ಶಾಶ್ವತ ನೆಲೆ ಇಲ್ಲದೆ, 15 ವರ್ಷದಿಂದ ಗುಡಿಸಲಲ್ಲೇ ವಾಸ

ದಿನಗೂಲಿಯನ್ನೇ ನಂಬಿರುವ 10 ಕುಟುಂಬಗಳಿಗೆ ಗುರುತಿನ ಚೀಟಿ ಇದ್ದರೂ ಸ್ವಂತ ಸೂರು ಇಲ್ಲ

Team Udayavani, Jul 2, 2019, 11:58 AM IST

kolar-tdy-2..

ಬೇತಮಂಗಲ ಬಳಿಯ ಹುಲ್ಕೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದ ಬಳಿ ಗುಡಿಸಲು ನಿರ್ಮಿಸಿಕೊಂಡು ಜೀನವ ನಡೆಸುತ್ತಿರುವ 10 ಕುಟುಂಬಗಳು.

ಬೇತಮಂಗಲ: ಪ್ರತಿಯೊಬ್ಬರು ಸ್ವಂತ ಸೂರು ಒಂದಬೇಕು, ಯಾರೂ ಕುಡಿಸಲಿನಲ್ಲಿ ವಾಸ ಮಾಡಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ವಸತಿ ಸೌಲಭ್ಯ ಕಲ್ಪಿಸುವ ಕೆಲಸ ಮಾಡುತ್ತಿದೆ. ಆದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೋ ಏನೋ ಹಲವು ಬಡ ಕುಟುಂಬಗಳು ಇನ್ನೂ ಗುಡಿಸಲಿನಲ್ಲೇ ವಾಸಿಸುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದೆ.

ಗ್ರಾಮ ಸಮೀಪದ ಹುಲ್ಕೂರು ಗ್ರಾಪಂ ವ್ಯಾಪ್ತಿಗೆ ಒಳಪಡುವ ಕೋಡಿಹಳ್ಳಿ ಗ್ರಾಮದಿಂದ 100 ಮೀಟರ್‌ ದೂರದಲ್ಲಿ 15 ವರ್ಷಗಳಿಂದ 10 ಕುಟುಂಬಗಳು ಮನೆ ನಿರ್ಮಿಸಿಕೊಳ್ಳಲು ಸ್ವಂತ ನಿವೇಶನ ಮತ್ತು ಹಣವಿಲ್ಲದೆ ಗುಡಿಸಿಲಿನಲ್ಲೇ ವಾಸ ಮಾಡುತ್ತಿವೆ. ಆದರೂ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ವಲಸೆ ಬಂದಿದ್ದರು: ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ಕುಟುಂಬಗಳು, 15 ವರ್ಷಗಳ ಹಿಂದೆ ಉದ್ಯೋಗವನ್ನರಿಸಿ ಉತ್ತರ ಪ್ರದೇಶದಿಂದ ಇಲ್ಲಿಗೆ ವಲಸೆ ಬಂದು, ಒಂದೇ ಸ್ಥಳದಲ್ಲೇ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿವೆ. ಅಂದು ಕೇವಲ 10 ಮಂದಿ ವಲಸೆ ಬಂದಿದ್ದು, ಇದೀಗ 50ಕ್ಕೆ ಏರಿಕೆಯಾಗಿದೆ. ವಿಭಜನೆಯಾಗಿ 10 ಕುಟುಂಬಗಳು ಜೀವನ ನಡೆಸುತ್ತಿದ್ದಾರೆ.

