ವಸತಿ ಯೋಜನೆ: ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ

ಮೀನಮೇಷ ಎಣಿಸುತ್ತಿರುವುದರಿಂದ ಜಮೀನು ಖರೀದಿ ವಿಷಯವು ನೆನಗುದಿಗೆ ಬಿದ್ದಿದೆ.

Team Udayavani, Apr 7, 2022, 6:12 PM IST

ವಸತಿ ಯೋಜನೆ: ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ

ಕೋಲಾರ: ದೇವರು ವರ ಕೊಟ್ಟರೂ ಪೂಜಾರಿ ಕೊಡ ಎಂಬ ಗಾದೆ ಮಾತಿನಂತೆ ಆಶ್ರಯ ಯೋಜನೆ ಯಲ್ಲಿ ಸರ್ಕಾರ ಭೂಮಿ ಖರೀದಿಗೆ ಸೂಚಿಸಿದ್ದರೂ, ಸ್ಥಳೀಯ ಶಾಸಕರು ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ರವಾನಿಸುವಲ್ಲಿ ವಿಫಲರಾಗಿದ್ದಾರೆ ಎಂಬುದು ಆಶ್ರಯ ಸಮಿತಿ ಸದಸ್ಯ ಮುನಿರಾಜು, ಗೋವಿಂದರಾಜು, ವಿಜಯಲಕ್ಷ್ಮೀ ಹಾಗೂ ದಿಲೀಪ್‌ ಕುಮಾರ್‌ ಆರೋಪಿಸಿದರು.

ನಗರದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಆಶ್ರಯ ಸಮಿತಿಗೆ 4 ಮಂದಿಯನ್ನು ಸರ್ಕಾರ ನಾಮಕರಣ ಮಾಡಿ ಒಂದು ವರ್ಷದ ಮೇಲಾಗಿದ್ದರೂ, ಆಶ್ರಯ ಸಮಿತಿಗೆ ಅಧ್ಯಕ್ಷರಾದ ಶಾಸಕ ಕೆ. ಶ್ರೀನಿವಾಸಗೌಡರ ಇಚ್ಛಾ ಕೊರತೆಯಿಂದ ಈವರೆಗೆ ಒಂದು ಸಭೆಯನ್ನು ಕರೆದಿಲ್ಲ ಎಂದು ದೂರಿದರು.

ಇದರ ಜತೆಗೆ ನಗರ ಸಭೆ ಅಧ್ಯಕ್ಷರು, ಪೌರಾಯುಕ್ತರು, ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿಗಳು ಸಹ ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿ ಸಭೆ
ಕರೆಯಲು ಶಾಸಕರಿಗೆ ಹಲವಾರು ಬಾರಿ ನಾಮಕರಣ ಸದಸ್ಯರು ಮನವಿ ಮಾಡಿದ್ದರೂ, ಇಂದು, ನಾಳೆ ಎಂದು ಶಾಸಕರು ಸಭೆಯ ದಿನಾಂಕ ನಿಗದಿ ಪಡಿಸುವಲ್ಲಿ ವಿಫಲರಾಗಿ ದ್ದಾರೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಈ ಹಿಂದೆ ಅಂಬರೀಶ್‌ ವಸತಿ ಸಚಿವರಾಗಿದ್ದಾಗ ರಾಜೀವ್‌ ಗಾಂಧಿ ವಸತಿ ಯೋಜನೆ ಮತ್ತು ವಾಜಪೇಯಿ ವಸತಿ ಯೋಜನೆಯಲ್ಲಿ ಭೂಮಿ ಖರೀದಿಸಿ ಮನೆ ನಿರ್ಮಿಸಿ ಕೊಡಲು ವಸತಿ ರಹಿತರಿಗೆ ಅರ್ಜಿ ಕರೆಯಲು ಸೂಚಿಸಿದ್ದರು. ಆಗ ಅರ್ಜಿಗಳು
ಬಂದಿದ್ದವು. ಈ ಪೈಕಿ ಕಂದಾಯ ಅಧಿಕಾರಿಗಳು ಮತ್ತು ನಿರೀಕ್ಷಕರು ಅರ್ಜಿಗಳನ್ನು ಪರಿಶೀಲಿಸಿ ಮನೆ ಇಲ್ಲದವರ 3,470 ಅರ್ಜಿ ಆರ್ಹತೆ ಪಡೆದಿದೆ ಎಂದು ಗುರುತಿಸಲಾಗಿತ್ತು ಎಂದರು.

