ಅವಳಿ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಅಪಾರ ನಷ್ಟ

87427 ಹೆಕ್ಟೇರ್‌ ಖುಷ್ಕಿ ಭೂಮಿಯಲ್ಲಿ ಬಿತ್ತನೆಯ ಗುರಿ ಹೊಂದಲಾಗಿತ್ತು.

Team Udayavani, Sep 15, 2022, 6:35 PM IST

ಅವಳಿ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಅಪಾರ ನಷ್ಟ

ಕೋಲಾರ: ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಈ ವರೆವಿಗೂ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 790 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿ ಅಂದಾಜು ಸರ್ವೆ ಮುಂದುವರಿದಿದೆ. ಸದ್ಯಕ್ಕೆ ಮಳೆಯಿಂದ 662 ಹೆಕ್ಟೇರ್‌ ತೋಟಗಾರಿಕೆ ಬೆಳೆ ಮತ್ತು 128 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿರುವ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ 2022 ಜ. 1ರಿಂದ ಸೆ. 13 ರವರೆಗೂ ಸರಾಸರಿ 413 ಮಿ.ಮೀ ಮಳೆಯಾಗಬೇಕಾಗಿತ್ತು. ಆದರೆ, ಗುರಿ ಮೀರಿ ಶೇ.116 ಹೆಚ್ಚುವರಿ ಪ್ರಮಾಣದಲ್ಲಿ 891 ಮಿ.ಮೀ ಮಳೆಯಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗೆ ಸಾಕಷ್ಟು ಹಾನಿ ಸಂಭವಿಸಿದೆ.

ಶೇ.78.77 ಕೃಷಿ ಬಿತ್ತನೆ: ಜಿಲ್ಲೆಯಲ್ಲಿ ಒಟ್ಟು ಕೃಷಿ ಭೂಮಿಯಲ್ಲಿ ಶೇ.78.77 ಪ್ರಮಾಣದಲ್ಲಿ ಬಿತ್ತನೆ ಕಾರ್ಯ ನಡೆದಿತ್ತು. ಮುಂಗಾರು ಹಂಗಾಮಿನಲ್ಲಿ 7334 ಹೆಕ್ಟೇರ್‌ ನೀರಾವರಿ ಹಾಗೂ 87427 ಹೆಕ್ಟೇರ್‌ ಖುಷ್ಕಿ ಭೂಮಿಯಲ್ಲಿ ಬಿತ್ತನೆಯ ಗುರಿ ಹೊಂದಲಾಗಿತ್ತು. ಇಲ್ಲಿಯವರೆವಿಗೂ ನೀರಾವರಿ ಯಲ್ಲಿ 2289 ಹೆಕ್ಟೇರ್‌ ಹಾಗೂ ಖುಷ್ಕಿಯಲ್ಲಿ 72352 ಹೆಕ್ಟೇರ್‌ ಬಿತ್ತನೆ ಕಾರ್ಯವು ಪೂರ್ಣಗೊಂಡಿತ್ತು. ಆದರೆ, ಅಕಾಲಿಕ ಮಳೆಯಿಂದಾಗಿ ಸುಮಾರು 1 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.

ಕೃಷಿ ಬೆಳೆ ಹಾನಿ: ಜಿಲ್ಲೆಯಲ್ಲಿ ಈವರೆವಿಗೂ 128.91 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿದೆ. ಈ ಪೈಕಿ ಜಿಲ್ಲೆಯ ಪ್ರಮುಖ ಬೆಳೆಯೆಂದು ಗುರುತಿಸಿರುವ ರಾಗಿ 118.11 ಹೆಕ್ಟೇರ್‌, ಕಳ್ಳೇಕಾಯಿ 4 ಹೆಕ್ಟೇರ್‌, ಸಾಮೆ 1.4 ಹೆಕ್ಟೇರ್‌ ಮತ್ತು ತೊಗರಿ 2 ಹೆಕ್ಟೇರ್‌ ಪ್ರದೇಶದಲ್ಲಿ ಹಾನಿಯಾಗಿದೆ.

