ಸರ್ಕಾರಿ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಿ

Team Udayavani, Oct 2, 2019, 4:54 PM IST

ಮುಳಬಾಗಿಲು: ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರ ನೇಮಕಾತಿಗಾಗಿ ಒತ್ತಾಯಿಸಿ ಡಿವೈಎಫ್ಎ ಯುವಜನ ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಬಿಇಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಡಿವೈಎಫ್ಎ ಜಿಲ್ಲಾ ಕಾರ್ಯದರ್ಶಿ ವಾಸು ದೇವರೆಡ್ಡಿ ಮಾತನಾಡಿ, ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 90ಕ್ಕಿಂತ ಹೆಚ್ಚು ಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆ ಇದೆ. ಪಾಠ ಪ್ರವಚನ ಸರಿಯಾಗಿ ನಡೆಯುತ್ತಿಲ್ಲ. ಗುಣಮಟ್ಟದ ಬೋಧನೆ ಸಿಗದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಡ, ದಲಿತ, ಹಿಂದುಳಿದ ಕೂಲಿಕಾರರ ಮಕ್ಕಳು ಓದುವ ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಎಂದು ದೂರಿದರು.

ಮನವಿ ಸ್ವೀಕರಿಸಿ ಮಾತನಾಡಿದ ಬಿಇಒ ಸೋಮೇಶ್‌, ಈಗಾಗಲೇ ಸರ್ಕಾರಕ್ಕೆ ಅಗತ್ಯ ಶಿಕ್ಷಕರ ನೇಮಕಾತಿ ಕೋರಿಮನವಿಯನ್ನು ಸಲ್ಲಿಸಲಾಗಿದೆ. ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ತಾಲೂಕಿನ ದೂಲಪಲ್ಲಿ ಗ್ರಾಪಂ ವ್ಯಾಪ್ತಿಯ ಗಡ್ಡಂಚಿನ್ನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗಾಗಿ ಮನವಿ ಸಲ್ಲಿಸಿದರು, ಇದಕ್ಕೆ ಸ್ಪಂದಿಸಿದ ಬಿಇಒ ಸೋಮೇಶ್‌, ತಕ್ಷಣವೇ ಗಡ್ಡಂಚಿನ್ನಹಳ್ಳಿ ಶಾಲೆಗೆ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಿ ಆದೇಶ ನೀಡಿದರು. ಸಂಘಟನೆಯ ದೂಲಪಲ್ಲಿ ವೆಂಕಟೇಶ್‌, ರಾಘವ, ಗಡ್ಡಂಚಿನ್ನಹಳ್ಳಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