ಇಲ್ಲಿ ರೈಲ್ವೆ ಹಳಿ ದಾಟಲು 3 ಗಂಟೆ ಬೇಕು

ರೈಲ್ವೆ ಇಲಾಖೆ ಅವೈಜ್ಞಾನಿಕ ಕ್ರಮದಿಂದ ಸಂಚಾರ ದಟ್ಟಣೆ | ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ

Team Udayavani, Apr 26, 2019, 2:48 PM IST

kolAR-TDY-4..

ಬಂಗಾರಪೇಟೆ: ವಾಹನಗಳ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಪಟ್ಟಣದ ಬೂದಿಕೋಟೆ ರಸ್ತೆಗೆ ನೇರವಾಗಿದ್ದ ರೈಲ್ವೆ ಕ್ರಾಸಿಂಗ್‌ ಅನ್ನು ಬದಲಾವಣೆ ಮಾಡಲಾಗಿತ್ತು. ಇದರಿಂದ ವಾಹನ ದಟ್ಟಣೆ ಕಡಿಮೆಯಾಗಿಲ್ಲ.

ತಾಲೂಕಿನ ಹುಲಿಬೆಲೆ, ಆಲಂಬಾಡಿ ಜ್ಯೋತೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ದೊಡ್ಡದ್ಯಾವರ ಜಾತ್ರೆ ನಡೆಯುತ್ತಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇದರಿಂದ ರೈಲ್ವೆ ಕ್ರಾಸಿಂಗ್‌ ಬಳಿ 3 ಕಿ.ಮೀ.ವರೆಗೂ ಟ್ರಾಫಿಕ್‌ ಉಂಟಾಗುತ್ತಿದೆ. ವಾಹನ ಚಾಲಕರು ರೈಲ್ವೆ ಹಳಿ ದಾಟಲು 3 ಗಂಟೆ ಉರಿ ಬಿಸಿಲಿನಲ್ಲೇ ಕಾಯಬೇಕಿದೆ.

ಬಂಗಾರಪೇಟೆ-ಮಾಲೂರು ಮುಖ್ಯ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ಸೇರಿ ಭಾರೀ ತೂಕದ ವಾಹನಗಳು ಸೇಟ್ಕಾಂಪೌಂಡ್‌ ವಾರ್ಡ್‌ನಲ್ಲಿರುವ ರೈಲ್ವೆ ಕ್ರಾಸಿಂಗ್‌ ಬಳಿಯಲ್ಲೇ ರೈಲ್ವೆ ಹಳಿ ದಾಟಬೇಕು. ಬಿಸಿಲು ಹೆಚ್ಚಿರುವ ಕಾರಣ ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು, ಟ್ರಾಫಿಕ್‌ ಸಮಸ್ಯೆಯಲ್ಲಿ ಸಿಲುಕಿ ಮುಂದಕ್ಕೂ ಹೋಗದೆ, ಹಿಂದಕ್ಕೂ ಹೋಗಲಾಗದೇ ಸುಡು ಬಿಲಿಸಿನಲ್ಲೇ ಹೈರಾಣಾಗುತ್ತಿದ್ದಾರೆ.

ಪಟ್ಟಣದ ಬಸ್‌ ನಿಲ್ದಾಣದಿಂದ ಅರ್ಧ ಕಿ.ಮೀ. ದೂರದಲ್ಲಿ ಬಂಗಾರಪೇಟೆ-ಮಾಲೂರು ಮುಖ್ಯರಸ್ತೆಗೆ ಅಡ್ಡಲಾಗಿ ಕೋಲಾರ ರೈಲು ಮಾರ್ಗ ಹಾದು ಹೋಗಿದ್ದು, 3 ತಿಂಗಳಿಂದೀಚೆಗೆ ಈ ಟ್ರಾಫಿಕ್‌ ಸಮಸ್ಯೆ ಉಂಟಾಗಿದೆ. ರಸ್ತೆಯಲ್ಲಿ ಓಡಾಡುವ ವಾಹನ ಸವಾರರು 10 ಅಡಿಗಳ ರೈಲು ಮಾರ್ಗ ದಾಟಬೇಕಾದರೆ ಒಂದು ಕಿ.ಮೀ. ಯೂ-ಟರ್ನ್ ಮಾಡಿಕೊಂಡು ಬರಬೇಕಾಗಿದೆ.

ಪಟ್ಟಣದ ರೈಲು ನಿಲ್ದಾಣದಲ್ಲಿ ಕೋಲಾರ ಕಡೆಗೆ ಹೋಗುವ ರೈಲು ನಿಲ್ಲುವ ಪ್ಲಾಟ್ಫಾರಂ ಅನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಹಳಿ ದಾಟಲು ಇದ್ದ ಹಳೇ ಮಾರ್ಗ ಮುಚ್ಚಿ, ಸ್ವಲ್ಪ ದೂರದಲ್ಲಿ ಮತ್ತೂಂದು ಮಾರ್ಗ ಮಾಡಲಾಗಿದೆ. ಇದಕ್ಕಾಗಿ ರೈಲ್ವೆ ಹಳಿ ಪಕ್ಕದಲ್ಲೇ ಹೊಸದಾಗಿ ರಸ್ತೆ ನಿರ್ಮಿಸಿದ್ದು, ಅದು ಕಿರಿದಾಗಿರುವ ಕಾರಣ ಬಸ್‌, ಲಾರಿ, ಟಿಪ್ಪರ್‌ ಭಾರೀ ವಾಹನಗಳು ಬಂದರೆ ಅವು ರೈಲ್ವೆ ಹಳಿ ದಾಟುವವರೆಗೂ ಬೇರೇ ವಾಹನಗಳು ಗೇಟಿನ ಮುಂದೆ ಕಾಯಬೇಕಾದ ಪರಿಸ್ಥಿತಿ ಇದೆ. ಇದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗಲು ಪ್ರಮುಖ ಕಾರಣವಾಗಿದೆ.

ಮೊದಲು ಬಂಗಾರಪೇಟೆ-ಕೋಲಾರ ರೈಲು ಮಾರ್ಗವನ್ನು ಹಾದು ಹೋಗಲು 2ರಿಂದ 5 ಸೆಕೆಂಡ್‌ ಸಾಕಾಗಿತ್ತು. ಆದರೆ, ರೈಲ್ವೆ ಇಲಾಖೆ ಅವೈಜ್ಞಾನಿಕ ನೀತಿಯಿಂದ ರಸ್ತೆಯಲ್ಲಿ ಗಂಟೆ ಗಟ್ಟಲೆ ಕಾಯಬೇಕಿದೆ. ಮತ್ತೆ ಇದೇ ಮಾರ್ಗದಲ್ಲಿ ಅರ್ಧ ಕಿ.ಮೀ. ದೂರದಲ್ಲಿ ಬಂಗಾರಪೇಟೆ -ಬೆಂಗಳೂರು ಡಬ್ಬಲ್ ಟ್ರಾಕ್‌ನ ಗೇಟು ಇದ್ದು, ಇಲ್ಲಿಯೂ ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಪ್ರತಿ ಅರ್ಧ ಗಂಟೆಗೊಮ್ಮೆ ಗೇಟ್ ಹಾಕಲಾಗುತ್ತದೆ. ಪಟ್ಟಣದ ಬಸ್‌ ನಿಲ್ದಾಣದಿಂದ ಮಾಲೂರು ರಸ್ತೆ ಮಾರ್ಗವಾಗಿ ಒಂದು ಕಿ.ಮೀ. ಕ್ರಮಿಸುವ ದೂರಕ್ಕೆ 1 ರಿಂದ 2 ಗಂಟೆ ಕಾಯಬೇಕಾಗಿದೆ. ಶಾಲಾ ಮಕ್ಕಳು, ಉದ್ಯೋಗಸ್ಥರು, ರೈತರು, ದಿನಗೂಲಿ ಕಾರ್ಮಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಓಡಾಡುತ್ತಾರೆ. ರೈಲ್ವೆ ಅಧಿಕಾರಿಗಳು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ ಅನುಕೂಲ ಕಲ್ಪಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಸಿದ ಶಾಲೆ: ಮರದ ಕೆಳಗೆ ಮಕ್ಕಳಿಗೆ ಪಾಠ

ಕುಸಿದ ಶಾಲೆ: ಮರದ ಕೆಳಗೆ ಮಕ್ಕಳಿಗೆ ಪಾಠ

ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಅಧಿಕಾರಿಗಳ ಕಿರುಕುಳ: ಆತ್ಮಹತ್ಯೆಗೆ ರೈತರ ನಿರ್ಧಾರ

ಅಧಿಕಾರಿಗಳ ಕಿರುಕುಳ: ಆತ್ಮಹತ್ಯೆಗೆ ರೈತರ ನಿರ್ಧಾರ

Untitled-1

ಪತ್ರಕರ್ತರ ಹೊರಗಿಟ್ಟು ಕೆಡಿಪಿ ಸಭೆ ನಡೆಸಿದ ಸಚಿವ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

children

ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.