Udayavni Special

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮವಾದರೆ ಸುಮ್ಮನೆ ಬಿಡಲ್ಲ


Team Udayavani, Mar 16, 2019, 7:36 AM IST

sslc-akra.jpg

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಮತ್ತಿತರ ಅವ್ಯವಹಾರಗಳಿಗೆ ಅವಕಾಶ ನೀಡದಿರಿ, ಜಿಲ್ಲೆಗೆ ಯಾವುದೇ ಕಾರಣಕ್ಕೂ ಕಳಂಕ ಬಾರದಂತೆ ಎಚ್ಚರವಸಿ ಎಂದು ಜಿಪಂ ಸಿಇಒ ಜಿ.ಜಗದೀಶ್‌ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ತಮ್ಮ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಲವಾರು ವರ್ಷಗಳ ಹಿಂದೆ ಕೆಲವು ಜಿಲ್ಲೆಗಳಲ್ಲಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಶಿಕ್ಷಕರೇ ಅವಕಾಶ ನೀಡುತ್ತಿದ್ದ ಆರೋಪಗಳು ಇದ್ದವು. ಆದರೆ, ಈಗಿಲ್ಲ ಎಂದರು. ಪರೀಕ್ಷೆಯಲ್ಲಿ ಅಕ್ರಮ ನಡೆಸುವುದು, ವಿದ್ಯಾರ್ಥಿ ಡಿಬಾರ್‌ ಆಗುವುದು ಸೇರಿ ಯಾವುದೇ ರೀತಿಯ ಕಳಂಕ ಜಿಲ್ಲೆಗೆ ಬರುವುದಕ್ಕೆ ಅವಕಾಶ ನೀಡಬಾರದು, ಇಂತಹ ದೂರು ಬಂದರೆ ನಿಮ್ಮನ್ನು ಸುಮ್ಮನೇ ಬಿಡೋದಿಲ್ಲ ಎಂದು ಎಚ್ಚರಿಸಿದರು.  

ಭದ್ರತೆ ಕಲ್ಪಿಸಿ: ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಉತ್ತರ ಪತ್ರಿಕೆಗಳನ್ನು ಎಲ್ಲಾ ಪರೀಕ್ಷೆಗಳು ಮುಗಿಯುವವರೆಗೂ ಡಿಡಿಪಿಐ ಕಚೇರಿಯ ಒಂದು ಕೊಠಡಿಯಲ್ಲಿ ಇರಿಸಲಾಗುವುದು. ಸುತ್ತಲೂ ಪೊಲೀಸ್‌, ಸಿಸಿಟಿವಿ ಸೇರಿದಂತೆ ಎಲ್ಲಾ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಜಿ.ಜಗದೀಶ್‌, ಚುನಾವಣೆ ಸ್ಟ್ರಾಂಗ್‌ರೂಂಗೆ ನೀಡುವಂತೆ ಹೆಚ್ಚಿನ ಭದ್ರತೆ ಒದಗಿಸಬೇಕು. ಯಾವುದೇ ಕಾರಣಕ್ಕೂ ಅಹಿತಕರ ಚಟುವಟಿಕೆಗಳಿಗೆ ಅವಕಾಶ ಬೇಡ ಎಂದು ಸೂಚಿಸಿದರು.

