ಲಾಕ್‌ಡೌನ್‌ ಅವಧಿಯಲ್ಲಿ ನರೇಗಾ ವರದಾನ

Team Udayavani, Apr 19, 2020, 3:32 PM IST

kolar-tdy-1

ಸಾಂದರ್ಭಿಕ ಚಿತ್ರ

ಕೋಲಾರ: ಲಾಕ್‌ಡೌನ್‌ ಅವಧಿಯಲ್ಲಿಯೂ ಉದ್ಯೋಗ ಖಾತ್ರಿ ಯೋಜನೆಯು ಜಿಲ್ಲೆಯ ಗ್ರಾಮೀಣ ಜನತೆಯ ಪ್ರಮುಖ ಆದಾಯ ಮೂಲವಾಗಿದೆ.

ದೈಹಿಕ ಅಂತರ ಕಾಪಾಡಿಕೊಂಡು ಎಂತದ್ದೇ ಮಾನವಶಕ್ತಿ ಸೃಜನೆಯ ಕೆಲಸವನ್ನು ಮಾಡ ಬಹುದು ಎಂಬುದಷ್ಟೇ ನರೇಗಾಗೆ ವಿಧಿಸಿರುವ ಹೊಸ ಷರತ್ತಾಗಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಸಾವಿರಾರು ಮಂದಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಸಂಜೆ ವೇಳೆಗೆ 33,180 ಮಾನವ ದಿನಗಳನ್ನು ಸೃಜಿಸಲಾಗಿತ್ತು. ಶನಿವಾರಕ್ಕೆ ಇದಕ್ಕೆ ಮತ್ತೂಂದು ಸಾವಿರದಷ್ಟು ಮಾನವ ಸೃಜನೆಯ ಕಾರ್ಯ ಸೇರ್ಪಡೆ ಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಅಂದಾಜು ಮಾಡುತ್ತಿದ್ದಾರೆ.

ಲಾಕ್‌ಡೌನ್‌ ಆರಂಭಿಕ ದಿನಗಳಲ್ಲಿ ಯಾವುದೇ ಕೆಲಸ ಕಾರ್ಯ ಮಾಡಬಾರ ದೆಂಬ ಭೀತಿ ಎದುರಾಗಿತ್ತು. ಆದರೆ, ಆನಂತರದ ದಿನಗಳಲ್ಲಿ ನರೇಗಾಗೆ ಹಸಿರು ನಿಶಾನೆ ಸಿಕ್ಕಿರುವುದ ರಿಂದ ಸಾವಿರಾರು ಮಂದಿ ಮನೆಗಳಿಂದ ಹೊರ ಬಂದು ವಿವಿಧ ಖಾತ್ರಿ ಕಾಮಗಾರಿಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುತ್ತಿದ್ದಾರೆ. ವಿದ್ಯಾವಂತರು ಸೇರ್ಪಡೆ: ಕೋಲಾರ ತಾಲೂಕಿನ ಕೋಟಿ ಗಾನಹಳ್ಳಿ ಹೊಸಕೆರೆಯಲ್ಲಿ ಲಾಕ್‌ಡೌನ್‌ ಆರಂಭಕ್ಕೂ ಮುನ್ನವೇ ಉದ್ಯೋಗ ಖಾತ್ರಿಯಲ್ಲಿ ಕೆರೆ ಹೂಳೆತ್ತುವ ಕಾಮ ಗಾರಿ ಆರಂಭವಾಗಿತ್ತು. ಆದರೆ, ಹತ್ತಿಪ್ಪತ್ತು ಮಂದಿ ಮಾತ್ರವೇ ಕೆಲಸಕ್ಕೆ ಬರುತ್ತಿ ದ್ದರು. ಆದರೆ, ಲಾಕ್‌ಡೌನ್‌ನಿಂದ ಉಳಿದ ಆದಾಯ ಮೂಲ ಕೆಲಸಗಳು ಸ್ಥಗಿತಗೊಂಡಿ ರುವುದರಿಂದ ಶನಿವಾರ 60ಕ್ಕೂ ಹೆಚ್ಚು ಮಂದಿ ಅದರಲ್ಲೂ ವಿದ್ಯಾವಂತ ಯುವಕ ಯುವತಿಯರು ಕೆಲಸದಲ್ಲಿ ಸೇರ್ಪಡೆಯಾಗಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿಯೇ ದೈಹಿಕ ಮಿತಿ ಕಾಪಾಡಿಕೊಂಡು ಗ್ರಾಮೀಣ ಜನತೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳು ತೆಗೆಯುವುದು, ಕೆರೆಯಲ್ಲಿ ನಾಟಿ ಮಾಡುವುದು, ಬದುಗಳ ನಿರ್ಮಾಣ, ನೀರು ಒಳ ಹರಿವು ಹೊರ ಹರಿವು ಕಾಲುವೆಗಳ ನಿರ್ಮಾಣ, ಮಣ್ಣಿನ ರಸ್ತೆ, ವೈಯಕ್ತಿಕವಾಗಿ 2 ಎಕರೆ ಜಮೀನುಗಳ ಬದು ನಿರ್ಮಾಣ, ಮನೆ ನಿರ್ಮಾಣದಂತ ಕೆಲಸಗಳನ್ನು ಮಾಡಬಹುದಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಮಿಕ್ಕೆಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿರುವುದರಿಂದ ಉದ್ಯೋಗ ಖಾತ್ರಿ ಕೋಲಾರ ಜಿಲ್ಲೆಯ ಜನತೆಗೆ ವರದಾನವಾಗಿ ಪರಿಣಮಿಸಿದೆ.

ದೈಹಿಕ ಅಂತರದ ಹೊಸ ಷರತ್ತಿಗೊಳಪಟ್ಟು ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂದಿನ ನಿಯಮಾವಳಿಗಳನ್ವಯ ಮಾನವ ಸೃಜನೆಯ ಎಲ್ಲಾ ಕಾಮಗಾರಿಗಳನ್ನು ಮಾಡಲು ಅವಕಾಶವಿದ್ದು, ಗ್ರಾಮೀಣ ಜನತೆ ನರೇಗಾವನ್ನು ಮತ್ತಷ್ಟು ಸದ್ಬಳಕೆಮಾಡಿಕೊಳ್ಳಬೇಕು.  ಸಿ.ಎಸ್‌.ವೆಂಕಟೇಶ್‌, ಅಧ್ಯಕ್ಷರು, ಜಿಪಂ

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.