ತೋಟಗಾರಿಕೆ ಹಾನಿ: ಜಿಲ್ಲೆಯ ಹೆಚ್ಚು ರೈತರು ತೋಟಗಾರಿಕೆ ಬೆಳೆಗಳ ಮೇಲೆ ಅವಲಂಬಿತರಾಗಿದ್ದಾರೆ. ಅದರಲ್ಲೂ ಪ್ರತಿ ಗ್ರಾಮದಲ್ಲಿ ಟೊಮೆಟೋವನ್ನು
ತೋಟಗಾರಿಕೆ ಬೆಳೆಯನ್ನಾಗಿ ಬೆಳೆಯಲಾಗುತ್ತದೆ. ಆಗಸ್ಟ್‌ನಲ್ಲಿ ಒಟ್ಟು 343.70 ಹೆಕ್ಟೇರ್‌ ಬೆಳೆ ನಷ್ಟವಾಗಿದೆ. ಈ ಪೈಕಿ 176 ಹೆಕ್ಟೇರ್‌ ಟೊಮೆಟೋ ಮತ್ತು 44.58 ಹೂ ಬೆಳೆಗಳಾಗಿತ್ತು. ಸೆಪ್ಟೆಂಬರ್‌ನಲ್ಲಿ 318 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ. ಇದರಲ್ಲಿ ಬಹುತೇಕ ಟೊಮೆಟೋ ಮತ್ತು ತರಕಾರಿ ಬೆಳೆಗಳಾಗಿವೆ.

ಮನೆಗಳ ಹಾನಿ: ಜಿಲ್ಲೆಯಲ್ಲಿ ಒಟ್ಟು 46 ಮನೆಗಳು ಮಳೆಯಿಂದ ಹಾನಿಯಾಗಿವೆ. ಕೋಲಾರ ತಾಲೂಕಿನಲ್ಲಿ8,ಬಂಗಾರಪೇಟೆಯಲ್ಲಿ 3, ಕೆಜಿಎಫ್ನಲ್ಲಿ 1, ಮಾಲೂರಿನಲ್ಲಿ 33 ಮತ್ತು ಶ್ರೀನಿವಾಸಪುರದಲ್ಲಿ 1 ಮನೆ ಹಾನಿಗೀಡಾಗಿದೆ. ಒಟ್ಟು ಹಾನಿಯಾಗಿರುವ 46 ಮನೆಗಳ ಪೈಕಿ 2 ಮನೆ ಶೇ.25 ರಿಂದ 75 ಹಾನಿಯಾಗಿದ್ದರೆ, 44 ಮನೆಗಳು ಶೇ.15 ರಿಂದ 25 ರಷ್ಟು ಹಾನಿಯಾಗಿವೆ.

ಜಂಟಿ ಸರ್ವೆ: ಸೂಕ್ತ ಪರಿಹಾರ: ಮಳೆ ಹಾನಿ ಕುರಿತು ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೆಕಾರ್ಯವನ್ನು ಜಿಲ್ಲೆಯಾದ್ಯಂತ ಮಾಡುತ್ತಿದ್ದಾರೆ. ಈವರೆವಿಗೂ ಜಂಟಿ ಸರ್ವೆ ಕಾರ್ಯದ ಪ್ರಕಾರ 570 ಹೆಕ್ಟೇರ್‌ ಬೆಳೆ ಹಾನಿಯನ್ನು ದಾಖಲು ಮಾಡಿಕೊಳ್ಳಲಾಗಿದೆ. ಸರಕಾರದ ಪೋರ್ಟಲ್‌ ನಲ್ಲಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ನೋಂದಣಿ ಮಾಡಿಸಿದ ರೈತರಿಗೆ ಹಂತ ಹಂತವಾಗಿ ಪರಿಹಾರವನ್ನು ಸರ್ಕಾರದ ಹಂತದಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೆ.13 ರವರೆಗೂ 22.57 ಲಕ್ಷ ರೂ. ಪರಿಹಾರ ತಲುಪಿಸಲಾಗಿದೆ.

ಕೋಲಾರ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಎರಡು ಹಂತಗಳಲ್ಲಿ ಒಮ್ಮೆ 5 ಕೋಟಿ ರೂ., ಇನ್ನೊಂದು ಹಂತದಲ್ಲಿ 2 ಕೋಟಿ ರೂ.ಗಳನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿ ಮನೆ ಹಾನಿ, ಜೀವ ಹಾನಿ, ಪಶು ಪ್ರಾಣಿ ಹಾನಿ ಪರಿಹಾರವಾಗಿ ಡಿಸಿ ಕಚೇರಿಯಿಂದ ಪರಿಹಾರವನ್ನು ಬಿಡುಗಡೆ ಮಾಡಲಾಗುತ್ತಿದೆ.