ಜಮೀನು ನೀಡಲು ಮುಂದಾಗಲಿಲ್ಲ: ಜಮೀನು ನೀಡಲು ನಗರ ಸುತ್ತಮುತ್ತ ಯಾವ ರೈತರು ಮುಂದೆ ಬರಲಿಲ್ಲ. ನಂತರದಲ್ಲಿ ಕೃಷ್ಣಪ್ಪನವರು ವಸತಿ ಸಚಿವರಾದ ಮೇಲೆ ಎಕರೆ ಜಮೀನಿಗೆ 15 ಲಕ್ಷದಿಂದ 22 ಲಕ್ಷಕ್ಕೆ ಏರಿಕೆ ಮಾಡಿ ನಿಗದಿ ಪಡಿಸಿದರು. ಬೆಂಗಳೂರಿಗೆ ಕೋಲಾರ ಸಮೀಪ ಇರುವುದರಿಂದ ಜಮೀನಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ನಿರೀಕ್ಷಿಸಿರುವ ರೈತರು ಜಮೀನು ನೀಡಲು ಯಾರೂ ಮುಂದಾಗಲಿಲ್ಲ ಎಂದರು.

ಈ ಸಂಬಂಧವಾಗಿ ವಸತಿ ಸಚಿವರಾಗಿದ್ದ ಸೋಮಣ್ಣ ಅವರಿಗೆ ವಸ್ತುಸ್ಥಿತಿ ವಿವರಿಸಿದಾಗ ಈ ಕುರಿತು ಸದನದ ಮುಂದೆ ಪ್ರಸ್ತಾವನೆ ಸಲ್ಲಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಬಿಲ್‌ ಪಾಸ್‌ ಮಾಡಿಸಿದ ನಂತರ ಯೋಜನೆಯನ್ನು ಅನುಷ್ಠಾನಕ್ಕೆ ತರಬಹುದಾಗಿದೆ ಎಂದು
ತೀರ್ಮಾನಿಸಲಾಯಿತು. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗೆ ಮತ್ತು ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಯಿತು. ಈ ಕುರಿತು ಜಿಲ್ಲಾಧಿಕಾರಿ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಪ್ರಸ್ತಾವನೆ ಸಲ್ಲಿಸದೆ ಮೀನಮೇಷ: ನಾವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು. ನಮ್ಮ ಅಧಿಕಾರ ಮೀರಿದ್ದು ಆಗಿದೆ ಎಂದು ಪ್ರಸ್ತಾವನೆಯನ್ನು ಸಲ್ಲಿಸದೆ ಮೀನಮೇಷ ಎಣಿಸುತ್ತಿರುವುದರಿಂದ ಜಮೀನು ಖರೀದಿ ವಿಷಯವು ನೆನಗುದಿಗೆ ಬಿದ್ದಿದೆ. ಈ ಕುರಿತು ಆಶ್ರಯ ಸಮಿತಿ ಸದಸ್ಯರು ಪ್ರತಿದಿನವು ನಗರಸಭೆಗೆ ಆಗಮಿಸಿ, ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ. ಮೊನ್ನೆ ಶಾಸಕರು ಬಜೆಟ್‌ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಪೌರಾಯುಕ್ತರು ಶಾಸಕರ ಗಮನ
ಸೆಳೆದಾಗ ನನಗೆ ಸ್ವಲ ಕೆಲಸವಿದೆ. 8 ದಿನ ಕಳೆದ ಮೇಲೆ ಯಾವೂದಾದರೂ ಶನಿವಾರ ಸಭೆ ನಿಗದಿ ಪಡಿಸಿ ಎಂದು ಸೂಚಿಸಿದ್ದಾರೆ. ಆದರೆ, ಶಾಸಕರಿಗೆ ಶನಿವಾರ ಸಭೆಯ ದಿನಾಂಕವನ್ನು ನಿಗದಿ ಪಡೆಸಲು ಪೌರಾಯುಕ್ತರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅನುಮತಿ ಪಡೆಯಬೇಕಾಗಿದೆ ಎಂದರು.

ರೈತರನ್ನು ಸಂರ್ಪಕಿಸುತ್ತಿಲ್ಲ: ಸರ್ಕಾರವು ಆಶ್ರಯ ಯೋಜನೆ ಅನುಷ್ಠಾನಕ್ಕೆ ತರಲು ಮುಂದಾಗಿದ್ದರೂ, ಸ್ಥಳೀಯ ಶಾಸಕರ ಮತ್ತು ಅಧಿಕಾರಿಗಳ ಇಚ್ಛಾಕೊರತೆಯಿಂದ ನೆನಗುದಿಗೆ ಬಿದ್ದಿದೆ. ಇದರಿಂದ ನಗರದಲ್ಲಿ ಸಾವಿರಾರು ವಸತಿಹೀನರು ಮನೆ ಇಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸಬೇಕಾಗಿದೆ. ಅಧಿಕಾರಿ ಗಳು ನಗರದ ಸುತ್ತಮುತ್ತಲಿನ ಸರ್ಕಾರಿ ಜಾಗವನ್ನು ಗುರುತಿಸುವ ಕೆಲಸವನ್ನು ಮುಂದಾಗುತ್ತಿಲ್ಲ. ಇತ್ತ ರೈತರನ್ನು ಸಂರ್ಪಕಿಸುತ್ತಿಲ್ಲ ಎಂದು ಆಶ್ರಯ ಸಮಿತಿ ಸದಸ್ಯರು ಆರೋಪಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.