ಪದವೀಧರರಿಗಾಗಿ ಉದ್ಯೋಗ ಮೇಳ

Team Udayavani, Nov 17, 2019, 2:31 PM IST

ಕೋಲಾರ: ಶೀಘ್ರವಾಗಿ ಕೋಲಾರದಲ್ಲಿ ಬೃಹತ್‌ ಉದ್ಯೋಗಮೇಳವನ್ನು ಆಯೋಜಿಸಿ ಜಿಲ್ಲೆಯ ಪದವೀಧರರಿಗೆ ಉದ್ಯೋಗ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ನಾಗೇಶ್‌ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಳ್ಳಿ ಹಾಡು ಸಾಂಸ್ಕೃತಿಕ ಜಾನಪದ ಕಲಾ ಸಂಘ, ಮತ್ತಿಕುಂಟೆ ಕೆಂಬೋಡಿಯ ಜನತಾ ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದವರು ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ ಎಂದುತಿಳಿಸಿದರು.

ಜಿಲ್ಲೆಗೆ ಕೀರ್ತಿ ತನ್ನಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕಲೆಯ ಬಗ್ಗೆ ಅರಿವು ಮೂಡಿಸಬೇಕು. ಇಂದು ಯುವಜನ ಮೇಳದಲ್ಲಿ 17 ವಿವಿಧ ಸ್ಪರ್ಧೆಗಳಿದ್ದು, ಸ್ಪರ್ಧಾ ರ್ಥಿಗಳು ಕ್ರೀಡಾಮನೋಭಾವದಿಂದ ಭಾಗವಹಿಸಿ. ಇಲ್ಲಿ ಗೆದ್ದವರು ವಿಭಾಗ ಮಟ್ಟದಲ್ಲಿ ಗೆದ್ದು, ಜಿಲ್ಲೆಗೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದಿನ ಪತ್ರಿಕೆ ಓದಿ: ಹೆಣ್ಣು ಗಂಡು ಎಂಬ ತಾರತಮ್ಯ ಇರಬಾರದು. ಹೆಣ್ಣು ಮಕ್ಕಳು ಸಹ ಗಂಡು ಮಕ್ಕಳಿಗೆ ಸಮಾನವಾಗಿ ಸ್ಪರ್ಧೆ ಒಡ್ಡಬೇಕು. ವಿದ್ಯಾರ್ಥಿಗಳು ಪ್ರತಿ ದಿನ ಪತ್ರಿಕೆಗಳನ್ನು ಓದಿ ಪ್ರಚಲಿತ ವಿದ್ಯಮಾ ನಗಳನ್ನು ತಿಳಿದುಕೊಳ್ಳಬೇಕು. ನಿಮ್ಮ ಮನೆ ಸುತ್ತಮುತ್ತ ಸ್ಪತ್ಛವಾಗಿ ಇಟ್ಟುಕೊಳ್ಳಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೋಲಾರ ತಹಶೀಲ್ದಾರ್‌ ಶೋಭಿತಾ, ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆಯ ಸಹಾಯಕ ಹಿರಿಯ ನಿರ್ದೇಶಕಿ ಎಂ.ಎಲ್‌. ದೇವಿಕಾ, ಜನತಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿಸಪ್ಪಗೌಡ, ಪ್ರಾಂಶುಪಾಲ ಗೋಪಾಲರೆಡ್ಡಿ, ಪೊಲೀಸ್‌ ಉಪನಿರೀಕ್ಷಕ ಆಂಜಿನಪ್ಪ, ಜಾನಪದ ಅಕಾಡೆಮಿ ಮಾಜಿ ಸದಸ್ಯ ಚಂದ್ರಶೇಖರ್‌ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಈ ವಿಭಾಗದಿಂದ ಇನ್ನಷ್ಟು

  • ಟೇಕಲ್‌: ಕಳೆದ ವಾರ 60 ರಿಂದ 80 ರೂ. ಇದ್ದ ಈರುಳ್ಳಿ ಬೆಲೆ ಈಗ 1 ಕೆ.ಜಿ. 90 ರೂ.ರಿಂದ 160 ರೂ.ವರೆಗೂ ಮಾರಾಟವಾಗುತ್ತಿದ್ದು, ಗ್ರಾಮೀಣ ಜನರು ತತ್ತರಿಸಿದ್ದಾರೆ. ಈರುಳ್ಳಿ ಬೆಲೆ...

  • ಮುಳಬಾಗಿಲು: ನಗರಸಭೆ ವ್ಯಾಪ್ತಿಯನ್ನು ವಿಸ್ತರಣೆ ಮಾಡುವ ಸಂಬಂಧ ಈಗಾಗಲೇ ತಾಲೂಕು ಆಡಳಿತ 5 ಕಿ.ಮೀ. ವ್ಯಾಪ್ತಿಯನ್ನು ನಿರ್ಧರಿಸಿದೆ. ಆದರೆ, ನಿಗದಿ ಮಾಡಿರುವ ವ್ಯಾಪ್ತಿಗೆ...

  • ಕೋಲಾರ: ಜಿಲ್ಲೆಯಲ್ಲಿ 6 ಖರೀದಿ ಕೇಂದ್ರ ತೆರೆದು ಪ್ರತಿ ಕ್ವಿಂಟಾಲ್‌ಗೆ 3150 ರೂ. ಬೆಂಬಲ ಬೆಲೆ ನೀಡಿ ರೈತರಿಂದ ರಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ....

  • ಮುಳಬಾಗಿಲು: ಹಾಲಿನ ಉಷ್ಣಾಂಶ 28 ಡಿಗ್ರಿ ಬರಲಿಲ್ಲವೆಂದು ಚಿಕ್ಕಗೊಲ್ಲಹಳ್ಳಿ ಗ್ರಾಮದಲ್ಲಿ ಉತ್ಪಾದನೆಯಾಗುವ 6 ಕ್ಯಾನ್‌ ಹಾಲನ್ನೇ ತೆಗೆದುಕೊಳ್ಳದ ಸಂಘದ ಕಾರ್ಯವೈಖರಿ...

  • ಬೇತಮಂಗಲ/ಕೆಜಿಎಫ್: ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಬಿಳ್ಳೇರಳ್ಳಿ, ಬೇತಮಂಗಲ ಮಾರ್ಗದಲ್ಲಿ 8 ಆನೆಗಳ ಹಿಂಡು ಕಾಣಿಸಿಕೊಂಡು, ರೈತರು ಬೆಳೆದಿದ್ದ ಹುರುಳಿ, ಟೊಮೆಟೋ...

ಹೊಸ ಸೇರ್ಪಡೆ