ಕಳ್ಳಭಟ್ಟಿ ಸೇವಿಸಿದ್ರೆ ಜೀವಕ್ಕೇ ಕುತ್ತು

ಲಾಕ್‌ಡೌನ್‌ನಿಂದ ಕಳ್ಳಭಟ್ಟಿ ದಂಧೆ ಪ್ರಕರಣ ಬೆಳಕಿಗೆ: ಅಬಕಾರಿ ಸಚಿವ ನಾಗೇಶ್‌

Team Udayavani, Apr 25, 2020, 12:25 PM IST

ಕಳ್ಳಭಟ್ಟಿ ಸೇವಿಸಿದ್ರೆ ಜೀವಕ್ಕೇ ಕುತ್ತು

ಸಾಂದರ್ಭಿಕ ಚಿತ್ರ

ಕೋಲಾರ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಗಳು ಬಂದ್‌ ಆಗಿರುವುದರಿಂದ ಕಳ್ಳಭಟ್ಟಿ ತಯಾರಿಕಾ ದಂಧೆ ಪ್ರಕರಣಗಳು ಬೆಳಕಿಗೆ ಬಂದಿವೆ. ಮದ್ಯವ್ಯಸನಿಗಳು ಇದನ್ನು ಸೇವಿಸಿ ಜೀವಕ್ಕೆ ಕುತ್ತು ತಂದುಕೊಳ್ಳದಿರಿ ಎಂದು ರಾಜ್ಯ ಅಬಕಾರಿ ಸಚಿವ ಎಚ್‌.ನಾಗೇಶ್‌ ಮನವಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳಬಟ್ಟಿ ತಯಾರಿಕೆಯನ್ನು ತಡೆಯಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಈಗಾಗಲೇ ಹಲವಾರು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಕಳ್ಳಭಟ್ಟಿ ನಾಶಪಡಿಸಲಾಗಿದೆ ಎಂದು ತಿಳಿಸಿದರು. ಕ್ರಿಮಿನಲ್‌ ಪ್ರಕರಣ: ಲಾಕ್‌ಡೌನ್‌ ಆರಂಭದ ದಿನದಿಂದ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದ್ದು, ಲಾಕ್‌ಡೌನ್‌ ಮುಗಿಯುವ ಮುನ್ನಾ ದಾಸ್ತಾನು ಪುಸ್ತಕ ಪರಿಶೀಲನೆ ನಡೆಸಿದಾಗ ವ್ಯತ್ಯಾಸ ಕಂಡುಬಂದರೆ ಬಾರ್‌ ಲೈಸನ್ಸ್‌ ರದ್ದುಪಡಿಸುವುದರ ಜೊತೆಗೆ ಮಾಲಿಕನ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಲು ಸೂಚಿಸಿರುವುದಾಗಿ ತಿಳಿಸಿದರು.

ಮಾಹಿತಿ ನೀಡಿದರೆ ಕ್ರಮ: ಹೆಂಡ, ಕಳ್ಳಭಟ್ಟಿ ಸಾರಾಯಿಯನ್ನು ತಯಾರಿಕೆ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಸಾರ್ವಜನಿಕರು ನಿಖರ ಮಾಹಿತಿ ನೀಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ವೈರಸ್‌ ನಿಯಂತ್ರಿಸಲು ಪ್ರಧಾನಿ ಮೋದಿ ಮಹತ್ತರ ತೀರ್ಮಾನ ಕೈಗೊಂಡು ಲಾಕ್‌ಡೌನ್‌ ಜಾರಿಗೆ ತಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್‌ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಕೋರಿದರು.

ಮಾಜಿ ಸಿಎಂ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ: ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ರಾಮನಗರ ಕಾರಾಗೃಹದಿಂದ ಖೈದಿಗಳನ್ನು ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕಾರಾಗೃಹಕ್ಕೆ ವರ್ಗಾವಣೆ ಮಾಡುತ್ತಿರುವ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಮುನಿಸ್ವಾಮಿ, ಸರಕಾರಕ್ಕೆ ಏನು ಮಾಡಬೇಕೆಂಬ ಅರಿವಿದೆ. ಈ ಸಂದರ್ಭದಲ್ಲಿ ಯಾರು ಏನೂ ಮಾತನಾಡಿದರೂ ತಲೆಕೆಡಿಸಿ ಕೊಳ್ಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು. ಲಾಕ್‌ಡೌನ್‌ ಆದೇಶವನ್ನು ಪ್ರತಿಯೊಬ್ಬರು ಪಾಲಿಸಬೇಕು, ಮಹಾಮಾರಿ ಕೋವಿಡ್ ವೈರಸ್‌ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.