ಜಿಲ್ಲಾದ್ಯಂತ ಡಾ.ರಾಜ್‌ ಜನ್ಮ ದಿನಾಚರಣೆ

ವರನಟನ ಭಾವಚಿತ್ರಕ್ಕೆ ಅಭಿಮಾನಿಗಳಿಂದ ಪುಷ್ಪ ನಮನ ,ಡಾ.ರಾಜ್ ಶಿಸ್ತು ಆದರ್ಶ ದಾರಿದೀಪವಾಗಲಿ: ಡೀಸಿ

Team Udayavani, Apr 25, 2019, 12:01 PM IST

rajkumar

ಕೋಲಾರ: ಶಿಸ್ತುಬದ್ಧ ಜೀವನವನ್ನು ಸಾಗಿಸಿದಡಾ.ರಾಜ್‌ಕುಮಾರ್‌ ಆದರ್ಶ ಪ್ರತಿಯೊಬ್ಬರಿಗೂ ದಾರಿ ದೀಪವಾಗಲಿ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗ‌ಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ಡಾ.ರಾಜ್‌ಕುಮಾರ್‌ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಡಾ.ರಾಜ್‌ಕುಮಾರ್‌ ಯಾವುದೇ ವಿವಾದಗಳಿಗೆ ಅವಕಾಶ ಕೊಡದೆ ಸರಳ ಜೀವನವನ್ನು ಸಾಗಿಸಿದರು.ಅವರಂತೆ ಎಲ್ಲರೂ ಉತ್ತಮ ಬದುಕನ್ನು ಸಾಗಿಸುವಂತಾಗ ಬೇಕು ಎಂದ ಅವರು, ಕನ್ನಡ ಭಾಷೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಕೆಲವು ಸಾಮಾಜಿಕ ಕಳಕಳಿಯ ಹೋರಾಟಗಳಲ್ಲಿ ಭಾಗವಹಿಸಿದರು ಎಂದು ಹೇಳಿದರು.

ಗಾನ ಗಂಧರ್ವ: ಕನ್ನಡ ಚಿತ್ರರಂಗದಲ್ಲಿ ಮೇರುನಟರಾಗಿದ್ದ ರಾಜ್‌ಕುಮಾರ್‌, ಪೌರಾಣಿಕ ಹಾಗೂ ಆಧುನಿಕ ಕಥಾ ವಸ್ತುವಿನ ಸಿನಿಮಾಗಳಲ್ಲಿ ಎಲ್ಲಾರೀತಿಯ ಪಾತ್ರಗಳನ್ನು ನಿಭಾಯಿಸಿದರು. 200ಕ್ಕೂಹೆಚ್ಚು ಚಿತ್ರಗಳಲ್ಲಿ ನಟನೆ ಮಾಡಿ, ವರನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜೊತೆಗೆ ಉತ್ತಮ ಗಾಯಕರೂ ಆಗಿದ್ದು, ಅವರ ಕಂಠದಿಂದ ಅನೇಕ ಹಾಡುಗಳು ಬಂದಿವೆ. ಹಾಗಾಗಿ ಇವರನ್ನು ಗಾನ ಗಂಧರ್ವ ಎಂದೂ ಕರೆಯುವರು ಎಂದು ಹೇಳಿದರು.

ಸರ್ಕಾರವು ಡಾ.ರಾಜ್‌ಕುಮಾರ್‌ ಅವರ ಜನ್ಮದಿನವನ್ನು ರಾಜ್ಯಾದ್ಯಂತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಚರಣೆ ಮಾಡುತ್ತಿದೆ.ಜಿಲ್ಲೆಯಲ್ಲಿಯೂ ಜಿಲ್ಲಾಡಳಿತದ ಸಹಯೋಗದೊಂದಿಗೆಆಚರಣೆ ಮಾಡಲಾಗುತ್ತಿದೆ ಎಂದ ಅವರು, ಡಾ. ರಾಜ್‌ ಕುಮಾರ್‌ ಅವರ ಜನ್ಮ ದಿನದ ಸಂದರ್ಭಕ್ಕೆ ಎಲ್ಲರಿಗೂ ಶುಭಕೋರಿದರು.ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸನ್ಮಾನ: ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳಪರ ಕಲಾವಿದ ವಿಷ್ಣು ಅವರು, ಜಿಲ್ಲಾಧಿಕಾರಿಗಳಿಗೆ ಸನ್ಮಾನ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ ಅವರು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ವಂದಿಸಿದರು.

ಅಪರ ಜಿಲ್ಲಾಧಿಕಾರಿ ಎಚ್‌.ಪುಷ್ಪಲತಾ, ಕೆಎಸ್‌ಆರ್‌ಟಿಸಿ. ವಿಭಾಗೀಯ ನಿಯಂತ್ರಣಾ ಧಿಕಾರಿ ಹಿಮವರ್ಧನ್‌ ನಾಯ್ಡು ಅಲ್ಲೂರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಸೌಮ್ಯಾ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಗೀತಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.