ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಬೆಂಬಲ


Team Udayavani, Jul 27, 2020, 8:43 AM IST

ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಬೆಂಬಲ

ಕೋಲಾರ: ಕೋವಿಡ್ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಸೂಚಿಸಿರುವ ಭಾನುವಾರದ ಲಾಕ್‌ಡೌನ್‌ಗೆ ಜಿಲ್ಲೆಯ ಜನ ಸ್ಪಂದಿಸಿದ್ದು, ಆಟೋ, ಬಸ್‌ಗಳ ಸಂಚಾರ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್‌ ಆಗಿದ್ದವು. ಜನರು ಸಹ ರಸ್ತೆಗಿಳಿಯದೇ ಮನೆಯಲ್ಲೇ ಉಳಿದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿದರು.

ಕೋಲಾರ ಜಿಲ್ಲೆಯಲ್ಲೂ ಕೋವಿಡ್ ಸೋಂಕಿತರ ಸಂಖ್ಯೆ 900ರ ಗಡಿ ದಾಟಿದೆ. ಎಲ್ಲಿ ನೋಡಿದರೂ ಕೋವಿಡ್ ವೈರಸ್‌ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಜನತೆಯಲ್ಲೂ ಕೋವಿಡ್ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜನರು ಭಾನುವಾರದ ಲಾಕ್‌ಡೌನ್‌ಗೆ ಬೆಂಬಲ ವ್ಯಕ್ತಪಡಿಸಿದರು.

ಕೋವಿಡ್ ಮಾರಕತೆ ಅರಿತಿರುವ ಜನತೆ ಭಾನುವಾರ ಬೆಳಗ್ಗೆ ಮನೆಬಿಟ್ಟು ಹೊರ ಬರಲೇ ಇಲ್ಲ, ನಗರದ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿದ್ದು, ಅಂಗಡಿ, ಮುಂಗಟ್ಟು ಗಳು, ಹೋಟೆಲ್‌, ರಸ್ತೆ ಬದಿ ವ್ಯಾಪಾರ, ಚಿತ್ರಮಂದಿರಗಳು ಸಂಪೂರ್ಣ ಬಂದ್‌ ಆಗಿತ್ತು. ನಗರದ ಸದಾ ಜನನಿಬಿಡ ಎಂ.ಜಿ. ರಸ್ತೆ, ದೊಡ್ಡಪೇಟೆ, ಕಾಳಮ್ಮನ ಗುಡಿ ಬೀದಿ, ಅಮ್ಮವಾರಿಪೇಟೆ, ಬಸ್‌ನಿಲ್ದಾಣ ವೃತ್ತಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ಮಾಂಸದಂಗಡಿ ಕೂಡ ಬಂದ್‌: ಶ್ರಾವಣ ಮಾಸದಲ್ಲಿ ಮಾಂಸದೂಟ ಮಾಡದ ಕಾರಣ ವಹಿವಾಟು ನಡೆಯದ ಹಿನ್ನೆಲೆಯಲ್ಲಿ ಮಾಂಸದ ಅಂಗಡಿಗಳು ವಿರಳವಾಗಿ ತೆರೆದಿದ್ದರೂ ವ್ಯಾಪಾರದ ಜೋರು ಇರಲಿಲ್ಲ. ಹೀಗಾಗಿ ಬಹುತೇಕ ಅಂಗಡಿಗಳು ಬಂದ್‌ ಆಗಿದ್ದವು. ಹಾಲು, ಔಷಧಿಗಳ ದಿನಸಿ ಅಂಗಡಿ ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಂದ್‌ ಆಗಿತ್ತು. ದಿನಸಿ ಅಂಗಡಿಗಳನ್ನು ಸಹಾ ಮಧ್ಯಾಹ್ನ 11 ಗಂಟೆಯ ನಂತರ ಪೊಲೀಸರು ಮುಚ್ಚಿಸಿದರು.

ಬಸ್‌, ವಾಹನಗಳ ಓಡಾಟ ನಿಷೇಧ: ಸಾರಿಗೆ ಸಂಸ್ಥೆ ಬಸ್‌ಗಳನ್ನು ರಸ್ತೆಗಿಳಿಸದ ಕಾರಣ ನಗರದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಲ್ಲದೇ ಖಾಲಿಯಾಗಿತ್ತು. ಇಡೀ ನಗರದಲ್ಲಿ ಆಟೋ ಸಂಚಾರವೂ ರದ್ದಾಗಿತ್ತು. ಭಾನುವಾರವಾದ್ದರಿಂದ ಸರ್ಕಾರಿ ಕಚೇರಿ ಗಳು ಬಂದ್‌ ಆಗಿತ್ತು. ದ್ವಿಚಕ್ರ ವಾಹನಗಳು ಅಲ್ಲೊಂದು,ಇಲ್ಲೊಂದು ಓಡಾಡಿದ್ದು ಬಿಟ್ಟರೆ ನಗರದಲ್ಲಿ ಯಾವುದೇ ವಾಹನ ಸಂಚಾರ ಕಂಡು ಬರಲೇ ಇಲ್ಲ. ಅಲ್ಲಲ್ಲಿ ಮೆಡಿಕಲ್‌ ಸ್ಟೋರ್, ಹಾಲಿನ ಬೂತ್‌ ತೆರೆದಿದ್ದು ಕಂಡು ಬಂತಾದರೂ ಜನರಿಲ್ಲದೇ 12 ಗಂಟೆ ವೇಳೆಗೆ ಅವೂ ಬಂದ್‌ ಆದವು. ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಎಂಬ ಖ್ಯಾತಿಗೆ ಕಾರಣವಾಗಿರುವ ಎಪಿಎಂಸಿ ಮಾರುಕಟ್ಟೆ ರೈತರ ಹಿತ ದೃಷ್ಟಿಯಿಂದ ಭಾನು ವಾರ ತನ್ನ ವಹಿವಾಟು ಮುಂದುವೆರಿಸಿತ್ತು. ಆದರೂ ಪ್ರತಿದಿನ ಇರುವ ಜನಸಂದಣಿ ಇಂದು ಕಂಡು ಬರಲಿಲ್ಲ. ಯಾವುದೇ ಬಂದ್‌, ಪ್ರತಿಭಟನೆಗೆ ಸ್ಪಂದಿಸದೇ ವಹಿ ವಾಟು ನಡೆಸುತ್ತಿದ್ದ ಕ್ಲಾಕ್‌ ಟವರ್‌ನ ವರ್ತಕರು, ಅಂಗಡಿಗಳವರು ಭಾನುವಾರ ಬಂದ್‌ ಮಾಡಿದ್ದರು.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

cracker

ಹೊರಬೀಳದ ಆದೇಶ, ಮುಗಿಯದ ಆತಂಕ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.