ಮುಳಬಾಗಿಲು: ಸ್ಥಳದಲ್ಲೇ ಹಳ್ಳಿಗಳ ಸಮಸ್ಯೆ ಪರಿಹಾರ; ನಾಗರಾಜ್‌

ಐಮಾಸ್ಟ್‌ ದೀಪ ಹಾಕಿಸಿ ಪ್ರವಾಸಿ ತಾಣವನ್ನಾಗಿ ಮಾಡಬೇಕೆಂದು ಮನವಿ ಸಲ್ಲಿಸಿದರು

Team Udayavani, May 28, 2022, 5:35 PM IST

ಮುಳಬಾಗಿಲು: ಸ್ಥಳದಲ್ಲೇ ಹಳ್ಳಿಗಳ ಸಮಸ್ಯೆ ಪರಿಹಾರ; ನಾಗರಾಜ್‌

ಮುಳಬಾಗಿಲು: ತಾಲೂಕು ಆಡಳಿತ ಅಧಿಕಾರಿಗಳು ಹಳ್ಳಿಗಳಲ್ಲಿನ ಬಹುತೇಕ ಸಮಸ್ಯೆಗಳನ್ನು ಸ್ಥಳದ‌ಲ್ಲಿಯೇ ಬಗೆಹರಿಸಿ, ಸರ್ಕಾರ ಮತ್ತು ಆಡಳಿತದ ಮೇಲೆ ಜನರಿಗೆ ನಂಬಿಕೆ ಮೂಡಿಸುವುದೇ ಗ್ರಾಮ ವಾಸ್ತವ್ಯದ ಉದ್ದೇಶ ಎಂದು ತಹಶೀಲ್ದಾರ್‌ ನಾಗರಾಜ್‌ ಹೇಳಿದರು.

ತಾಲೂಕಿನ ತಾಯಲೂರು ಹೋಬಳಿ ಚಿಕ್ಕಗುಟ್ಟ ಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಾಲೂಕು ಆಡಳಿತ ದಿಂದ ನಡೆದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅಗತ್ಯ. ಇದರ ಜೊತೆಗೆ ಸರ್ಕಾರವನ್ನು ಹಳ್ಳಿಗಳತ್ತ, ಜನರ ಮನೆ ಬಾಗಿಲಿಗೆ ಕೊಂಡೊಯ್ದು, ಅವರ ಸಮಸ್ಯೆಗೆ ಸ್ಥಳೀಯ ವಾಗಿಯೇ ಪರಿಹಾರ ಕಂಡುಕೊಳ್ಳುವಂತಾಗಲು ರಾಜ್ಯ ಸರ್ಕಾರ ಯೋಜನೆ ಜಾರಿಗೆ ತಂದಿದೆ ಎಂದರು.

ಗ್ರಾಪಂನಲ್ಲಿ ಸೌಲಭ್ಯ ನೀಡಲು ಯೋಜನೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕವಿರುವ ಎಲ್ಲಾ ಸಂಸ್ಥೆಗಳು ಸಮರ್ಪಕ ಕಾರ್ಯನಿರ್ವಹಿಸಿ ದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಮಾತ್ರವಲ್ಲ, ಇಡೀ ಸರ್ಕಾರವೇ ಗ್ರಾಮಗಳ ಕಡೆ ನಡೆದಿದೆ. ಅಭಿವೃದ್ಧಿ ಜನರ ಸುತ್ತಲೂ ಆಗಬೇಕು. ಆ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಸಾಮಾಜಿಕ ಭದ್ರತೆ ಮನೆ ಬಾಗಿಲಿಗೆ ಬರಬೇಕು. ಪ್ರತಿ ಗ್ರಾಪಂನಲ್ಲಿ ಸೌಲಭ್ಯ ಗಳು ನೀಡಲು ಯೋಜನೆ ರೂಪಿಸಲಾಗಿದ್ದು, ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಗ್ರಾಮದಲ್ಲಿ ಸ್ಮಶಾನವಿಲ್ಲದೇ ಶವ ಸಂಸ್ಕಾರಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದರಿಂದ ಕೂಡಲೇ 30 ಗುಂಟೆಗಳ ಜಾಗವನ್ನು ಸ್ಥಳದಲ್ಲಿ ಸ್ಮಶಾನಕ್ಕೆ ಮಂಜೂರು ಮಾಡಿದರು. ಗ್ರಾಮದ ಅಂಚಿನಲ್ಲಿರುವ ಬೆಟ್ಟದ ಮೇಲೆ ಇರುವ ಪುರಾಣ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇಗುಲವು ಶಿಥಿಲಗೊಂಡಿದ್ದು, ಅದನ್ನು ಅಭಿವೃದ್ಧಿಪಡಿಸಿ ಅಲ್ಲಿ ಐಮಾಸ್ಟ್‌ ದೀಪ ಹಾಕಿಸಿ ಪ್ರವಾಸಿ ತಾಣವನ್ನಾಗಿ ಮಾಡಬೇಕೆಂದು ಮನವಿ ಸಲ್ಲಿಸಿದರು. ಶಾಸಕರೊಂದಿಗೆ ಚರ್ಚಿಸಿ, ಪ್ರಸ್ತಾವನೆಯನ್ನು ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗುವುದು ಎಂದರು.

ಶೀಘ್ರದಲ್ಲೇ ಪರಿಹಾರ: ಗ್ರಾಮಕ್ಕೆ ಬಸ್‌ ಕಲ್ಪಿಸಲು 3 ಅರ್ಜಿಗಳು, ಕಂದಾಯ ಇಲಾಖೆ 43 ಅರ್ಜಿಗಳು ಮತ್ತು ಗ್ರಾಪಂ ಕುರಿತಾದ 19 ಅರ್ಜಿಗಳು, ಲೋಕೋಪಯೋಗಿ ಇಲಾಖೆ ಕುರಿತಾಗಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದು, ಕಂದಾಯ ಇಲಾಖೆಯ ಅರ್ಜಿಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಮತ್ತು ಇತರೇ ಇಲಾಖೆಗಳ ಕುರಿತಾದ ಅರ್ಜಿಗಳನ್ನು ತಿಂಗಳು ಒಳಗಾಗಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

ತಾಪಂ ಇಒ ಡಾ.ಕೆ.ಸರ್ವೇಶ್‌, ಪಿಚ್ಚಗುಂಟ್ಲಹಳ್ಳಿ ಗ್ರಾಪಂ ಅದ್ಯಕ್ಷೆ ಅಲುವೇಲಮ್ಮ, ಉಪಾಧ್ಯಕ್ಷ ಸುನೀಲ್‌, ಟಿಎಚ್‌ಒ ಡಾ.ವರ್ಣಶ್ರೀ, ಉಪ ತಹಶೀಲ್ದಾರ್‌ ಮಂಜುನಾಥ್‌, ಪಿಡಿಒ ರವಣಪ್ಪ, ಉಪನ್ಯಾಸಕರಾದ ಶಂಕರಪ್ಪ, ಅಂಕಪ್ಪ, ಗ್ರಾಮ ಲೆಕ್ಕಿಗರಾದ ಲಕ್ಷ್ಮೀಕಾಂತ್‌, ದೇವರಾಜ್‌, ಉಷಾ, ಮುಖಂಡರಾದ ನಾಗಮಂಗಳ ಶಂಕರಪ್ಪ ಸೇರಿದಂತೆ ಚಿಕ್ಕಗುಟ್ಟಹಳ್ಳಿ, ದೊಡ್ಡಗುಟ್ಟಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.