ಗ್ರಾಪಂ ಮೀಸಲು ಪ್ರಕಟ: ಆಕಾಂಕ್ಷಿಗಳಿಂದ ಲಾಬಿ

Team Udayavani, Jun 24, 2023, 3:59 PM IST

tdy-15

ಬೇತಮಂಗಲ: ಕೆಜಿಎಫ್ ತಾಲೂಕಿನ 16 ಗ್ರಾಪಂಗಳ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪ್ರಕಟಗೊಳ್ಳುತ್ತಿದ್ದಂತೆ, ಆಕಾಂಕ್ಷಿತರು ಸದ್ದಿಲ್ಲದೆ ತಮ್ಮ ಮುಖಂಡರೊಂದಿಗೆ ಲಾಭಿ ನಡೆಸುತ್ತಿದ್ದು, ಸದಸ್ಯರಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಗಲ್ಲಿ ಗಲ್ಲಿಯಲ್ಲೂ ತಮ್ಮ ಪಂಚಾಯಿತಿಗಳ ದರ್ಬಾರ್‌ ಗಳದ್ದೆ ಬಿಸಿ ಬಿಸಿ ಚರ್ಚೆಯಾಗಿದೆ.

ತಾಲೂಕಿನಲ್ಲೇ ಅತಿ ಹೆಚ್ಚು (27) ಸದಸ್ಯರ ನ್ನೊಳಗೊಂಡಿರುವ ಬೇತಮಂಗಲ ಗ್ರಾಪಂಗೆ ಅಧ್ಯಕ್ಷ ಸ್ಥಾನವು 20 ವರ್ಷಗಳ ನಂತರ ಸಾಮಾನ್ಯ ಮೀಸಲು ಪ್ರಕಟಗೊಂಡಿದ್ದು, ತಾಲೂಕಿನಲ್ಲೇ ಅತಿ ಹೆಚ್ಚು ತೆರಿಗೆ ವಸೂಲಿ ಸೇರಿದಂತೆ ಹಿಂದೆ ವಿಧಾನ ಸಭಾ ಕ್ಷೇತ್ರವಾ ಗಿದ್ದ ಬೇತಮಂಗಲವು 10 ವರ್ಷಗಳ ಹಿಂದೆಯೇ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಬೇಕಿತ್ತು. ಗ್ರಾಪಂನ ಬಹುತೇಕ ಸದಸ್ಯರು ಕಾಂಗ್ರೆಸ್ಸಿಗರು: 2021ರ ಅವಧಿಯಲ್ಲಿ ಗೆದ್ದ ಗ್ರಾಪಂ ಸದಸ್ಯರಲ್ಲಿ ಬಹುತೇಕ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಾಗಿದ್ದು, ಗ್ರಾಪಂ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಬಿಜೆಪಿ ಅಧ್ಯಕ್ಷರೇ ಆಯ್ಕೆಯಾಗಿದ್ದರು. ಆದರೆ, ಎರಡೂವರೆ ವರ್ಷದ ನಂತರ ನೂತನ ಅಧ್ಯಕ್ಷ ಗಾದಿಯನ್ನು ಕಾಂಗ್ರೆಸ್‌ ಬೆಂಬಲತರೇ ಆಯ್ಕೆಯಾಗುವುದಲ್ಲಿ ಸಂಶಯವಿಲ್ಲ.ಇತ್ತೀಚಿಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಹುತೇಕ ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ವರದಾನ.

ಮೀಸಲು ಪ್ರಕಟಗೊಳ್ಳುತ್ತಿದ್ದಂತೆ ಲೆಕ್ಕಾಚಾರ ಶುರು: ಬೇತಮಂಗಲ ಗ್ರಾಪಂಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮೀಸಲಾತಿ ಪ್ರಕಟಗೊಂ ಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತರಾದ ಡೇರಿ ಮಂಜುನಾಥ್‌, ವಿನೂ ಕಾರ್ತಿಕ್‌, ಇನಾಯತ್‌ ವುಲ್ಲಾ, ಏಜಾಜ್‌ ಪಾಷ, ಸುರೇಂದ್ರಗೌಡ ನಡುವೇ ಸ್ಫರ್ಧೆಗೆ ಪೈಪೋಟಿ ಏರ್ಪಟ್ಟಿದ್ದು, ಶಾಸಕಿ ಎಂ. ರೂಪಕಲಾ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರ ಒಲವು ಯಾರ ಕಡೆ ಎಂಬುದು ನಿಗೂಢವಾಗಿದೆ. ಈಗಾಗಲೇ ಆಕಾಂಕ್ಷಿ ತರು ತಮ್ಮನ್ನೇ ಆಯ್ಕೆ ಮಾಡಬೇಕೆಂದು ಒತ್ತಡ ಹಾಕುತ್ತಿದ್ದಾರೆಂದು ತಿಳಿದು ಬಂದಿದೆ.