ಸಚಿವ, ಶಾಸಕರ ನಿರ್ಲಕ್ಷ್ಯ
ಕೋಲಾರದಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ವಿವಿಧ ಬೆಳೆಗಳ ಹಾನಿಯಾಗಿದ್ದರೂ, ಬೆಳೆ ಹಾನಿ ಸಮೀಕ್ಷೆ ಮಾಡುವ ಜವಾಬ್ದಾರಿಯನ್ನು ಕೇವಲ ಅಧಿಕಾರಿಗಳು- ರೈತರೇ ಹೊತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಇತ್ತೀಚಿನ ದಿನಗಳಲ್ಲಿ ಒಮ್ಮೆ ಮಾತ್ರ ಶಾಸ್ತ್ರಕ್ಕೆಂಬಂತೆ ಪತ್ರಕರ್ತರನ್ನು ಹೊರಗಿಟ್ಟು ರಹಸ್ಯವಾಗಿ ಕೆಡಿಪಿ ಸಭೆ ನಡೆಸಿ ಹೋದವರು ಯಾವುದೇ ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಸಾಂತ್ವಾನ ಹೇಳುವ ಕೆಲಸ ಮಾಡಿಲ್ಲ. ಅಥವಾ ಅಧಿಕಾರಗಳ ಹಂತದಲ್ಲಿ ವಿಳಂಬವಾಗಿ ನಡೆಸುತ್ತಿರುವ ಜಂಟಿ ಸರ್ವೆ ಕಾರ್ಯವನ್ನು ಚುರುಕುಗೊಳಿಸುವ ಕೆಲಸವನ್ನು ಮಾಡಿಲ್ಲ. ಶಾಸಕರೂ ಈ ಬಗ್ಗೆ ಕ್ರಮ ವಹಿಸಿಲ್ಲ.

ಕೋಲಾರ ಜಿಲ್ಲೆಯಲ್ಲಿ ಮಳೆ ಹಾನಿಯಿಂದಾಗಿ ಆಗಿರುವ ನಷ್ಟವನ್ನು ಜಂಟಿ ಸರ್ವೆ ಮೂಲಕ ಅಂದಾಜು ಮಾಡಲಾಗುತ್ತಿದೆ. ಹಾನಿಯಾಗಿರುವ ರಸ್ತೆಗಳ ಗುಂಡಿ ಮುಚ್ಚಿಸಲು ಕ್ರಮವಹಿಸಲಾಗಿದೆ. ನಗರೋತ್ಥಾನ ಯೋಜನೆಯಡಿ ನಗರದ ರಸ್ತೆಗಳ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಕರೆಯಲಾಗುತ್ತಿದೆ.
● ಮನಿರತ್ನ, ಜಿಲ್ಲಾ ಉಸ್ತುವಾರಿ ಸಚಿವ.
ಕೋಲಾರ

ಮಳೆಹಾನಿಯಿಂದ ನಷ್ಟಕ್ಕೀಡಾಗಿರುವ ರೈತರ ಕಣ್ಣೊರೆಸಲು ಅಧಿಕಾರಿಗಳು ಜಂಟಿ ಸರ್ವೆ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಿಂದಿನ ವರ್ಷದಲ್ಲಿಯೇ ಮಳೆ ಹಾನಿಯ ಪರಿಹಾರ ರೈತರ ಕೈ ಸೇರಿಲ್ಲ. ಈ ಬಾರಿಯೂ ಯಾವೊಬ್ಬ ರೈತರಿಗೂ ಹಣ ಬಿಡುಗಡೆಯಾಗಿಲ್ಲ.
ಕೆ.ಶ್ರೀನಿವಾಸಗೌಡ, ಜಿಲ್ಲಾ ಸಂಚಾಲಕ, ರೈತ ಸಂಘ

ಕೋಲಾರ ಜಿಲ್ಲೆಯಲ್ಲಿ ಆ. 28 ರಿಂದ ಸೆ. 5 ರವರೆಗೂ 494 ರೈತರಿಗೆ ಸೇರಿದ 343.70 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಸುಮಾರು 218.77 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜು ಮಾಡಲಾಗುತ್ತಿದೆ. ಹಾನಿ ಸಮೀಕ್ಷೆಗೆ ಜಂಟಿ ಸರ್ವೆ ನಡೆದಿದೆ.
● ವೆಂಕಟ್‌ ರಾಜಾ, ಡಿಸಿ ಕೋಲಾರ.

*ಕೆ.ಎಸ್.ಗಣೇಶ್

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.