ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ಮಗು ಸಾವು

Team Udayavani, Feb 14, 2019, 11:07 AM IST

kol-1.jpg

ಕೆಜಿಎಫ್: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಮುಂಭಾಗ ಧರಣಿ ಪ್ರತಿಭಟನೆ ನಡೆಸಲಾಯಿತು.

ಮಾಲೂರು ತಾಲೂಕಿನ ಮದನಹಳ್ಳಿ ಗ್ರಾಮದ ನಿವಾಸಿ ಅರುಣ್‌ಕುಮಾರ್‌ ಪತ್ನಿ ಸುಮಲತಾ ತವರಾದ ಬಂಗಾರಪೇಟೆ ತಾಲೂಕಿನ ಕೇತಗಾನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಕೆಜಿಎಫ್ನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯೆ ಡಾ.ಸುಧಾರಾಣಿ ಎಲ್ಲಾ ನಾರ್ಮಲ್‌ ಆಗಿದೆ ಎಂದು ತಿಳಿಸಿ ದಾಖಲಿಸಿಕೊಂಡಿದ್ದರು. ಬುಧವಾರ ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಾಗ ಸುಮಲತಾರಿಗೆ ವಿಪರೀತ ಹೊಟ್ಟೆನೋವಿನಿಂದ ನರಳಾಡಿದ್ದಾರೆ. ವೈದ್ಯರು ಪರೀಕ್ಷಿಸಿ ಮಗು ಹೊಟ್ಟೆಯಲ್ಲಿ ಕೊಳಚೆ ನೀರು ಕುಡಿದು ಬಿಟ್ಟಿದೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು 5.15ರ ವೇಳೆಗೆ ತಿಳಿಸಿದ್ದಾರೆ.

ಪತಿ ಅರುಣ್‌ಕುಮಾರ್‌ ಕೂಡಲೇ ಆಪರೇಷನ್‌ಗೆ ಒಪ್ಪಿಗೆ ನೀಡಿದ್ದಾರೆ. ಆದರೆ ವೈದ್ಯರು 8.45ರ ವೇಳೆಗೆ ಆಪರೇಷನ್‌ ಮಾಡಿ ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿತ್ತು. ಇದರಿಂದ ರೊಚ್ಚಿಗೆದ್ದ ಪತಿ ಅರುಣ್‌ಕುಮಾರ್‌ ಮತ್ತು ಕುಟುಂಬಸ್ಥರು ವೈದ್ಯರು ಕೂಡಲೇ ಆಪರೇಷನ್‌ ಮಾಡದೆ
ಮೂರು ಗಂಟೆ ವಿಳಂಬ ಮಾಡಿದ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಆಸ್ಪತ್ರೆ ಮುಂಭಾಗ ಹೋರಾಟ ಪ್ರತಿಭಟನೆ ಮಾಡಿದರು.

ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಾರೆ. ಹಣಕೊಟ್ಟರೆ ರೋಗಿಗಳನ್ನ ಚೆನ್ನಾಗಿ ನೋಡುತ್ತಾರೆ. ನಮ್ಮಿಂದ ಸಹ 50 ಸಾವಿರ ಲಂಚ ಕೇಳಿದರು ನೀಡದಿದ್ದಕ್ಕೆ ಮಗು ಕಳೆದು ಕೊಳ್ಳುವಂತಾಗಿದೆ ಎಂದು ವೈದ್ಯರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸ್ಥಳಕ್ಕಾಗಮಿಸಿದ ರಾಬರ್ಟ್‌ ಸನ್‌ಪೇಟೆ ಪೊಲೀಸರು ಕುಟುಂಬಸ್ಥರನ್ನು ಸಮಾಧಾನ ಮಾಡಿ ಕ್ರಮಜರುಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.