ಎಂಎಲ್‌ಸಿ ರವಿಕುಮಾರ್ ಕಾರು ಢಿಕ್ಕಿ: ಜನರಿಂದ ತರಾಟೆ
Team Udayavani, Dec 4, 2022, 8:18 PM IST
ಕೋಲಾರ: ವಿಧಾನಪರಿಷತ್ ಸದಸ್ಯ ರವಿಕುಮಾರ್ ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಲಕ್ಷ್ಮೀಸಾಗರ ಗೇಟ್ ಬಳಿ ನಡೆದಿದೆ.
ಕೋಲಾರಕ್ಕೆ ಆಗಮಿಸುತ್ತಿದ್ದ ವೇಳೆ ಎಂಎಲ್‌ಸಿ ರವಿಕುಮಾರ್ ಅವರಿದ್ದ ಕಾರು ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮದ ಗೋಪಾಲ್ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾದರೂ ಕಾರಿನಿಂದ ಕೆಳಗಿಳಿಯದೆ ಶಾಸಕರು ದರ್ಪ ತೋರಿದ್ದಾರೆಂದು ಆರೋಪಿಸಿದ ಸ್ಥಳೀಯರು, ರವಿ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದು, ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್
ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲಾತಿಗಳು ಬೆಂಕಿಗಾಹುತಿ