9.46 ಲಕ್ಷ ಬಿಪಿಎಲ್‌ ಕಾರ್ಡ್‌ ಮಹಿಳೆಯರಿಗೆ ಸಾಲ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿಕೆ

Team Udayavani, Sep 11, 2020, 1:58 PM IST

9.46 ಲಕ್ಷ ಬಿಪಿಎಲ್‌ ಕಾರ್ಡ್‌ ಮಹಿಳೆಯರಿಗೆ ಸಾಲ

ಕೋಲಾರ: ಅವಿಭಜಿತ ಜಿಲ್ಲೆಯ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳ ಬಿಪಿಎಲ್‌ ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಮಹಿಳೆಯರಿಗೂ ಆರ್ಥಿಕ ಶಕ್ತಿ ತುಂಬಲು ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ತಲುಪಿಸುವ ಸಂಕಲ್ಪ ಮಾಡಿರುವುದಾಗಿ ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ನಗರದ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಗುರುವಾರ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ ಆಯೋಜಿಸಿದ್ದ ಸಾಲ ವಿತರಣಾಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸಾಲದ ಚೆಕ್‌ ವಿತರಿಸಿ ಅವರು ಮಾತನಾಡಿದರು. 4.16 ಲಕ್ಷ ಕುಟುಂಬಗಳಿಗೆ ಸಾಲ: ಎರಡೂಜಿಲ್ಲೆಗಳಲ್ಲಿ 9.46 ಲಕ್ಷ ಬಿಪಿಎಲ್‌ ಕುಟುಂಬಗಳಿವೆ. ಈಗಾಗಲೇ 4.16 ಲಕ್ಷ ಕುಟುಂಬಗಳಿಗೆ ಸಾಲ ನೀಡಿದ್ದು, ಉಳಿದ 5.25 ಲಕ್ಷ ಕುಟುಂಬದ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಬಡ್ಡಿರಹಿತ ಸಾಲ: ಮಹಿಳಾ ಸ್ವಸಹಾಯ ಸಂಘಗಳಿಗೆ ಈಗಾಗಲೇ 5 ಲಕ್ಷ ವಿತರಿಸುತ್ತಿರುವುದನ್ನು ಮುಂದಿನ ದಿನಗಳಲ್ಲಿ 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. ಪ್ರತಿಯೊಬ್ಬ ಮಹಿಳೆಗೆ ಒಂದು ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡುವ ಮೂಲಕ ಸ್ವಾವಲಂಬಿಗಳಾಗಿಸಿ ಡಿಸಿಸಿ ಬ್ಯಾಂಕ್‌ ಮೂಲಕ ಸಮಾಜದ ಮುಖ್ಯ ವಾಹಿನಿಗೆ  ತರುವ ಆಶಯ ಇದೆ ಎಂದು ತಿಳಿಸಿದರು.ಕಸಬಾ ಸೊಸೈಟಿಗೆ 9 ಕೋಟಿ ಸಾಲ: ಬ್ಯಾಂಕ್‌ನ ನಿರ್ದೇಶಕ ನಾಗನಾಳ ಸೋಮಣ್ಣ, ಕೋವಿಡ್‌-19 ಸೋಂಕಿನಿಂದಾಗಿ ಬೃಹತ್‌ ಸಮಾರಂಭ ಮಾಡಲು ಅಡಚಣೆ ಇರುವುದರಿಂದ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಸಬಾ ಸೊಸೈಟಿಗೆ 9 ಕೋಟಿ ರೂ. ಸಾಲವನ್ನು 450ಮಹಿಳಾ ಸ್ವಸಹಾಯ ಸಂಘಗಳಿಗೆ ಮಂಜೂರು ಮಾಡಲಾಗಿದ್ದು, ಇದು ಮೂರನೇ ಹಂತದ ಸಾಲ ವಿತರಣೆ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ಬ್ಯಾಂಕ್‌ನ ನಿರ್ದೇಶಕ ಕೆ.ವಿ.ದಯಾನಂದ್‌ ಮಾತನಾಡಿ, ಡಿಸಿಸಿ ಬ್ಯಾಂಕ್‌ ಇಂದು ಮಹಿಳೆಯರ ಹಾಗೂ ರೈತರ ಪಾಲಿನ ಕಲ್ಪವೃಕ್ಷವಾಗಿದೆ. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರು ವೈಯಕ್ತಿಕ ವಾಗಿ ಬ್ಯಾಂಕ್‌ನಲ್ಲಿ ಖಾತೆಗಳನ್ನು ತೆರೆದು ನಿಮ್ಮ ಉಳಿತಾಯ, ಠೇವಣಿ ಸೇರಿದಂತೆ ಎಲ್ಲಾ ವಹಿವಾಟುಗಳನ್ನು ಇದೇ ಬ್ಯಾಂಕ್‌ನಲ್ಲಿ ಮಾಡುವಂತಾಗ ಬೇಕು ಎಂದು ಮನವಿ ಮಾಡಿದರು. ಕಸಬಾ ಸೊಸೈಟಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್‌, ನಿರ್ದೇಶಕರಾದ ಶ್ರೀರಾಮರೆಡ್ಡಿ, ಅಮ್ಮೇರಹಳ್ಳಿ ಶ್ರೀನಿವಾಸ್‌, ಬೆಗ್ಲಿ ಪ್ರಕಾಶ್‌, ಕಾರ್ಯದರ್ಶಿ ವೆಂಕಟೇಶ್‌, ಬ್ಯಾಂಕ್‌ ವ್ಯವಸ್ಥಾಪಕ ಅಂಬರೀಶ್‌ ಹಾಜರಿದ್ದರು.

