ಕೇಂದ್ರದ ದುರಾಡಳಿತದ ಬಗ್ಗೆ ಅರಿವು ಮೂಡಿಸಿ


Team Udayavani, Feb 23, 2019, 7:28 AM IST

kendra-dur.jpg

ಬಂಗಾರಪೇಟೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿ ಗ್ರಾಮ ಮಟ್ಟದಲ್ಲಿಯೂ ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಮೂಲಕ ಅರಿವು ಮೂಡಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ತಿಳಿಸಿದರು. ಬಂಗಾರಪೇಟೆ ಪಟ್ಟಣದ ಶಾಂತಿನಗರದ ಎಎನ್‌ಆರ್‌ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿದರು. 

ಕಾಂಗ್ರೆಸ್‌ ಸಂಘಟನೆ ಮಾಡಿ: ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್‌ನಿಂದ ಚುನಾವಣೆಗಳಲ್ಲಿ ಮಾತ್ರ ಪಾತ್ರ ವಹಿಸುವುದು ಮುಖ್ಯವಲ್ಲ. ನಿರಂತರವಾಗಿ ಕಾಂಗ್ರೆಸ್‌ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಜನರು ಸಂಕಷ್ಟಗಳನ್ನು ಅನುಭವಿಸುವಂತಾಗಿದೆ.

ಎಲ್ಲಾ ಜಾತಿ ಧರ್ಮಗಳಿಗೆ ಸಾಮಾಜಿಕ ನ್ಯಾಯ ನೀಡಿ ಕೊಂಡೊಯುವ ಶಕ್ತಿ ಕಾಂಗ್ರೆಸ್‌ಗೆ ಮಾತ್ರವಿದೆ. 1969ರಲ್ಲೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೂರದೃಷ್ಟಿಯಿಂದ ಎಲ್ಲಾ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲು ಮುಂದಾಗಿದ್ದರು. ಆ ಕಾರ್ಯವನ್ನು ಪ್ರಧಾನಿ ಮೋದಿ ಪ್ರಸ್ತುತ ಹಮ್ಮಿಕೊಂಡು ತಮ್ಮ ಸಾಧನೆ ಎಂದು ಬಿಂಬಿಸುತ್ತಿದ್ದಾರೆಂದು ಟೀಕಿಸಿದರು.

ಮನವರಿಕೆ ಮಾಡಿ: ಕೇಂದ್ರ ಸರ್ಕಾರದ ಬಿಜೆಪಿ ಸಚಿವ ಅನಂತಕುಮಾರ್‌ ಹೆಗಡೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚನೆ ಮಾಡಿರುವ ಸಂವಿಧಾನವನ್ನೇ ಬದಲಾಯಿಸುವ ಮಟ್ಟಕ್ಕೆ ಹೋಗುತ್ತಿರುವುದರಿಂದ ಕಾಂಗ್ರೆಸ್‌ ಸಂವಿಧಾನ ಉಳಿಸುವ ಕೆಲಸ ಮಾಡುತ್ತಿದೆ. ಹೀಗಾಗಿ ಮತದಾರರಿಗೆ ಮನವರಿಕೆ ಮಾಡಿಕೊಳ್ಳುವ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಹೇಳಿದರು.

ಮನಗೆಲ್ಲಿ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ದೇಶಕ್ಕೆ ಉತ್ತಮ ಭವಿಷ್ಯವಿದೆ. ಆದರೆ, ಬಿಜೆಪಿಯವರು ಸೋಷಿಯಲ್‌ ಮೀಡಿಯಾವನ್ನು ಸದ್ಬಳಕೆ ಮಾಡಿಕೊಂಡು ಅವರ ಸಾಧನೆಗಳನ್ನು ಬಿಂಬಿಸಿ ಕಾಂಗ್ರೆಸ್‌ನ್ನು ಟೀಕಿಸುತ್ತಿದ್ದಾರೆ. ಕಾಂಗ್ರೆಸ್‌ ಮುಖಂಡರೂ ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತ ಹಾಗೂ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರದ ಸಾಧನೆಗಳನ್ನು ಬಿಂಬಿಸಿ ಮತದಾರರ ಮನ ಗೆಲ್ಲಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಬೂತ್‌ ಮಟ್ಟದ ಕಾರ್ಯಕರ್ತರು ಮನೆ ಮನೆಗೂ ತೆರಳಿ ಪಕ್ಷವನ್ನು ಬೇರುಮಟ್ಟದಲ್ಲಿ ಬಲಗೊಳಿಸಬೇಕೆಂದು ಸೂಚಿಸಿದರು.

ದುರಾಡಳಿತ: ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಟವಾಗಿದೆ. ನಮಗೆ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ. ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷ ಯಾರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೂ ಅವರನ್ನು ಬೆಂಬಲಿಸಲಾಗುವುದು. ಕೇಂದ್ರ ಸರ್ಕಾರದ ದುರಾಡಳಿತದಿಂದಲೇ ದೇಶದೊಳಗೆ ಭಯೋತ್ಪಾದನೆ ತಾಂಡವವಾಡುತ್ತಿದೆ. ಮತ್ತೆ ಬಿಜೆಪಿ ಗೆಲ್ಲಿಸಿದರೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ವೆಂಕಟೇಶ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಎ.ಪಾರ್ಥಸಾರಥಿ, ಬೂದಿಕೋಟೆ ನಾಗರಾಜ್‌, ಪುರಸಭೆ ಅಧ್ಯಕ್ಷ ಎಂ.ಗುಣಶೀಲನ್‌, ಉಪಾಧ್ಯಕ್ಷ ಷಫೀ, ಮಾಜಿ ಅಧ್ಯಕ್ಷ ಶಂಶುದ್ಧೀನ್‌ ಬಾಬು, ಎಪಿಎಂಸಿ ಅಧ್ಯಕ್ಷ ಎಸ್‌.ನಾರಾಯಣಗೌಡ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಚ್‌.ಕೆ.ನಾರಾಯಣಸ್ವಾಮಿ, ಮುಖಂಡರಾದ ಹೊಳಲಿ ಪ್ರಕಾಶ್‌, ಕಾರ್ತಿಕ್‌, ಉದಯಶಂಕರ್‌, ಊರುಬಾಗಿಲು ಶ್ರೀನಿವಾಸ್‌, ಮುನಿಯಪ್ಪ ಇದ್ದರು.

ಟಾಪ್ ನ್ಯೂಸ್

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.