ಮುಳಬಾಗಿಲಲ್ಲಿ ಕೆರೆ ಒತ್ತುವರಿ ತೆರವಿಗೆ ಗ್ರಹಣ


Team Udayavani, Apr 29, 2019, 10:28 AM IST

lake-kol

ಮುಳಬಾಗಿಲು: ಎ.ಟಿ.ರಾಮಸ್ವಾಮಿ ಮತ್ತು ಬಾಲಸುಬ್ರಮಣ್ಯಂ ವರದಿಗಳ ಅನ್ವಯ ರಾಜ್ಯ ಉಚ್ಚನ್ಯಾಯಾಲಯ ಆದೇಶದಂತೆ ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ಮತ್ತು ತೆರವುಗೊಳಿಸಲು ರಚಿಸಲಾಗಿದ್ದ ಯೋಜನೆ ತಾಲೂಕಿ ನಲ್ಲಿ ಕಳೆದ 4-5 ವರ್ಷಗಳಿಂದ ಗ್ರಹಣ ಹಿಡಿದಿದೆ.

ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ರಾಜ್ಯ ಸರ್ಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ 1964ಕ್ಕೆ ತಿದ್ದುಪಡಿ ತಂದು 192ಎ ಅನ್ವಯ ಒತ್ತುವರಿದಾರರನ್ನು ಶಿಕ್ಷೆಗೆ ಗುರಿಪಡಿಸಲು ಕಾಯ್ದೆಯಲ್ಲಿ ಈಗಾಗಲೇ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ಎ.ಟಿ.ರಾಮಸ್ವಾಮಿ ಮತ್ತು ಬಾಲಸುಬ್ರಮಣ್ಯಂ ವರದಿಗಳ ಅನ್ವಯ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಭೂಮಿಗಳ ಸಂರಕ್ಷಣೆ ಮತ್ತು ಒತ್ತುವರಿ ಜಮೀನು ತೆರವುಗೊಳಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಲತಾ ಕೃಷ್ಣರಾವ್‌ 2013ರ ಮೇ 27 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರು.

ಅದರಂತೆ ಮೂಲಭೂತವಾಗಿ ಕಂದಾಯ ಇಲಾಖೆ ಸರ್ಕಾರದ ಭೂಮಿ ಗುರ್ತಿಸಿ ಅದರ ವಿಸ್ತೀರ್ಣ ಅಳತೆ ಮಾಡಿ ಒತ್ತುವರಿ ತೆರವುಗೊಳಿಸಲು ಸರ್ಕಾರ ಕಳೆದ ವರ್ಷ ಸುತ್ತೋಲೆ ಹೊರಡಿಸಿತ್ತು. ಅದರಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಂದಿನ ಮುಳಬಾಗಿಲು ತಹಶೀಲ್ದಾರ್‌ ಎಂ.ಗಂಗಪ್ಪ, ತಾಲೂಕಿನ ಆವಣಿ, ಕಸಬಾ, ತಾಯಲೂರು, ಬೈರಕೂರು, ದುಗ್ಗಸಂದ್ರ ಸೇರಿ 5 ಹೋಬಳಿಯಲ್ಲಿನ 433 ಕೆರೆ, ಸ್ಮಶಾನ, ಗುಂಡು ತೋಪು ಒತ್ತುವರಿ ತೆರವುಗೊಳಿಸಲು ಅಧೀನ ಅಧಿಕಾರಿಗಳಿಗೆ ಸೂಚಿಸಿ ತಾವೂ ಕಾರ್ಯಪ್ರವೃತ್ತರಾಗಿದ್ದರು. ಅಲ್ಲದೇ, ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದರು.

ಅದರಂತೆ ಇದುವವರೆಗೂ 211 ಕೆರೆಗಳಲ್ಲಿನ 366 ಎಕರೆ ಜಮೀನನ್ನು ತೆರವುಗೊಳಿಸಿ 81 ಜನರ ವಿರುದ್ಧ ಕ್ರಿಮಿನಲ್ ಮೊಕದೊಮ್ಮೆ ದಾಖಲಿಸುವ ಮೂಲಕ ಶೇ.75 ಕಾರ್ಯಾಚರಣೆ ಮುಗಿಸಿದ್ದರು. ಉಳಿದ ಶೇ.25 ಕೆಲಸ ಬಾಕಿ ಉಳಿದಿತ್ತು. ನಂತರ ಜಿಲ್ಲಾಧಿಕಾರಿ ತ್ರಿಲೋಕ್‌ಚಂದ್ರ ಅವರು ಒತ್ತುವರಿ ತೆರವು ಕಾರ್ಯಾಚರಣೆ ವರದಿಯನ್ನು ಕಳೆದ ಫೆ.15ರಂದು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ಎಲ್ಲಾ ಕೆರೆಗಳನ್ನು ತೆರವುಗೊಳಿಸಲು ಸೂಚಿಸಿದ್ದರು. ಅದರಂತೆ ಹಿಂದಿನ ತಹಶೀಲ್ದಾರ್‌ ಉಳಿದ 83 ಕೆರೆಗಳ ಸರ್ವೆಗೆ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಿದ್ದರು. ಅದರಂತೆ ಕೆಲವು ಕೆರೆಗಳನ್ನು ಸರ್ವೆ ಮಾಡಿದ್ದರೂ ತೆರವು ಕಾರ್ಯಾಚರಣೆ ಮಾಡದ ಕಾರಣ ಮತ್ತಷ್ಟು ಜಮೀನು ಒತ್ತುವರಿಯಾಗುತ್ತಿದೆ.