ಜಿಲ್ಲಾದ್ಯಂತ 71 ಕೇಂದ್ರಗಳಲ್ಲಿ ಪರೀಕ್ಷೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಜಿಲ್ಲೆಯ 71 ಕೇಂದ್ರಗಳಲ್ಲಿ ನಡೆಯಲಿದ್ದು, 20,194 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಖಾಸಗಿ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಇರುವುದರಿಂದ ಅಕ್ರಮಕ್ಕೆ ಅವಕಾಶಗಳಾಗುವ ಸಲುವಾಗಿ ಕೋಲಾರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ್ತು ಬಾಪೂಜಿ ಶಾಲೆಯ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಕೋಲಾರದ 17, ಬಂಗಾರಪೇಟೆ 10, ಕೆಜಿಎಫ್‌10, ಮಾಲೂರು 10, ಮುಳಬಾಗಿಲು 11, ಶ್ರೀನಿವಾಸಪುರದ 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 10,476 ಬಾಲಕರು, 9717 ಬಾಲಕಿಯರು (823 ಪುನರಾವರ್ತಿತ ಅಭ್ಯರ್ಥಿಗಳು ಸೇರಿ) ಬರೆಯಲಿದ್ದಾರೆ. ಕಳೆದ ಬಾರಿ ಡಿಬಾರ್‌ ಪ್ರಕರಣ ಯಾವುದೂ ಇಲ್ಲ. ಹಾಗೆಯೇ ಈ ಬಾರಿಯೂ ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಡಿಡಿಪಿಐ ಕೆ.ರತ್ನಯ್ಯ ಮಾತನಾಡಿ, ನಮ್ಮಲ್ಲಿಯೂ 6 ಮೌಲ್ಯಮಾಪನಾ ಕೇಂದ್ರಗಳನ್ನು ಕೋಲಾರದ ನಳಂದಾ, ಚಿನ್ಮಯ, ಸೆಂಟ್‌ಆನ್ಸ್‌, ಸುಗುಣ, ಮಹಿಳಾ ಸಮಾಜ, ಸೈನಿಕ್‌ ಪಬ್ಲಿಕ್‌ ಶಾಲೆಯಲ್ಲಿ ಎಲ್ಲಾ ಸೌಲಭ್ಯ ಒಳಗೊಂಡಂತೆ ವ್ಯವಸ್ಥೆ ಮಾಡಲಾಗಿದೆ. ಆಗಿಂದಾಗ್ಗೆ ಆನ್‌ಲೈನ್‌ಗೆ ತುಂಬುವುದರಿಂದಾಗಿ ಈ ಬಾರಿ 10 ದಿನಗಳ ಒಳಗೆ ಫಲಿತಾಂಶ ಹೊರಬರಲಿದೆ ಎಂದರು.

ಜಿಲ್ಲೆಯಲ್ಲಿನ 71 ಪರೀಕ್ಷಾ ಕೇಂದ್ರಗಳಿಗೂ ಓರ್ವ ಮೇಲ್ವಿಚಾರಕರನ್ನು, ಜಿಲ್ಲಾ ಮಟ್ಟದಲ್ಲಿ 3 ಜಾಗೃತ ತಂಡಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಕರ ಅನವಶ್ಯಕ ಓಡಾಟ, ವಿದ್ಯಾರ್ಥಿಗಳು ಪರೀಕ್ಷಾ ಸಾಮಗ್ರಿ ಹೊರತುಪಡಿಸಿ ಎಲೆಕ್ಟ್ರಾನಿಕ್‌ ಸೇರಿದಂತೆ ಯಾವುದೇ ವಸ್ತುಗಳನ್ನು ತರದಂತೆ ಸೂಚನೆ ನೀಡಿರುವುದಾಗಿ ಹೇಳಿದರು.

ಸಭೆಯಲ್ಲಿ ಡಯೆಟ್‌ ಪ್ರಾಂಶುಪಾಲ ವಿಕ್ಟರ್‌, ಶಿಕ್ಷಣಾಧಿಕಾರಿ ಸಿ.ಆರ್‌.ಅಶೋಕ್‌, ಬಿಇಒಗಳಾದ ಕೆ.ಎಸ್‌.ನಾಗರಾಜಗೌಡ, ಕೆಂಪರಾಮು, ಮಾಧವರೆಡ್ಡಿ, ಕೆಂಪಯ್ಯ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಸಿ.ಎಂ.ವೆಂಕಟರಮಣಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಪುರಸಭೆಯಿಂದ ಹಳ್ಳಿಗಳನ್ನು ಕೈಬಿಡಿ

ಪುರಸಭೆಯಿಂದ ಹಳ್ಳಿಗಳನ್ನು ಕೈಬಿಡಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.