ಆಹಾರ ಪೂರೈಕೆಯಲ್ಲಿ ಅಕ್ರಮ

Team Udayavani, Mar 3, 2020, 4:20 PM IST

kolar-tdy-1

ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆಯುವ ಅವ್ಯವಹಾರದ ತನಿಖೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ಧಿ ಸಮಿತಿ ನಗರದಲ್ಲಿನ ಉಪನಿರ್ದೇಶಕ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಇಲಾಖೆಗೆ ಒಳಪಡುವ 5 ಎಂಎಸ್‌ಪಿಟಿಸಿಗಳು ಕಾರ್ಯನಿರ್ವಹಿಸುತ್ತಿದ್ದು, ಒಬ್ಬರೇ ಉಸ್ತುವಾರಿ ಆಗಿದ್ದಾರೆ.

ಇದರಿಂದ ಹಲವು ಕಡೆ ಅವ್ಯವಹಾರ ಮತ್ತು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ. ಕೋಲಾರ ಎಂಎಸ್‌ ಪಿಟಿಸಿಯಲ್ಲೂ ಅವ್ಯಹಾರ ನಡೆದಿದೆ ಎಂದು ಆರೋಪಿಸಿದರು.

ಈ ಅವ್ಯವಹಾರದ ಬಗ್ಗೆ ಪ್ರಭಾರ ಉಪನಿರ್ದೇಶಕರಾಗಿದ್ದ ಎಂ.ಸೌಮ್ಯಾ ಮೇಲಧಿಕಾರಿಗೆ ವರದಿ ಸಲ್ಲಿಸುತ್ತಾರೆ ಎಂದು ತಿಳಿದು ಪ್ರಭಾರವನ್ನು ರದ್ದುಪಡಿಸಿ, ಈ ಸ್ಥಾನಕ್ಕೆ ಎಂಜಿ ಪಾಲಿ ಅವರನ್ನು ವರ್ಗ ಮಾಡಿಸಿಕೊಂಡು ಬಂದು, ಎಂಎಸ್‌ ಪಿಟಿಸಿಯ ಕಾರ್ಯದರ್ಶಿಯನ್ನು ಮುಂದುವರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಖರೀದಿಯಲ್ಲಿ ಅನುಮಾನ: ಶ್ರೀನಿವಾಸಪುರ ಎಂಎಸ್‌ ಟಿಪಿಸಿಯಲ್ಲಿ 2015ರಿಂದ ಈವರೆಗೆ 20 ಟನ್‌ ಅಕ್ಕಿ, 22 ಟನ್‌ ಗೋಧಿಗೆ ಲೆಕ್ಕ ನೀಡದೆ ಇಂದಿಗೂ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಅಕ್ಕಿಯನ್ನು ಕೇಜಿಗೆ 27 ರೂ.ನಂತೆ, ಗೋಧಿಯನ್ನು 22 ರೂ.ನಂತೆ ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗುತ್ತಿದೆ. ಈ ಬಗ್ಗೆ ಉಪನಿರ್ದೇಶಕರ ಗಮನಕ್ಕೆ ತಂದಿದ್ದರೂ ನಿರ್ಲಕ್ಷ್ಯವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆಪಾದಿಸಿದರು.

ವರ್ಗಾವಣೆಗೆ ಆಗ್ರಹ: ಎಂಎಸ್‌ಪಿಟಿಸಿಗಳಲ್ಲಿ ನಡೆಯುತ್ತಿರುವ ಅವ್ಯವಹಾರ ಮತ್ತು ಭ್ರಷ್ಟಾಚಾರದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳು ಅಥವಾ ಇಲಾಖೆ ಮೇಲಧಿಕಾರಿಗಳಿಂದ ತನಿಖೆ ನಡೆಸಲಿ ಆದೇಶಿಸಬೇಕು, ಇಲಾಖೆ ಆದೇಶಗಳನ್ನು ಉಲ್ಲಂಘಿಸುತ್ತಿರುವ ಅಧಿಕಾರಿ ಮೇಲೆ ಕ್ರಮ ಕೈಗೊಂಡು ಅವರನ್ನು ಅಮಾನತ್ತಿನಲ್ಲಿಡಬೇಕು ಅಥವಾ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಹೇಳಿದರು.

ವರ್ಷಕೊಬ್ಬರು ಗುತ್ತಿಗೆದಾರರ ಬದಲಿಸಿ: ಜಾತಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೋಲಾರ ಸಿಡಿಪಿಒ ರಮೇಶ್‌ ಅವರನ್ನು ವರ್ಗಾವಣೆ ಮಾಡಬೇಕು, 10ರಿಂದ 15 ವರ್ಷಗಳಿಂದ ಒಬ್ಬರೇ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರು ಹಲವು ಕಡೆ ಮೋಸ ಮಾಡುತ್ತಿದ್ದು, ಗುತ್ತಿಗೆ ರದ್ದುಪಡಿಸಿ ವರ್ಷಕ್ಕೆ ಒಬ್ಬರಂತೆ ಗುತ್ತಿಗೆದಾರರನ್ನು ಬದಲಿಸಬೇಕು ಎಂದು ಆಗ್ರಹಿಸಿದರು.

ಸ್ಥಳೀಯರಿಗೆ ಆದ್ಯತೆ ನೀಡಿ: ಕೇಂದ್ರ ಕಚೇರಿಯ ಆದೇಶದಂತೆ ಪ್ರತಿ ತಿಂಗಳು 5ನೇ ತಾರೀಖೀನೊಳಗೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಪಾವತಿಸಲು ಕ್ರಮ ವಹಿಸಬೇಕು, ಮೊಟ್ಟೆ ಮತ್ತು ತರಕಾರಿ ಹಣವನ್ನು ಪ್ರತಿ ತಿಂಗಳು ಕಾರ್ಯಕರ್ತೆಯರ ಬ್ಯಾಂಕ್‌ ಖಾತಗೆ ಜಮಾ ಮಾಡಬೇಕು, ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕೋಲಾರ ತಾಲೂಕು ಮತ್ತು ಜಿಲ್ಲೆಯ ಹೊರಗೆ ಕಾರ್ಯನಿರ್ವಹಿಸುತ್ತಿರುವ ಆಯಾ ತಾಲೂಕುಗಳ ವ್ಯಾಪ್ತಿಗೆ ಬರುವ ಕಾರ್ಯಕರ್ತೆಯರಿಗೆ ಮೊದಲ ಆದ್ಯತೆ ನೀಡಬೇಕು, ಇನ್ನಿತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ವಮಂಜಲಿ ಸಿ.ಶಿವಣ್ಣ, ರಾಜ್ಯಾಧ್ಯಕ್ಷ ಎಸ್‌.ನಾರಾಯಣಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮು ಶಿವಣ್ಣ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ,ಅಂಗನವಾಡಿ ಕಾರ್ಯಕರ್ತೆಯರು ಇತರರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.