ನರೇಗಾ, ಚೆಕ್‌ ಡ್ಯಾಂನಲ್ಲಿ ವ್ಯಾಪಕ ಭ್ರಷ್ಟಾಚಾರ, ಆರೋಪ

ಜು.11ರಂದು ತಾಪಂ ಕಚೇರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ನಿರ್ಧಾರ

Team Udayavani, Jul 7, 2019, 12:20 PM IST

kolar-tdy-1..

ಮುಳಬಾಗಿಲು: ನರೇಗಾ ಹಾಗೂ ಚೆಕ್‌ ಡ್ಯಾಂಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ಜು.11ರಂದು ತಾಪಂ ಕಚೇರಿಗೆ ಮುತ್ತಿಗೆ ಹಾಕಲು ಪ್ರವಾಸಿ ಮಂದಿರದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ, ತೀವ್ರ ಬರಗಾಲದಿಂದ ತತ್ತರಿಸಿರುವ ಗ್ರಾಮೀಣ ಜನರು ನಗರಗಳತ್ತ ವಲಸೆ ಹೋಗದೆ, ದುಡಿಯುವ ಕೈಗೆ ಕೆಲಸ ನೀಡಲು ನರೇಗಾ ಯೋಜನೆಯಡಿಯಲ್ಲಿ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತಿದ್ದರೂ ಪ್ರಸ್ತುತ ಗ್ರಾಪಂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಂತ್ರಗಳಿಂದ ಕೆಲಸ ಮಾಡಿಸಿ, ಕೂಲಿ ಕಾರ್ಮಿಕರ ಮರಣ ಶಾಸನ ಬರೆಯುತ್ತಿದ್ದಾರೆ ಎಂದು ಆರೋಪಿಸಿದರು.

ಜನರಿಗೆ ಮೋಸ: ಮತ್ತೂಂದಡೆ ಅಂತರ್ಜಲ ಅಭಿವೃದ್ಧಿಗೆ ಅನುಕೂಲವಾಗಲೆಂದು 5 ಲಕ್ಷದಿಂದ 15 ಲಕ್ಷ ರೂ.ವರೆಗೆ ನಿರ್ಮಿಸುತ್ತಿರುವ ಚೆಕ್‌ ಡ್ಯಾಂಗಳು ಕಳಪೆಯಾಗಿದ್ದು, ವಿವಿಧ ಯೋಜನೆಗಳಿಗೆ ನಕಲಿ ದಾಖಲೆ ಸೃಷ್ಟಿ ಮಾಡಿ ಸಾರ್ವಜನಿಕರ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಅವರ ದಿಕ್ಕು ತಪ್ಪಿಸಲು ಅನುಕೂಲಕರವಾದ ಹಳ್ಳಿಗಳಿಗೆ ಕರೆದುಕೊಂಡು ಕಾಮಗಾರಿ ತೋರಿಸಿ ಶಭಾಷ್‌ಗಿರಿ ಪಡೆದುಕೊಂಡು ಹಿಂಬದಿಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ಜನ ಸಾಮಾನ್ಯರನ್ನು ಯಾಮಾರಿಸುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕುರಿಗಳ ಸಮೇತ ಮುತ್ತಿಗೆ: ತಾಲೂಕು ಅಧ್ಯಕ್ಷ ಫಾರುಕ್‌ಪಾಷ ಮಾತನಾಡಿ, ಅಧಿಕಾರ ಚುಕ್ಕಣಿ ಹಿಡಿದಿರುವ ಚುನಾಯಿತ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳನ್ನು ಜನ ಸಾಮಾನ್ಯರು ಪ್ರಶ್ನಿಸುವಂತಿಲ್ಲ. ಹೀಗೆ ಜನ ಸಾಮಾನ್ಯರೇ ವಿರೋಧಿ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸದೇ ಕೋಟಿ ಕೋಟಿ ಹಣ ತಿಂದು ನೀರು ಕುಡಿಯುತ್ತಿರುವ ತಾಪಂ ಮತ್ತು ಗ್ರಾಪಂ ಅಧಿಕಾರಿಗಳ ವಿರುದ್ಧ ಕುರಿಗಳ ಸಮೇತ ಮುತ್ತಿಗೆ ಹಾಕಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಹಸಿರುಸೇನೆ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ರಾಜ್ಯ ಸಂಚಾಲಕ ರಂಜಿತ್‌ಕುಮಾರ್‌, ಜಿಲ್ಲಾ ಉಪಾಧ್ಯಕ್ಷ ಸಾಗರ್‌, ಸುಪ್ರಿಂಚಲ, ಶಿವ, ನಾರಾಯಣ್‌, ಪುತ್ತೇರಿ ನಾರಾಯಣಸ್ವಾಮಿ, ಅಣ್ಣೆಹಳ್ಳಿ ಅಹಮದ್‌, ಅಣ್ಣಹಳ್ಳಿ ನಾಗರಾಜ್‌, ವೆಂಕಟರವಣಪ್ಪ, ನಲ್ಲಾಂಡಹಳ್ಳಿ ಕೇಶವ, ಪೊಂಬರಹಳ್ಳಿ ನವೀನ್‌, ಪುತ್ತೇರಿರಾಜು, ಅಂಬ್ಲಿಕಲ್ ಮಂಜು, ವಿಜಯ್‌ಪಾಲ್, ದೇವರಾಜ್‌, ಜುಬೇರ್‌ಪಾಷ ಇದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.