“ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲಿ’


Team Udayavani, Sep 3, 2017, 3:31 PM IST

kol.jpg

ಕೋಲಾರ: ಅಪೌಷ್ಟಿಕತೆ, ರಕ್ತಹೀನತೆ, ಅವಧಿ ಪೂರ್ವಪ್ರಸವ ಮತ್ತಿತರ ಕಾರಣಗಳಿಂದ ಸಂಭವಿಸುವ ಶಿಶು ಮರಣವನ್ನು ತಡೆಯಲು ಸರ್ಕಾರದ ಯೋಜನೆಗಳು ಅರ್ಹರಿಗೆ ಸಮಪರ್ಕವಾಗಿ ತಲುಪುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌.ಮಹಾಲಕ್ಷ್ಮೀ ನೇರಳೆ ಹೇಳಿದರು. ತಾಲೂಕಿನ ಮದನಹಳ್ಳಿ ಕ್ರಾಸ್‌ನಲ್ಲಿನ ಮೋರಾರ್ಜಿ ದೇಸಾಯಿ ಸನಿವಾಸ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಪೌಷ್ಟಿಕತಾ ಸಪ್ತಾಹದ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ಧತಿಯಿಂದ ಅನೇಕ ಕಾಯಿಲೆಗಳು ಹುಡುಕಿಕೊಂಡು ಬರುತ್ತಿವೆ. ಜನಿಸುವ ಮಕ್ಕಳಲ್ಲಿ ಅಂಗ ನ್ಯೂನತೆ, ಅಪೌಷ್ಟಿಕತೆ ತಡೆಯಲು ತಾಯಂದಿರಿಗೆ ಆರೋಗ್ಯ ರಕ್ಷಣೆಯ ಮಹತ್ವ ತಿಳಿಸಿಕೊಡಬೇಕು. ಸರ್ಕಾರದ ಸೌಲಭ್ಯಗಳನ್ನು ಕಾಲಕ್ಕೆ ಸರಿಯಾಗಿ ತಲುಪಿಸಬೇಕೆಂದು ಹೇಳಿದರು.

ಯೋಜನೆಗಳ ಸಮರ್ಪಕ ಜಾರಿ ಅಗತ್ಯ: ಬದುಕುವ ಹಕ್ಕು ಎಲ್ಲರಿಗೂ ಇದೆ. ಈ ಅಮೂಲ್ಯ ಹಕ್ಕಿಗೆ ಚ್ಯುತಿ ಬಾರದಂತೆ ಕಾಪಾಡುವ ಹೊಣೆಯೂ ಸರ್ಕಾರ ಮತ್ತು ಸಮಾಜದ ಮೇಲಿದೆ. ಸರ್ಕಾರ ಯೋಜನೆ ಜಾರಿಗೆ ತಂದಿದ್ದೇವೆ ಎಂದರೆ ಪ್ರಯೋಜನವಾಗದು. ಆ ಯೋಜನೆ ಸಮುದಾಯಕ್ಕೆ ತಲುಪಿದೆಯೇ, ಎಲ್ಲಿ ಲೋಪಗಳಿವೆ ಎಂಬ ಬಗ್ಗೆ ಅಧ್ಯಯನ ನಡೆಸಬೇಕಾದ ಅಗತ್ಯವೂ ಇದೆ ಎಂದು ಅಭಿಪ್ರಾಯಪಟ್ಟರು. ಆರೋಗ್ಯ ಇಲಾಖೆ ಶಿಕ್ಷಣ ಅಧಿಕಾರಿ ಪ್ರಸನ್ನ ಮಾತನಾಡಿ, ಗರ್ಭಿಣಿಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯುವ ಕುರಿತು ಮಾಹಿತಿ ನೀಡಿದರು. ಬಿಇಒ ರಘುನಾಥರೆಡ್ಡಿ, ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಅಗತ್ಯವಿದೆ. ಮುಂದಿನ ಸಮಾಜದ ಆಸ್ತಿಯಾಗಿರುವ ಮಕ್ಕಳಿಗೆ ಬಿಸಿಯೂಟದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಸ್ವತ್ಛತೆ, ಶುಭ್ರತೆಯ ಪಾಠ ಕಲಿಸಿ: ವಿಷಯ ಪರಿವೀಕ್ಷಕ ಸಿ.ಆರ್‌.ಅಶೋಕ್‌, ಮಕ್ಕಳಿಗೆ ಶಿಕ್ಷಣದ
ಜತೆಗೆ ಸ್ವತ್ಛತೆ, ಶುಭ್ರತೆಯ ಪಾಠ ಕಲಿಸಿದರೆ ಅದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ. ಉತ್ತಮ ಆಹಾರ ನೀಡಿದರೆ ಸಾಲದು, ಅದರ ಶುಭ್ರತೆಯೂ ಅಷ್ಟೇ ಮುಖ್ಯ ಎಂದರು.ರೋಟರಿ ಸಂಸ್ಥೆ ಅಧ್ಯಕ್ಷ ದೇವರಾಜ್‌, ರೋಟರಿ ಸಂಸ್ಥೆಯಿಂದ ಸರ್ಕಾರಿ ಶಾಲೆಗಳಿಗೆ ಶುದ್ಧ ನೀರಿನ ಘಟಕ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸಮುದಾಯದ ಸೇವೆ ನಮ್ಮ ಗುರಿಯಾಗಿದ್ದು, ಶಾಲೆ, ಶಿಕ್ಷಣಕ್ಕೆ ನೆರವಾಗಲು ಒತ್ತು ನೀಡಲಾಗುತ್ತಿದೆ ಎಂದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಯಣ್ಣ, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗ‌ಳಲ್ಲೂ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಾಗಿದೆ. ಗುಣಮಟ್ಟದ ಆಹಾರ ನೀಡಿಕೆಗೆ ಗಮನ ಹರಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ದೈನಂದಿನ ಬದುಕಿನಲ್ಲಿ ಅನುಸರಿಸಲೇಬೇಕಾದ ಜೀವನಾಂಶಕ ಸರಳ
ಕಾನೂನುಗಳ ಕುರಿತು ವಕೀಲರ ಸಂಘದ ಅಧ್ಯಕ್ಷ ಸಿ. ರಾಮಕೃಷ್ಣ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ಮೊರಾರ್ಜಿ ದೇಸಾಯಿ ಸನಿವಾಸ ವಸತಿ ಶಾಲೆಯ ಪ್ರಿನ್ಸಿಪಾಲ್‌ ಜಿ.ಆರ್‌.ಶಂಕರೇಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಆರ್‌. ಶ್ರೀನಿವಾಸನ್‌ ಮತ್ತಿತರರು ಹಾಜರಿದ್ದರು. ಶಾಲಾ ಮಕ್ಕಳು ಪ್ರಾರ್ಥಿಸಿ, ಶಿಕ್ಷಕ ಶ್ರೀಕಾಂತ್‌ ನಿರೂಪಿಸಿ, ಶಿಕ್ಷಕಿ ಚೇತನಾ ವಂದಿಸಿದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.