ಎಂಡಿ ವಿದ್ಯಾರ್ಥಿನಿ ಕ್ವಾರಿಗೆ ಹಾರಿ ಆತ್ಮಹತ್ಯೆ

Team Udayavani, Jun 6, 2023, 2:27 PM IST

ಎಂಡಿ ವಿದ್ಯಾರ್ಥಿನಿ ಕ್ವಾರಿಗೆ ಹಾರಿ ಆತ್ಮಹತ್ಯೆ

ಕೋಲಾರ: ಹೊಸಕೋಟೆಯ ಎಂವಿಜೆ (ಎಂ.ವಿ. ಜಯರಾಮನ್‌) ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿ ಭಾನುವಾರ ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದರ್ಶಿನಿ (24) ಮೃತ ಯುವತಿ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯವರ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ಮಕ್ಕಳ ತಜ್ಞ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನು ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರುಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಹೇಳಿ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕ್ವಾರಿಯಲ್ಲಿ ಹಾರಿ ಆತ್ಮಹತ್ಯೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯವರ ಕಿರುಕುಳ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿ ದ್ದಾರೆ. ಕೊಪ್ಪಳದಲ್ಲಿ ಎಂಬಿಬಿಎಸ್‌ ಮುಗಿಸಿ, ಕಳೆದ 7 ತಿಂಗಳ ಹಿಂದೆ ಹೊಸಕೋಟೆ ಬಳಿ ಇರುವ ಎಂವಿಜೆ ಮೆಡಿಕಲ್‌ ಕಾಲೇಜಿನಲ್ಲಿ ಎಂಡಿ ವಿದ್ಯಾಭ್ಯಾಸಕ್ಕೆ ಆಗಮಿಸಿದ್ದಳು. ಕಳೆದ 2 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ವಿದ್ಯಾರ್ಥಿನಿ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು, ವೈದ್ಯಳಾಗಬೇಕೆಂಬ ಕನಸು ಹೊತ್ತಿದ್ದಳು. ಆದರೆ ಭಾನುವಾರ ಕೋಲಾರದ ಬಳಿ ಇರುವ ಕ್ವಾರಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಕ್ಕಳ ತಜ್ಞೆಯಾಗಿ ಉಚಿತ ಪ್ರವೇಶವನ್ನು ಪಡೆದಿದ್ದ ದರ್ಶಿನಿಗೆ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.

ದಿನದ 24 ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾಗಿದ್ದು ಊಟಕ್ಕೂ ಸಹ ಬಿಡುತ್ತಿರಲಿಲ್ಲ ಎನ್ನಲಾಗಿದೆ.

ಹಿರಿಯ ವೈದ್ಯ ಮಹೇಶ್‌ ಎಂಬಾತನ ಕಿರುಕುಳ ಹೆಚ್ಚಾಗಿದ್ದು, ಕಾಫಿ ಹೆಸರಿನಲ್ಲಿ ದರ್ಶಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಆಡಳಿತ ಮಂಡಳಿಯವರ ಕಿರುಕುಳವನ್ನು ಪ್ರಶ್ನೆ ಮಾಡಿದರೆ ಇಂಟರ್ನಲ್‌ ಮಾರ್ಕ್‌ ಕೊಡುವುದಿಲ್ಲ ಎಂಬ ಭಯದಿಂದ, ಮನೆಯವರಿಗೆ ಕಿರುಕುಳದ ಕುರಿತು ತಿಳಿಸದೆ, ಸ್ನೇಹಿತ ಮಣಿ ಎಂಬುವರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಳು.

ವೈದ್ಯನ ವಿರುದ್ದ ಪೋಷಕರು ದೂರು: ಆತ್ಮಹತ್ಯೆಗೂ ಮುನ್ನ ಸ್ನೇಹಿತ ಮಣಿಗೆ ಕರೆ ಮಾಡಿ ಘಟನೆಯನ್ನು ತಿಳಿಸಿ ಫೋನ್‌ ಕಟ್‌ ಮಾಡಿದ್ದಾಳೆ. ನಂತರ ಮಣಿಯ ಕರೆಗೂ ಸ್ಪಂದಿಸದೇ ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದರ್ಶಿನಿ ಕಾಲೇಜಿನಿಂದ ಇಷ್ಟು ದೂರು ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ತಮ್ಮ ಅನುಮಾನ ವ್ಯಕ್ತಪಡಿಸಿದ್ದಾನೆ.

ಘಟನೆ ಸಂಬಂಧ ಆಡಳಿತ ಮಂಡಳಿ ಹಾಗೂ ಹಿರಿಯ ವೈದ್ಯನ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಐಪಿಸಿ ಸೆಕ್ಷನ್‌ 306 ಹಾಗೂ 345 ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.