ಗ್ರಾಪಂ ಸದಸ್ಯರಾದ ಡೇರಿ ಮಂಜುನಾಥ್‌ ಸತತ ವಾಗಿ 4 ಬಾರಿಗೆ ಆಯ್ಕೆಯಾಗಿದ್ದು, ಹಿರಿಯ ಸದಸ್ಯರಾಗಿದ್ದು, ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಳೆದ ಜಿಪಂ-ತಾಪಂ ಚುನಾವಣೆಯಲ್ಲಿ ತಾಪಂಗೆ ಭಿ.ಫಾರಂ ಕೇಳಿದ್ದರು, ಆದರೆ ಅವಕಾಶ ದೊರಕಿಲ್ಲ ಈ ಬಾರಿ ಗ್ರಾಪಂ ಅಧ್ಯಕ್ಷರನ್ನಾಗಿ ಪಕ್ಷ ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ತಿಳಿಸಿದ್ದಾರೆ.

ಆಕಾಂಕ್ಷಿಗಳಿಂದ ಮುಖಂಡರಿಗೆ ಮನವಿ: ಗ್ರಾಪಂ ಸದಸ್ಯ ವಿನೂ ಕಾರ್ತಿ ಸತತವಾಗಿ 2ಬಾರಿಗೆ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಪಕ್ಷದ ಬಲವರ್ಧನೆಗೆ ಬೂತ್‌ ಮಟ್ಟದಿಂದ ಶ್ರಮಿಸಿದ್ದೇನೆ. ವಿಧಾನ ಸಭಾ ಚುನಾವಣೆಯಲ್ಲಿಯೂ ಸಹ ಶಾಸಕರ ಪರವಾಗಿ ಕ್ಷೇತ್ರದ್ಯಾಂತ ಪಕ್ಷ ಸಂಘಟಿಸಿ ಬಡವರ ಶ್ರಮಿಕರ ಪರವಾಗಿ ದುಡಿದಿದ್ದೇನೆ. ಯುವಕನಾಗಿ, ವಿದ್ಯಾವಂತ ನಾಗಿ ಬೇತಮಂಗಲ ಗ್ರಾಪಂನ್ನು ಮಾದರಿ ಮಾಡಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ಗ್ರಾಪಂ ಇನಾಯತ್‌ ವುಲ್ಲಾ, ಹಿಂದೆ ಜಿಪಂ ಉಪಾಧ್ಯಕ್ಷರಾಗಿ, ಗ್ರಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿದೆ, ಹಿರಿಯ ಸದಸ್ಯನಾಗಿ ತಮಗೆ ಮತ್ತೂಮ್ಮೆ ಅವಕಾಶ ಕಲ್ಪಿಸಿದರೆ ಬೇತಮಂಗಲವನ್ನು ಪಟ್ಟಣ ಪಂಚಾಯಿತಿಯಾಗಿ ಮಾಡಲು ಪ್ರಾಮಾಣಿಕ ವಾಗಿ ಶ್ರಮಿಸುತ್ತೇನೆ ಎಂದು ಮುಖಂಡರಿಗೆ ಮನವಿ ಮಾಡಿದ್ದಾರೆ.

ಬೇತಮಂಗಲದಲ್ಲಿ ಹೆಚ್ಚು ತೆರಿಗೆ ವಸೂಲಿ ಸೇರಿದಂತೆ ಹಲವು ಹಣ ಸಂಗ್ರಹ ಮೂಲಗಳಿದ್ದು, ಕೈಗಾರಿಕೆಗಳು, ವಸತಿ ಸೌಕರ್ಯಗಳು, ಕಸ ವಿಲೇವಾರಿ ಘಟಕ ಸೇರಿ ಹಲವು ಮೂಲ ಸೌಕರ್ಯಗಳನ್ನು ಈಡೇರಿ ಸುವವರು ಅಧ್ಯಕ್ಷರಾಗಬೇಕೆಂದು ಗ್ರಾಮಸ್ಥರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕೆಜಿಎಫ್‌ ತಾಲೂಕಿನ ಒಟ್ಟು 16 ಎಲ್ಲಾ ಗ್ರಾಪಂ ಅಧ್ಯಕ್ಷ -ಉಪಾಧ್ಯಕ್ಷರ ಸ್ಥಾನಗಳಲ್ಲಿಯೂ ಕಾಂಗ್ರೆಸ್‌ ಬೆಂಬಲಿತರೇ ಮೇಲುಗೈ ಸಾಧಿಸಲಿದ್ದಾರೆ. ರಾಜ್ಯದಲ್ಲಿ ಯೂ ನಮ್ಮದೇ ಸರ್ಕಾರವಿದ್ದು ಮತ್ತಷ್ಟು ಶಕ್ತಿ ಬಂದಿದೆ. ಆಕಾಂಕ್ಷಿತರೆಲ್ಲರೂ ಒಗ್ಗಟ್ಟಿ ನಿಂದ ಇದ್ದು, ಪಕ್ಷದ, ಮುಖಂಡರು, ಶಾಸಕರ ತಿರ್ಮಾನ ದಂತೆ ನಡೆದುಕೊಳ್ಳಲು ಸೂಚಿಸಲಾಗುವುದು. -ರಾಧಾಕೃಷ್ಣ ರೆಡ್ಡಿ, ಬೇತಮಂಗಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು

-ಆರ್‌.ಪುರುಷೋತ್ತಮ ರೆಡ್ಡಿ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.