ನನೆಗುದಿಗೆ: ಕಳೆದ 4-5 ವರ್ಷದಿಂದ ತಾಲೂಕಿಗೆ ಹಲವಾರು ತಹಶೀಲ್ದಾರ್‌ಗಳು ತಾಲೂಕಿಗೆ ಬಂದರೂ ಯೋಜನೆ ಕುರಿತು ಕಿಂಚಿತ್ತೂ ಗಮನಹರಿಸದೇ ಕಾಲಹರಣ ಮಾಡಿದ್ದಾರೆ. ಸರ್ಕಾರದ ಮತ್ತು ಜಿಲ್ಲಾಧಿಕಾರಿ ಡಿ.ಕೆ.ರವಿ ಅವರ ಕನಸಿನ ಯೋಜನೆ ತಾಲೂಕು ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನನೆಗುದಿಗೆ ಬೀಳುತ್ತಿದೆ.

ಜಿಲ್ಲಾಧಿಕಾರಿಗಳು ಗಮನಹರಿಸಲಿ

ತಹಶೀಲ್ದಾರ್‌ ಎಂ.ಗಂಗಪ್ಪ ವರ್ಗಾವಣೆ ಯಾಗಿದ್ದರಿಂದ ನಂತರ ತಹಶೀಲ್ದಾರ್‌ ಆಗಿ ಬಂದ ತಹಶೀಲ್ದಾರ್‌ ಕಾಂತವೀರಯ್ಯ ಆಗಲಿ, ಅಥವಾ ಆ ನಂತರ ಬಂದ ಹಲವು ತಹಶೀಲ್ದಾರ್‌ಗಳು ಯಾವುದೇ ಕಾರ್ಯ ಕೈಗೊಳ್ಳಲಿಲ್ಲ. ಪ್ರಸ್ತುತ ಕಾರ್ಯನಿರ್ವ ಹಿಸುತ್ತಿರುವ ಬಿ.ಎನ್‌.ಪ್ರವೀಣ್‌ ಅವರು ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಗಮನಹರಿಸಿಲ್ಲ. ಹೀಗಾಗಿ ಉಳಿದ ಕೆರೆಗಳು ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿವೆ. ಇದರಿಂದ ಕನ್ನಸಂದ್ರ ಕೆರೆ ಸೇರಿದಂತೆ ಹಲವಾರು ಕೆರೆಗಳು, ರಾಜಕಾಲುವೆಗಳು ಹಾಗೂ ಮತ್ತಿತರ ಸರ್ಕಾರಿ ಜಮೀನುಗಳಲ್ಲಿ ಮತ್ತಷ್ಟು ಒತ್ತುವರಿ ನಡೆಯುತ್ತಿದೆ. ಈ ಕೂಡಲೇ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಗಮನಹರಿಸಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮುಳಬಾಗಿಲು ತಾಲೂಕು ತಹಶೀಲ್ದಾರ್‌ ಗಂಗಪ್ಪ ಸೇವೆಯ ಅವಧಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಬಹುತೇಕ ಕೆರೆಗಳನ್ನು ಸರ್ವೇ ಮಾಡಿಸಿದ್ದಾರೆ. ಉಳಿದಿರುವ ಕೆರೆ ಮತ್ತು ರಾಜಕಾಲುವೆಗಳನ್ನು ಇದುವರೆಗೂ ಯಾವುದೇ ತಹಶೀಲ್ದಾರರು ಒತ್ತುವರಿ ತೆರವುಗೊಳಿಸಿಲ್ಲ.
● ಸಂಗಸಂದ್ರ ವಿಜಯಕುಮಾರ್‌, ದಸಂಸ(ಸಂಯೋಜಕ) ರಾಜ್ಯ ಸಂಘಟನಾ ಸಂಚಾಲಕ ವರದಿ ಬಳಿಕ ಕ್ರಮ ತೆರವುಗೊಳಿಸದೇ ಬಾಕಿ ಉಳಿದಿರುವ ಕೆರೆಗಳ ವಿವರ ಸಲ್ಲಿಸಲು 2 ತಿಂಗಳ ಹಿಂದೆ ತಹಶೀಲ್ದಾರ್‌ರಿಗೆ ಸೂಚಿಸಲಾಗಿದೆ. ಈ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.

ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.