ಜೆಡಿಎಸ್‌ ಕಾರ್ಯಕರ್ತರ ವಿಜಯೋತ್ಸವ

Team Udayavani, May 24, 2018, 3:01 PM IST

kol-2.jpg

ಮಾಲೂರು: ರಾಜ್ಯದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಿಶ್ರ ಸರ್ಕಾರದಲ್ಲಿ 25ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ
ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್‌ ನಗರಾಧ್ಯಕ್ಷ ಟಿ.ರಾಮಚಂದ್ರ, ಸರಳ, ಸಜ್ಜನಿಕೆಯ ಹಾಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಸಮಿಶ್ರ ಸರ್ಕಾರದ ಚುಕ್ಕಾಣಿ ಹಿಡಿಯುತ್ತಿರುವುದು ತಾಲೂಕು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಹರ್ಷ ತಂದಿದೆ ಎಂದು ಹೇಳಿದರು.

ಕಳೆದ ಅವಧಿಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು 20 ತಿಂಗಳ ಕಾಲ ಸುಭದ್ರ ಆಡಳಿತ ನೀಡುವ ಮೂಲಕ ಜನ ಮಾನಸ ದಲ್ಲಿ ಉಳಿದುಕೊಂಡಿದ್ದರು. ಪ್ರಸ್ತುತ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ರಾಜ್ಯದ ಜನತೆಗೆ ಮತಷ್ಟು ಅನುಕೂಲಗಳನ್ನು ಕಲ್ಪಿಸುವ ವಿಶ್ವಾಸವಿದೆ ಎಂದರು. 

ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಾಗಿದ್ದ ಕೆ.ಎಸ್‌. ಮಂಜುನಾಥಗೌಡರು 5 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಮಂಜುನಾಥಗೌಡರು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದರು. ಆದರೆ, ಶಾಸಕರು ಸೋಲನುಭವಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿಎಂ ಕುಮಾರಸ್ವಾಮಿ ಸೂಚನೆ ಮೇರೆಗೆ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಹೇಳಿದರು.

 ಮುಖಂಡ ಎಂ.ಆರ್‌.ದೇವರಾಜ್‌ ಮಾತನಾಡಿ, ತಾಲೂಕಿನಲ್ಲಿ ಜಾತ್ಯತೀತವಾಗಿ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಮಾಜಿ ಶಾಸಕ ಮಂಜುನಾಥಗೌಡರು ಜನಮೆಚ್ಚಿದ ನಾಯಕರಾಗಿದ್ದರು. ಆದರೆ, ಚುನಾವಣೆಯಲ್ಲಿ ಸೋತರೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಅವರನ್ನು ಮತ್ತೆ ಶಾಸಕರಾಗಿ ಆಯ್ಕೆ ಮಾಡಲು ಶ್ರಮಿಸಲಾಗುವುದು ಎಂದರು.

ಪುರಸಭಾ ಆಶ್ರಯ ಸಮಿತಿ ಮಾಜಿ ಸದಸ್ಯ ಪಂಚೆ ನಂಜುಂಡಪ್ಪ, ಮುಖಂಡರಾದ ಮುನಿಕೃಷ್ಣ, ಮೂರ್ತಿ, ಸುಬ್ರಹ್ಮಣ್ಯ, ರಘುಗೌಡ, ವೆಂಕಟೇಶ್‌, ನಂಜುಂಡಪ್ಪ, ಗೂಡು ನಾಗರಾಜ್‌, ತಿಮ್ಮಾರೆಡ್ಡಿ, ಮುನಿಶಾಮಿಗೌಡ, ರತ್ನಪ್ಪ, ಮೂರ್ತಿ, ನಾಗರಾಜ್‌, ನವೀನ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.