ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೇಡ

ಮದ್ದೇರಿ ಸಹಕಾರ ಸಂಘದ ಸರ್ವಸದಸ್ಯರ ಸಭೆ ಉದ್ಘಾಟಿಸಿದ ಶಾಸಕ ಶ್ರೀನಿವಾಸಗೌಡ

Team Udayavani, Jun 30, 2019, 1:06 PM IST

kolar-tdy-3..

ಕೋಲಾರ ತಾಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಶಾಸಕ ಕೆ.ಶ್ರೀನಿವಾಸಗೌಡ ಉದ್ಘಾಟಿಸಿ, ಮಹಿಳಾ ಸಂಘಗಳಿಗೆ ಸಾಲ ವಿತರಿಸಿದರು.

ಕೋಲಾರ: ಅನ್ನದಾತರಿಗೆ ಮೀಟರ್‌ ಬಡ್ಡಿ ದಂಧೆಯಿಂದ ಮುಕ್ತಿ ನೀಡಿ, ಆರ್ಥಿಕವಾಗಿ ಜೀವ ತುಂಬುತ್ತಿರುವ ಸಹಕಾರ ರಂಗದಲ್ಲಿ ರಾಜಕೀಯ ಬೇರೆಸದೇ, ರೈತರಿಗೂ ದ್ರೋಹ ಮಾಡಿದಂತೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.

ತಾಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಹಾಗೂ ಮಹಿಳಾ ಸಂಘಗಳಿಗೆ ಸಾಲ ವಿತರಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವುದು ಸಹಜ. ಅಧಿಕಾರಕ್ಕೆ ಬಂದ ಮೇಲೆ ಪಕ್ಷಾತೀತವಾಗಿ ಕೆಲಸ ಮಾಡಬೇಕು, ಚುನಾವಣೆ ನಂತರ ರಾಜಕೀಯಕ್ಕೆ ಅವಕಾಶ ನೀಡದೇ, ಇಡೀ ಗ್ರಾಮ ಒಗ್ಗಟ್ಟಾಗಿ ಅಭಿವೃದ್ಧಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ರೈತರ ಅಭಿವೃದ್ಧಿಗೆ ಶ್ರಮಿಸಿ: ಸಹಕಾರ ರಂಗದಲ್ಲಿ ರಾಜಕೀಯೇತರವಾಗಿ ಕೆಲಸ ಮಾಡಬೇಕು. ಇದರಿಂದಲೇ ನಾನು ಹಳ್ಳಿ ಸೊಸೈಟಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಹಕಾರ ಸಂಸ್ಥೆಗಳವರೆಗೂ ಅಧಿಕಾರ ನಡೆಸಲು ಅವಕಾಶ ಸಿಕ್ಕಿದೆ. ಸೊಸೈಟಿಗಳು ಎಂದಿಗೂ ರೈತರ ಅಭಿವೃದ್ಧಿಗಾಗಿ ಶ್ರಮಿಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ನಂಬಿಕೆ ಉಳಿಸಿಕೊಂಡಿದೆ: ಎರಡು ದಶಕಗಳ ಹಿಂದೆ ಯಾರೋ ಮಾಡಿದ ತಪ್ಪಿಗೆ ಡಿಸಿಸಿ ಬ್ಯಾಂಕ್‌ ದಿವಾಳಿಯಾಗುವ ಹಂತಕ್ಕೆ ತಲುಪಿತ್ತು. ಆನಂತರ ಅಧಿಕಾರಕ್ಕೆ ಬಂದ ಬ್ಯಾಲಹಳ್ಳಿ ಗೋವಿಂದಗೌಡರ ತಂಡದ ಸತತ ಪ್ರಯತ್ನದಿಂದ ಚೇತರಿಸಿಕೊಂಡಿದೆ.

ರೈತರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸದಸ್ಯರ ನಂಬಿಕೆ ಉಳಿಸಿಕೊಂಡು ಸಾಲ ನೀಡುವ ಶಕ್ತಿ ಹೊಂದಿದೆ ಎಂದು ಹೇಳಿದರು.

ಬ್ಯಾಂಕ್‌ ಈಗ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಇತರೆ ಬ್ಯಾಂಕ್‌ಗಳಿಗೆ ಮಾದರಿಯಾಗಿ ಬೆಳೆದಿದೆ. ಕೋಟ್ಯಂತರ ರೈತರಿಗೆ ಮತ್ತು ಸ್ತ್ರೀಶಕ್ತಿ ಸಂಘಗಳಿ ಸಾಲ ನೀಡುತ್ತಿದೆ. ಅದೇ ರೀತಿ ಸಾಲ ಪಡೆದುಕೊಂಡಿರುವ ಫಲಾನುಭವಿಗಳು ಸಹ ಪ್ರಾಮಾಣಿಕವಾಗಿ ಪಾವತಿ ಮಾಡುವ ಮೂಲಕ ಇತರರಿಗೂ ಸಲ ದೊರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಸ್ವಾವಲಂಬಿ ