ನೀವು ಮತ ನೀಡಿದ ಶಾಸಕರೇನು ಮಾಡಿದ್ದಾರೆ ಪ್ರಶ್ನಿಸಿ

Team Udayavani, Apr 4, 2023, 11:11 AM IST

tdy-13

ಕೋಲಾರ: ಅಧಿಕಾರವಿಲ್ಲದಿದ್ದರೂ ನಗರದ ಮುನೇಶ್ವರ ನಗರ ಬಡಾವಣೆ ಅಭಿವೃದ್ಧಿಗೆ ಸರ್ಕಾರದಿಂದ 50ಲಕ್ಷ ಅನುದಾನ ತಂದಿದ್ದೇನೆ. ಆದರೆ, ಕಳೆದ 5 ವರ್ಷಗಳಿಂದ ಶಾಸಕರಾಗಿದ್ದವರು ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಮತ ಕೇಳಲು ಬರುವ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನವರನ್ನು ಪ್ರಶ್ನಿಸಿ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್‌ ಕರೆ ನೀಡಿದರು.

ನಗರದ ಮುನೇಶ್ವರ ಬಡಾವಣೆಯಲ್ಲಿ ವಾರ್ಡಿನ ಕುಂದು ಕೊರತೆಗಳನ್ನು ವೀಕ್ಷಿಸಿ ಮಾತ ನಾಡಿದ ಅವರು, ನೀವು ಮತಕೊಟ್ಟು ಗೆಲ್ಲಿಸಿದ ಶಾಸಕ ಶ್ರೀನಿವಾಸಗೌಡರು ಜೆಡಿಎಸ್‌ನಿಂದ ಗೆದ್ದು ಇದೀಗ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದಾರೆ. ಅವರು ಕಳೆದ ಚುನಾವಣೆಯಲ್ಲಿ ಮಾಡಿದ 16 ಕೋಟಿ ಸಾಲ ಹೇಗೆ ತೀರಿಸೋದು ಎಂದು ಸ್ವತಃ ಅವರೇ ಹೇಳಿರುವ ಆಡಿಯೋ ವೈರಲ್‌ ಆಗಿರುವುದನ್ನು ನೀವು ಕೇಳಿದ್ದೀರಿ ಎಂದರು.

ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ಈ ಬಾರಿಯೂ ನೀವು ಜೆಡಿಎಸ್‌ ಅಥವಾ ಕಾಂಗ್ರೆಸ್‌ಗೆ ಮತ ನೀಡಿದರೆ ನಿಮ್ಮ ಬಡಾವಣೆಯ ಅಭಿವೃದ್ಧಿಯ ಮಾತು ಕನಸಾಗಲಿದೆ ಎಂಬುದನ್ನು ಅರಿತು, ಬಿಜೆಪಿಗೆ ಮತ ನೀಡಿ. ಈ ಭಾಗದ ಅಭಿವೃದ್ಧಿಗೆ ನಿಮಗೆ ಮಾತು ಕೊಡುಗೆ ಎಂದರು.

ಗ್ರಾಮೀಣ ಪ್ರದೇಶ ಮತ್ತು ನಗರವನ್ನು ಈಗಿನ ಶಾಸಕರು ನಿರ್ಲಕ್ಷಿಸಿದ್ದಾರೆ, ನಾನು ಕಳೆದ 10 ವರ್ಷಗಳ ಕಾಲ ನಗರದಲ್ಲಿ ಅಭಿವೃದ್ಧಿ ಕಾರ್ಯ ಗಳನ್ನು ಮಾಡಿದ್ದೇನೆ, ಕಾರಣಾಂತರಗಳಿಂದ ಕಳೆದ ಬಾರಿ ಸೋತಿದ್ದೇನೆ. ಈ ಬಾರಿ ನನಗೆ ಆಶೀರ್ವಾದ ಮಾಡಿ, ಮತ್ತೆ ನಿಮ್ಮ ಆಶಯದಂತೆ ಅಭಿವೃದ್ಧಿಗೆ ಮುಂದಾಗುವೇ ಎಂದು ಮನವಿ ಮಾಡಿದರು.

ನಗರ ಅಭಿವೃದ್ಧಿ ಪಡಿಸುವಲ್ಲಿ ಈಗಿನ ಶಾಸಕರು ಅಸಮರ್ಥರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಗರಾಭಿವೃದ್ಧಿ ಸಚಿವರಿಂದ ನಗರಗಳನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅನುದಾನ ನೀಡಿದ್ದಾರೆ.ಅನುದಾನ ತಂದು ನಗರ ಅಭಿವೃದ್ಧಿ ಮಾಡುವಲ್ಲಿ ಈಗಿನ ಶಾಸಕರು ಅಸಮರ್ಥರಾಗಿದ್ದಾರೆ ಎಂದು ಟೀಕಿಸಿದ ಅವರು, ಯಾವುದೇ ರೀತಿಯ ಅಧಿಕಾರವಿಲ್ಲದಿದ್ದರೂ ನಾನು ಕೋಲಾರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಈ ನಿಟ್ಟನಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಇದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ ಎಂದು ತಿಳಿಸಿದರು.

ಮುಖಂಡರಾದ ಬೆಗ್ಲಿ ಸೂರ್ಯ ಪ್ರಕಾಶ್‌, ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್‌. ವೆಂಕಟೇಶ್‌, ಮಾಜಿ ಸದಸ್ಯರಾದ ಅರುಣ್‌ ಪ್ರಸಾದ್‌,ಬಂಕ್‌ ಮಂಜುನಾಥ್‌, ತಾಲೂಕು ಅಧ್ಯಕ್ಷ ರಾಮಚಂದ್ರಗೌಡ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್‌ ಕುಮಾರ್‌, ರೈತ ಘಟಕದ ಅಧ್ಯಕ್ಷ ಮಂಜುನಾಥ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.