ಅಧ್ಯಕ್ಷ ಮುನಿಸ್ವಾಮಿ, ಉಪಾಧ್ಯಕ್ಷೆ ದೇವಿ ಗಣೇಶ್‌

Team Udayavani, Nov 1, 2020, 4:56 PM IST

ಅಧ್ಯಕ್ಷ ಮುನಿಸ್ವಾಮಿ, ಉಪಾಧ್ಯಕ್ಷೆ ದೇವಿ ಗಣೇಶ್‌

ಕೆಜಿಎಫ್: ಹಲವಾರು ವರ್ಷಗಳ ನಂತರ ಶನಿವಾರ ರಾಬರ್ಟಸನ್‌ಪೇಟೆ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ವಳ್ಳಲ್‌ ಮುನಿಸ್ವಾಮಿ ಮತ್ತು ಉಪಾಧ್ಯಕ್ಷೆಯಾಗಿ ದೇವಿ ಗಣೇಶ್‌ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಸ್ಥಾಪಿಸಿದರು.

ಕುದುರೆ ವ್ಯಾಪಾರ, ಅಪಹರಣ, ಹೊರ ರಾಜ್ಯಗಳ ಪ್ರವಾಸ ಮೊದಲಾದ ಚುಟುವಟಿಕೆಗಳಿಗೆ ಹೆಸರಾಗಿದ್ದ ರಾಬರ್ಟಸನ್‌ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಸ್ಥಾನದ ಚುನಾವಣೆ ಶನಿವಾರ ಅಪರೂಪದ ಘಟನೆಗಳಿಗೆ ಸಾಕ್ಷಿಯಾಯಿತು. ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತವಾಗಿ ಮತದಾನ ನಡೆಯಿತು.

ಜೀವನತಿಯ, ಶಶಿಧರನ್‌ ಗೈರು: 13 ಸದಸ್ಯರಿದ್ದ ಕಾಂಗ್ರೆಸ್‌ ಪಕ್ಷವು ಇತರ ಪಕ್ಷ ಮತ್ತು ಪಕ್ಷೇತರರ ಜೊತೆಗೂಡಿ ಅಧಿಕಾರ ಹಿಡಿಯಿತು. ಜೆಡಿಎಸ್‌ನ 2, ಸಿಪಿಎಂ 1 ಮತ್ತು 9 ಪಕ್ಷೇತರ ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ನೀಡಿದರು. ಆರ್‌ಪಿಐ ಪಕ್ಷದ ಎಸ್‌. ರಾಜೇಂದ್ರನ್‌ ಮತ್ತು ಮಂಜುಳಾದೇವಿ, ಬಿಜೆಪಿಯ ರಾಮುಲಮ್ಮ, ವೇಣಿಪಾಂಡ್ಯನ್‌ ಮತ್ತು ರಾಧಾ, ಪಕ್ಷೇತರ ಸದಸ್ಯೆ ಜೀವನತಿಯ, ಶಶಿಧರನ್‌ ಸಭೆಗೆ ಗೈರು ಹಾಜರಾಗಿದ್ದರು.

ಕಾಂಗ್ರೆಸ್‌ ಪಕ್ಷದಿಂದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಜಯಪಾಲ್‌ ಸಭೆಗೆ ಗೈರಾಗಿದ್ದರು. ಅವರಿಗೆ ಹುಷಾರಿಲ್ಲದ ಕಾರಣ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಶಾಸಕಿ ಎಂ.ರೂಪಕಲಾ ಸ್ಪಷ್ಟೀಕರಣ ನೀಡಿದರು. ಚುನಾವಣೆಗೂ ಮುನ್ನ ಆರ್‌ಪಿಐ ಅಧ್ಯಕ್ಷ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಸೋಮಶೇಖರ್‌ ಅವರನ್ನು ಭೇಟಿ ಮಾಡಿ ಚುನಾವಣೆ ಪ್ರಕ್ರಿಯೆ ರದ್ದು ಮಾಡಬೇಕು ಎಂದು ಪತ್ರ ನೀಡಿದರು. ವಾಲ್ಮೀಕಿ ಜಯಂತಿಯಂದು ಚುನಾವಣೆ ನಡೆಸುವುದು ಕಾನೂನಿನ ಪ್ರಕಾರ ಸಮ್ಮತವಲ್ಲ ಎಂದು ವಾದಿಸಿದರು.

ಆರ್‌ಪಿಐ ನಿಂದ ಆಯ್ಕೆಯಾಗಿರುವ ಮಂಜುಳಾದೇವಿ ಅವರಿಗೆ ವಿಪ್‌ ಜಾರಿ ಮಾಡಲಾಗಿದೆ. ಅವರು ಪಕ್ಷದ ನಿರ್ದೇಶನ ಬಿಟ್ಟು ಬೇರೆಯವರಿಗೆ ಮತ ಹಾಕಿದರೆ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುತ್ತದೆ ಎಂದು ತಿಳಿಸಿದರು. ಚುನಾವಣೆ ಘೋಷಣೆಯಾದ ನಂತರ ನ್ಯಾಯಾಲಯ ಇಲ್ಲವೇ ಸರ್ಕಾರ ಸೂಚನೆ ಮಾಡಿದರೆ ಮಾತ್ರ ಚುನಾವಣೆ ರದ್ದು ಮಾಡಲು ಸಾಧ್ಯ ಎಂದು ಚುನಾವಣಾಧಿಕಾರಿಗಳು ನಂತರ ಸುದ್ದಿಗಾರರಿಗೆ ತಿಳಿಸಿದರು.

ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರ ವಹಿಸಿಕೊಂಡಿದ್ದರಿಂದ ಖುಷಿಯಲ್ಲಿದ್ದ ಶಾಸಕಿ ಎಂ. ರೂಪಕಲಾ, 55 ವರ್ಷಗಳಿಂದ ಇಷ್ಟು ಸುಗಮವಾಗಿ ಚುನಾವಣೆ ನಡೆದಿರಲಿಲ್ಲ. ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಸದಸ್ಯರ ಮತ್ತು ಜನತೆಯ ದೃಷ್ಟಿಯಲ್ಲಿಟ್ಟುಕೊಂಡು ಗೌರವಯುತ ಮತ್ತು ಜವಾ ಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.ಶಾಸಕಿ ಕೆಜಿಎಫ್ ಅಭಿವೃದ್ಧಿಗೆ ಹಲ ವಾರು ಕನಸುಗಳನ್ನು ಕಂಡಿದ್ದಾರೆ. ಅವರ ಕನಸನ್ನುನನಸು ಮಾಡುವುದು ನನ್ನ ಉದ್ದೇಶವಾಗಿದೆ ಎಂದು ಅಧ್ಯಕ್ಷ ವಳ್ಳಲ್‌ ಮುನಿಸ್ವಾಮಿ ತಿಳಿಸಿದರು.

ತಹಶೀಲ್ದಾರ್‌ ಕೆ.ರಮೇಶ್‌, ಪೌರಾಯುಕ್ತೆ ಸರ್ವರ್‌ ಮರ್ಚೆಂಟ್‌ ಈ ಸಂದರ್ಭದಲ್ಲಿ ಹಾಜರಿದ್ದರು. ಚುನಾವಣೆ ನಂತರ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.