ಎಲ್ಲಾ ಗ್ರಾ ಪಂ ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ

Team Udayavani, Oct 3, 2020, 2:36 PM IST

ಎಲ್ಲಾ ಗ್ರಾ ಪಂ ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ

ಬಂಗಾರಪೇಟೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ ಕನಸು ನನಸು ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ 156 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಪ್ರತಿ ಗ್ರಾಪಂ ಮಟ್ಟದಲ್ಲಿ ಜನಸಾಮಾನ್ಯರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಶ್ರಮಿಸುವಂತೆ ಜಿಲ್ಲಾ ಪಂಚಾಯತ್‌ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಆರ್‌.ರವಿಕುಮಾರ್‌ ಹೇಳಿದರು.

ತಾಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಬಾವರಹಳ್ಳಿ ಗ್ರಾಮದ ಹೊರವಲಯದ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕ ಕಟ್ಟಡ ಉದ್ಘಾಟನೆ ಹಾಗೂ ಸ್ವಚೊfàತ್ಸವ ಆಗಲಿ ನಿತ್ಯೋತ್ಸವ ಎಂಬ ಮಾಸಾಚರಣೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಹಕಾರ ನೀಡಬೇಕು: ಗಾಂಧೀಜಿಯವರ ಕನಸಾದ ಸ್ವಚ್ಛತಾ ವಾತಾವರಣ ನಿರ್ಮಾಣದ ಅಂಗವಾಗಿ ಪ್ರತಿ ಜಿಲ್ಲೆಗೆ ಎರಡು ಸ್ವತ್ಛ ಸಂಕೀರ್ಣ ಕೇಂದ್ರಗಳನ್ನು ಸ್ಥಾಪಿಸಿ ಮಾದರಿಯಾಗಿ ಕಸ ವಿಲೇವಾರಿ ಮಾಡಲು ಮುಂದಾಗಿದ್ದು, ಸ್ವತ್ಛತಾ ಕಾರ್ಯಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.

ಗ್ರಾಪಂ ಸೂಚನೆ ಪಾಲಿಸಿ: ಮಹಾತ್ಮಾ ಗಾಂಧೀಜಿಯವರು ಅಹಿಂಸಾ ಮಾರ್ಗದ ಜೊತೆಗೆ ವೈಯಕ್ತಿಕ ಸ್ವಚ್ಛತೆಯ ಕಡೆಗೆ ಹೆಚ್ಚು ಒಲವು ಹೊಂದಿದ್ದರು.ಈನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಸಮುಕ್ತ ಮಾಡುವ ಉದ್ದೇಶದಿಂದ ಅ.2 ರಂದು ಗಾಂಧೀಜಿಯವರ ಹುಟ್ಟುಹಬ್ಬದ ಅಂಗವಾಗಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಸ್ವತ್ಛತೆ ಮಾಸಾಚರಣೆಯಲ್ಲಿ ವೈಯಕ್ತಿಕ ಸ್ವಚ್ಛತೆ, ಶೌಚಾಲಯ ಬಳಕೆ, ಹಸಿಕಸ, ಒಣ ಕಸ ವಿಂಗಡಣೆ ಹಾಗೂ ಕೆುಕಲ್‌ ಕಸ ವಿಲೇವಾರಿ ಬಗ್ಗೆ ಒತ್ತು ಕೊಡಲಾಗುವುದು.ಈಬಗ್ಗೆ ಗ್ರಾಪಂ ನೀಡುವ ಸೂಚನೆಗಳನ್ನು ಸಾರ್ವಜನಿಕರು ಪಾಲಿಸಿ ಸಹಕಾರ ನೀಡಬೇಕು ಎಂದರು.

