ಗರಿಕೆ ಸಾಂಸ್ಕೃತಿಕ ಕೇಂದ್ರದಿಂದ ಮಕ್ಕಳಿಗೆ ಪಾಠ

ರಂಗಭೂಮಿ ಜೊತೆಗೆ ಉಚಿತ ಬೋಧನೆ

Team Udayavani, Oct 5, 2020, 4:39 PM IST

ಗರಿಕೆ ಸಾಂಸ್ಕೃತಿಕ ಕೇಂದ್ರದಿಂದ ಮಕ್ಕಳಿಗೆ ಪಾಠ

ಬಂಗಾರಪೇಟೆ: ಐದಾರು ತಿಂಗಳಿನಿಂದ ಕೋವಿಡ್ ಸೋಂಕಿನಿಂದಾಗಿ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದ್ದು, ಶಿಕ್ಷಣದಿಂದ ದೂರವಾಗಿದ್ದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಕೆಗೆ ಪ್ರಾಮುಖ್ಯತೆ ಕೊಟ್ಟು ಪ್ರತಿ ದಿನ ಉಚಿತ ಶಿಕ್ಷಣ ನೀಡಲು ತಾಲೂಕಿನ ಬೂದಿಕೋಟೆ ಹೋಬಳಿಯ ಕಾರಮಾನಹಳ್ಳಿಯ ಗರಿಕೆ ಸಾಂಸ್ಕೃತಿಕಕೇಂದ್ರ ಮುಂದಾಗಿದೆ.

ರಂಗಭೂಮಿಯೊಟ್ಟಿಗೆ ಶಿಕ್ಷಣ: ಗ್ರಾಮೀಣಭಾಗದ ಶಾಲಾ ಮಕ್ಕಳಿಗೆ ಐದು ವರ್ಷಗಳಿಂದ ಪಠ್ಯಕ್ಕೆ ಪೂರಕವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಕೊಂಡಿಯಾಗಿರುವ ರಂಗಭೂಮಿಯೊಟ್ಟಿಗೆ ಶಿಕ್ಷಣ ನೀಡುತ್ತಾ ತಾಲೂಕಿನ ಬೂದಿಕೋಟೆ ಹೋಬಳಿ ಕಾರಮಾನಹಳ್ಳಿಯ ಗರಿಕೆ ಸಾಂಸ್ಕೃತಿಕ ಕೇಂದ್ರ ಬಂದಿದೆ. ಜೊತೆಗೆ ಪ್ರತಿ ವರ್ಷ ಬೇಸಿಗೆಯಲ್ಲಿ ಬೇಸಿಗೆ ರಂಗ ಶಿಬಿರ ಆಯೋಜನೆ ಮಾಡಿ ಮಕ್ಕಳಿಂದ ನಾಟಕ ಕಟ್ಟುವಲ್ಲಿ ಸಹ ಯಶಸ್ವಿಯಾಗಿದೆ.

ಕನ್ನಡ, ಇಂಗ್ಲಿಷ್‌ ತರಗತಿ: ಕೋವಿಡ್ ಲಾಕ್‌ ಡೌನ್‌ ಕರಿನೆರಳು ಸಂಸ್ಥೆಯ ಚಟುವಟಿಕೆಗಳ ಮೇಲೆ ಬಿದ್ದಿದ್ದು, ಯಾರೂ ಸಹ ದೃತಿಗೆಡದೆ ಮಕ್ಕಳು ಶಿಕ್ಷಣ ಮತ್ತು ಇತರೆ ಚಟುವಟಿಕೆಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಹಾಗೂ ಪೋಷಕರ ಒತ್ತಾಯದ ಮೇರೆಗೆ ಪ್ರತಿ ದಿನ ಕನ್ನಡ ಹಾಗೂ ಇಂಗ್ಲಿಷ್‌ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಜಿಲ್ಲೆಗೆ ಮಾದರಿ: ಗಡಿಭಾಗದಲ್ಲಿಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಪ್ರಭಾವ ಹೆಚ್ಚಾಗಿರುವ ಕಾರಣದಿಂದ ಕನ್ನಡಕ್ಕೆ ಒತ್ತು ಕೊಡುವ ಮೂಲಕ ಈ ಭಾಗದ ಮಕ್ಕಳ ಮುಂದಿನ ಶೈಕ್ಷಣಿಕ ಪ್ರಗತಿಗೆ ಕನ್ನಡ ಭಾಷೆ ಮಾನದಂಡವಾಗಬೇಕೆಂಬ ಮಹದಾಸೆ ಸಂಸ್ಥೆ ಹೊಂದಿದೆ. ಸಂಸ್ಥೆಯು ಸರ್ಕಾರದ ಯಾವುದೇ ಸಂಪನ್ಮೂಲಗಳನ್ನು ಬಳಸದೇ, ಸಮಾನ ಮನಸ್ಕರು ಒಟ್ಟುಗೂಡಿ ಆರ್ಥಿಕ ಕ್ರೋಢಿಕರಿಸುತ್ತಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿರುವ ಗರಿಕೆ ಸಂಸ್ಥೆ ಜಿಲ್ಲೆಗೆ ಮಾದರಿಯಾಗಿದೆ.