ಮಹಿಳೆಯರು, ರೈತರಿಗೆ 1500 ಕೋಟಿ ರೂ. ಸಾಲ :  ಬ್ಯಾಂಕ್‌ ನಿರ್ದೇಶಕ ಎಂ.ಎಲ್‌.ಅನಿಲ್‌ ಕುಮಾರ್‌ ಮಾತನಾಡಿ, ಡಿಸಿಸಿ ಬ್ಯಾಂಕ್‌ನಿಂದ ರೈತರಿಗೆ ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಗೋವಿಂದಗೌಡರು ಅಧ್ಯಕ್ಷರಾದ ಮೇಲೆ 1500 ಕೋಟಿ ರೂ. ಸಾಲಸೌಲಭ್ಯ ಬಡ್ಡಿ ರಹಿತವಾಗಿ ಕಲ್ಪಿಸಿದೆ. ಈವರೆಗೆ 320 ಕೋಟಿ ರೂ.ಬಡ್ಡಿಯನ್ನು ಸರ್ಕಾರ ಪಾವತಿಸುತ್ತಿದೆ ಎಂದರು. ಡಿಸಿಸಿ ಬ್ಯಾಂಕಿನಲ್ಲಿ 320 ಕೋಟಿ ರೂ. ಠೇವಣಿ ಇರುವುದರಿಂದ 1500 ಕೋಟಿ ರೂ. ಸಾಲ ನೀಡುವ ಶಕ್ತಿ ಹೊಂದಿದೆ. ಅದೇ ರೀತಿ 600 ಕೋಟಿ ಠೇವಣಿ ಹೊಂದಿದಲ್ಲಿ 3000 ಸಾವಿರ ಕೋಟಿ ಸಾಲ ಸೌಲಭ್ಯ ಕಲ್ಪಿಸಲು ಬ್ಯಾಂಕ್‌ ಶಕ್ತವಾಗುತ್ತದೆ ಎಂದರು.

ಪ್ರತಿ ಬಿಪಿಎಲ್‌ ಕುಟುಂಬದ ಮಹಿಳೆಗೂಸಾಲ ತಲುಪಿಸುವ ನಮ್ಮ ಸಂಕಲ್ಪ ಕೈಗೂಡಿ ದರೆ, “ಜಾತಿ, ಧರ್ಮ, ಪಕ್ಷಾಧಾರಿತ ಸಾಲ ವಿತರಣೆ’ ಎಂಬ ಸಂಕುಚಿತ ಮನಸ್ಸುಗಳ ಆರೋಪಗಳಿಗೆ ಶಾಶ್ವತವಾಗಿ ಕಡಿವಾಣ ಬೀಳಲಿದೆ. ಬ್ಯಾಲಹಳ್ಳಿ ಗೋವಿಂದಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.