ಪಿಡಿಒಗೆ ಸಲಹೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಮುಖ್ಯವಾಗಿ ಇ-ಸ್ವತ್ತು ಖಾತೆ ಬಗ್ಗೆ ಸಾಕಷ್ಟು ದೂರುಗಳು ಬರುತ್ತವೆ. ಇ-ಸ್ವತ್ತು  ಮಾಡಲು ಮುಖ್ಯವಾಗಿ ಸಾಕಷ್ಟು ದಾಖಲೆಗಳು ಅಗತ್ಯವಾಗಿವೆ. ಇದರ ಬಗ್ಗೆಯೂ ಹೆಚ್ಚಿನ ದೂರು ಬರುವುದು ಸಹಜವಾಗಿದ್ದರೂ ಸಹ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಿಮಿಸಿದ್ದರೂ ಸಹ ದೃತಿಗೆಡದೇ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿ ಕೊಡಿ. ಇ-ಸ್ವತ್ತು ಯಾವುದೇ ಸಮಸ್ಯೆ ಇದ್ದರೂ ಸಹ ತಾಪಂ ಇಒ ಬಳಿ ಅಥವಾ ನನ್ನ ಬಳಿ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿ ಸೂಕ್ತ ಆದೇಶ ಮಾಡಲಾಗುವುದು ಎಂದು ಪಿಡಿಒ ವಿ.ಚಿತ್ರಾ ಅವರಿಗೆ ಸಲಹೆ ನೀಡಿದರು.

ಗ್ರಾಪಂಗಳಿಗೆ ಹೊಣೆ: ಗ್ರಾಪಂಗಳಲ್ಲಿ ಮುಖ್ಯವಾಗಿ ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಹಾಗೂ ಸ್ವಚ್ಛತೆ, ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಸರ್ಕಾರದಲ್ಲಿ ಆಗಬೇಕಾದ ಬಹುತೇಕ ಕೆಲಸಗಳನ್ನು ಗ್ರಾಪಂಗಳಿಗೆ ಹೊಣೆ ಮಾಡಿರುವುದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಗಿಂದಾಗ್ಗೆ ವಿಲೇವಾರಿ ಮಾಡಿ, ಪಡಿತರ ಚೀಟಿಗಳ ಸಮಸ್ಯೆಯನ್ನು ಗ್ರಾಪಂ ಅಧಿಕಾರಿಗಳು ತುರ್ತಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ ಅವರು, ಈ ಎಲ್ಲಾ ಸಮಸ್ಯೆಗಳಿಗೆ ತಾಪಂ ಇಒ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಹಕಾರ ಪಡೆದುಕೊಂಡು ನಿರ್ವಹಣೆ ಮಾಡುವಂತೆ ಕರೆ ನೀಡಿದರು.

ಜಿಪಂ ಉಪ ಕಾರ್ಯದರ್ಶಿ ಆರ್‌.ಸಂಜೀವಪ್ಪ, ಜಿಪಂ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಪಂ ಸಹಾಯಕ ಕಾರ್ಯದರ್ಶಿ ವೆಂಕಟಾಚಲಪತಿ, ಸಹಾಯಕ ಯೋಜನಾ ನಿರ್ದೇಶಕ ಗೋವಿಂದೇಗೌಡ, ವಸಂತ್‌ಕುಮಾರ್‌, ತಾಪಂ ಇಒ ಎನ್‌.ವೆಂಕಟೇಶಪ್ಪ, ಕೆಜಿಎಫ್ ಇಒಬಿ.ಎಂ.ಮಂಜುನಾಥ್‌, ಮಾಲೂರು ಇಒ ಕೃಷ್ಣಪ್ಪ, ಕೋಲಾರ ಇಒ ಬಾಬು, ಪಂಚಾಯತ್‌ ರಾಜ್‌ ಇಲಾಖೆಯ ಪ್ರಭಾರಿ ಇಇ ಹೆಚ್‌.ಡಿ.ಶೇಷಾದ್ರಿ, ಸಹಾಯಕಎಂಜಿನಿಯರ್‌ ರವಿಚಂದ್ರನ್‌, ಎಸ್‌ಬಿಎಂ ಜಿಲ್ಲಾ ಸಮಾಲೋಚಕ ಕೆ.ವಿ.ಜಗದೀಶ್‌, ಚಿಕ್ಕಅಂಕಡಂಹಳ್ಳಿ ಪಿಡಿಒ ವಿ.ಚಿತ್ರಾ, ಹುಲಿಬೆಲೆ ಶ್ರೀನಿವಾಸ್‌ರೆಡ್ಡಿ, ಬಲಮಂದೆ ಮಧುಚಂದ್ರ, ಡಿ.ಕೆ. ಹಳ್ಳಿ, ವಂಸಂತ್‌ಕುಮಾರ್‌, ಮಾಗೊಂದಿ ಶಂಕರ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.