ಪಾಠ, ಚಿತ್ರಕಲೆ, ಸಂಗೀತ: ಗರಿಕೆ ಕುಟೀರಕ್ಕೆ ಪ್ರತಿದಿನ ಕಾರಮಾನಹಳ್ಳಿ ಗ್ರಾಮದ 1ರಿಂದ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವ 24 ಹೆಣ್ಣು ಹಾಗೂ 26 ಗಂಡು ಮಕ್ಕಳು ಬರುತ್ತಿದ್ದು,ಇವರಿಗೆ ಇಬ್ಬರು ಬೋಧಕರಿದ್ದಾರೆ. ಮಕ್ಕಳು ಪಾಠಪ್ರವಚನಗಳ ಜೊತೆಗೆ ಚಿತ್ರಕಲೆ, ಲಯ, ಸಂಗೀತ, ರಂಗಭೂಮಿ ಕಲಿಯುತ್ತಿದ್ದಾರೆ.

ಇಲ್ಲಿಗೆ ಬರುವಂತಹ ಬಹಳಷ್ಟು ಮಕ್ಕಳಿಗೆ ಓದಲು ಮತ್ತು ಬರೆಯಲು ಕನ್ನಡ ಸರಿಯಾಗಿ ಬರುವುದಿಲ್ಲವಾದ್ದರಿಂದ ಕನ್ನಡ ವರ್ಣಮಾಲೆ, ವ್ಯಾಕರಣ ಕಲಿಸಲು ಒತ್ತು ಕೊಟ್ಟು ವಾರಕ್ಕೆ ಎರಡುದಿನ ಇಂಗ್ಲಿಷ್‌ ಸಹ ಕಲಿಸಲಾಗುತ್ತಿದೆ. ಸಾಕಷ್ಟು ಮಕ್ಕಳು ಬೆಳಗ್ಗೆಯಿಂದ ಸಂಜೆಯ ತನಕ ಬೇರೆಯವರ ಹಾಗೂ ತಮ್ಮದೇ ಜಮೀನಿನಲ್ಲಿ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಾ ಸಂಜೆ ಬಂದು ಸಂತೋಷದಿಂದ ಎಲ್ಲರೊಟ್ಟಿಗೆ ಬೆರೆತು ಆಟವಾಡುತ್ತಾ ಪಾಠಕಲಿಯುತ್ತಿದ್ದಾರೆ.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ವಿದ್ಯಾಗಮ ಯೋಜನೆ ಮೂಲಕ ಶಿಕ್ಷಣ ನೀಡಲು ಮುಂದಾಗಿದ್ದರೂ ಸಹ ಇನ್ನವಿದ್ಯಾರ್ಥಿಗಳು ಅತಂತ್ರದಲ್ಲಿದ್ದಾರೆ. ಕೋವಿಡ್ ಹರಡದಂತೆ ಎಚ್ಚರಿಕೆಯ ನಿಯಮಗಳನ್ನು ಪಾಲಿಸುತ್ತಾ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಕಿರಣ್‌, ಟ್ರಸ್ಟಿ, ಗರಿಕೆ ಸಾಂಸ್ಕೃತಿಕ ಕೇಂದ್ರ ಕಾರಮಾನಹಳ್ಳಿ

 

ಎಂ.ಸಿ.ಮಂಜುನಾಥ್

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.