳು ರೈತರ ನೆರವಿಗೆ ಧಾವಿಸಲಿ

Team Udayavani, Feb 12, 2019, 7:25 AM IST

ilakhe.jpg

ಮಾಲೂರು: ಸಾರ್ವಜನಿಕರು ಮತ್ತು ರೈತರಿಗೆ ನೇರವಾಗಿ ನೆರವಾಗಬೇಕಾಗಿರುವ ಇಲಾಖೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು. ಪಟ್ಟಣದ ಬೆಸ್ಕಾಂನ ವಿಭಾಗೀಯ ಕಚೇರಿ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ತಾಲೂಕಿನ ಸಾಮಾನ್ಯ ವರ್ಗ ಹಾಗೂ ರೈತರಿಗೆ ಪ್ರತಿನಿತ್ಯ ಒಂದಲ್ಲ ಒಂದು ವಿಷಯವಾಗಿ ತೀರಾ ಅಗತ್ಯವಾಗಿರುವ ಕಂದಾಯ, ಪೊಲೀಸ್‌, ಹಾಗೂ ಬೆಸ್ಕಾಂ ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಸೇವೆ ಮಾಡಬೇಕು. ರೈತರು ಮತ್ತು ಸಾರ್ವಜನಿಕರು ತಮ್ಮ ಇಲಾಖೆ ಕೆಲಸ ಕಾರ್ಯಗಳಿಗೆ ಬಂದ ಕೂಡಲೇ ಪ್ರಾಮಾಣಿಕವಾಗಿ ಸ್ಪಂದಿಸುವಂತೆ ತಿಳಿಸಿದರು.

ಸೇವೆಗೆ ಅನುಕೂಲವಾಗಿದೆ: ಕೆಲವು ತುರ್ತು ಸಂದರ್ಭಗಳಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಅಡಚಣೆಯಾಗಿ ಅನೇಕ ಬಾರಿ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದರೂ ಪ್ರಯೋ ಜನವಾಗದ ಪರಿಸ್ಥಿತಿಯಿದೆ. ಹೀಗಾಗಿ ತಾವೇ ದುರಸ್ತಿ ಕಾರ್ಯಗಳಿಗೆ ಮುಂದಾಗಿ ಪ್ರಾಣ ಹಾನಿ ಮಾಡಿಕೊಂಡಿರುವ ನಿದರ್ಶನಗಳಿವೆ. ಇಂತಹ ಅನಾಹುತ ತಪ್ಪಿಸುವ ಉದ್ದೇಶದಿಂದ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.

ತಾಲೂಕಿನ ಅನೇಕ ಜನರಿಗೆ ಗೊತ್ತಿರುವ ಹಳೆ ಕೆಇಬಿ ಕಚೇರಿಯಾಗಿರುವ ಸ್ಥಳದಲ್ಲಿ ಬೆಸ್ಕಾಂ ಉತ್ತಮ ಕಟ್ಟಡ ನಿರ್ಮಿಸಿದ್ದು ಸಾರ್ವಜನಿಕ ಸೇವೆಗೆ ಅನುಕೂಲಕರವಾಗಲಿದೆ ಎಂದು ತಿಳಿಸಿದರು. ಇಲಾಖೆ ಅಭಿವೃದ್ಧಿಗಾಗಿ ಬೆಸ್ಕಾಂನ ಸಹಾಯಕ ಕಾರ್ಯಪಾಲಕ ಅನ್ವರ್‌ ಪಾಷಾ ಅವರು ನೀಡಿರುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟು ಅನುಮೋದನೆ ಪಡೆಯಲಾಗಿದೆ. ಕುಡಿಯನೂರು ಮತ್ತು ತೊರ‌್ಲಕ್ಕಿ ಉಪಕೇಂದ್ರಗಳ ನಿರ್ಮಿಸಲು ಮುಂದಾಗಿದೆ.

ಕುಡಿಯನೂರು ಗ್ರಾಮದಲ್ಲಿ ಸ್ಥಳ ಗುರುತಿಸುವ ಕಾರ್ಯವಾಗಿದ್ದು ತೊರ‌್ಲಕ್ಕಿಯಲ್ಲಿ ಮುಂದಿನ 15 ದಿನಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ ಎಂದರು. ಮಾಸ್ತಿಯಲ್ಲಿ ವಿದ್ಯುತ್‌ ಅಡಚಣೆ ಇರುವ ಬಗ್ಗೆ ರೈತರು ತಿಳಿಸಿದ್ದು ಅ ಭಾಗದಲ್ಲಿ ಅಗತ್ಯವಾಗಿರುವ ಪರಿವರ್ತಕ ಅಳವಡಿಸಿದ್ದಲ್ಲಿ ಮಾಸ್ತಿ ಹೋಬಳಿ ವಿದ್ಯುತ್‌ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ಈ ವೇಳೆ ಪುರಸಭಾ ಅಧ್ಯಕ್ಷ ಸಿ.ಪಿ.ನಾಗರಾಜು, ಸಹಾಯಕ ಲೆಕ್ಕಾಧಿಕಾರಿ ಬಾಲಾಜಿ ಸಿಂಗ್‌, ಸಹಾಯಕ ಎಂಜಿನಿಯರ್‌ ದಿವ್ಯಾ, ಗಂಗಾಧರ್‌, ಪುರಸಭಾ ಸದಸ್ಯರಾದ ಹನುಮಂñ‌ರೆಡ್ಡಿ, ಸಿ.ಪಿ.ವೆಂಕಟೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.