ಮಕ್ಕಳಿಗಾಗಿ ಸ್ವಂತ ಸೂರು ಬೇಕು: ಉತ್ತರ ಪ್ರದೇಶದಿಂದ ಉದ್ಯೋಗ ಅರಿಸಿ ಬಂದಾಗ ಬೇತಮಂಗಲ ನಿವಾಸಿಯೊಬ್ಬರು ತಮ್ಮ ಸ್ವಂತ ಜಮೀನಿನಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲು ಸ್ಥಳಾವಕಾಶ ಕಲ್ಪಿಸಿದ್ದರು. ಇದುವರೆಗೂ ಅಲ್ಲೇ ಇದ್ದಾರೆ. 25 ಮಕ್ಕಳು ಗ್ರಾಮ ಹಾಗೂ ಬೇತಮಂಗಲ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಭವಿಷ್ಯಕ್ಕಾಗಿ ನಮಗೆ ಶಾಶ್ವತ ಮನೆ ಅವಶ್ಯಕವಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಇಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬ ಪ್ರಜೆ, ಮಗುವಿಗೂ ನಮ್ಮ ರಾಜ್ಯದ ಸೌಲಭ್ಯಗಳು ದೊರೆಯುತ್ತಿವೆ. ಆದರೂ ಶಾಶ್ವತ ಪರಿಹಾರ ಮಾತ್ರ ದೊರೆಯುತ್ತಿಲ್ಲವೆಂಬ ಕೊರಗು ಇವರಲ್ಲಿ ಕಾಡುತ್ತಿದೆ. ಆಧಾರ್‌, ಪಡಿತರ ಚೀಟಿ, ಮತದಾನದ ಗುರುತಿನ ಚೀಟಿ ಸೇರಿ ಎಲ್ಲಾ ದಾಖಲೆಗಳನ್ನು ಹೊಂದಿದ್ದಾರೆ. ಪ್ರತಿ ತಿಂಗಳು ಪಡಿತರ ಹಾಗೂ ಇತರೆ ಸೌಲಭ್ಯವೂ ದೊರಕುತ್ತಿದೆ. ವಿದ್ಯುತ್‌ ಸಂಪರ್ಕವನ್ನು ಪಡೆದುಕೊಂಡಿದ್ದು, ವಿದ್ಯುತ್‌ ಬಿಲ್ ಸಹ ಪಾವತಿ ಮಾಡುತ್ತಿದ್ದಾರೆ. ಕೇವಲ ಚುನಾವಣೆ ದಿನಗಳಲ್ಲಿ ಜನಪ್ರತಿನಿಧಿಗಳು ಬಂದು ನಮಗೆ ಮತ ನೀಡಿ, ಮನೆ ನಿರ್ಮಿಸುವ ಜವಾಬ್ದಾರಿ ನಮ್ಮದೆಂದು ಹೇಳಿ ಹೋದವರು ಮತ್ತೆ ಇತ್ತ ತಿರುಗಿಯೂ ನೋಡಲ್ಲ ಎಂದು ಗುಡಿಸಲು ನಿವಾಸಿ ಅವಲ್ದಾರ್‌ ಹೇಳಿದರು.

ಸರ್ಕಾರದ ಗೋಮಾಳ ಮತ್ತು ಇತರೆ ಭೂಮಿಯಲ್ಲಿ ನಮಗೆ ಮನೆ ನಿರ್ಮಿಸಿಕೊಳ್ಳುವಷ್ಟು ಸ್ಥಳಾವಕಾಶ ಕೊಟ್ಟು, ಸರ್ಕಾರದಿಂದ ಆಶ್ರಯ ಯೋಜನೆ ಅಡಿ ಮನೆ ನಿರ್ಮಿಸಿಕೊಟ್ಟರೆ ನಮ್ಮ ಬದುಕು ಹಸನಾಗುತ್ತದೆ ಎಂದು ಮತ್ತೂಬ್ಬ ನಿವಾಸಿ ನಾಜೀಮ್‌ ಹೇಳುತ್ತಾರೆ.

ಕೂಲಿ ಮಾಡಿದರೆ ಮಾತ್ರ ಜೀವನ: ಪ್ರತಿದಿನ ರೈತರ ತೋಟ, ವೇ ಬ್ರೀಡ್ಜ್, ಇತರೆ ಕ್ಷೇತ್ರದಲ್ಲಿ ದಿನಗೂಲಿ ಮಾಡಿ ಜೀವನ ನಡೆಸುತ್ತಿದ್ದು, ಅಂದಿನ ಜೀವನಕ್ಕೂ ಸಂಪಾದನೆ ಸಾಕಾಗುತ್ತಿಲ್ಲ. ಮಕ್ಕಳಿಗೆ ಮದುವೆ, ಸ್ವಂತ ಮನೆಗೆ ನಿವೇಶನ, ಮನೆ ನಿರ್ಮಾಣಕ್ಕೆ ಹಣ ಎಲ್ಲಿಂದ ಬರುತ್ತದೆ ಎಂದು ಸಿತ್ತಾರ್‌ ತಿಳಿಸಿದರು.

ಗುಡಿಸಲು ನಿವಾಸಿಗಳಾದ ಇವರ ಮನೆಯ ಕೊಳಚೆ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲ, ಗ್ರಾಪಂನಿಂದ ಕೇವಲ ಶೌಚಾಲಯ ನಿರ್ಮಿಸಿ ಕೊಡಲಾಗಿದೆ. ಈ ಬಗ್ಗೆ ಈ 10 ಕುಟುಂಬಗಳ ನಿವಾಸಿಗಳು 2-3 ಬಾರಿ ಶಾಸಕಿ ರೂಪಕಲಾಗೆ ಮನವಿ ಮಾಡಿದ್ದರೂ ಕೇವಲ ಭೇಟಿ ನೀಡಿ ಮನೆ ನಿರ್ಮಾಣಕ್ಕೆ ನಿವೇಶನ ಒದಗಿಸುವ ಭರವಸೆ ಕೊಟ್ಟರೂ ಇದುವರೆಗೂ ಈಡೇರಿಲ್ಲ ಎಂದು ಇಫ್ತಾರ್‌, ಚಾನ್‌ ದೂರಿದ್ದಾರೆ.

● ಆರ್‌.ಪುರುಷೋತ್ತಮ್‌ ರೆಡ್ಡಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.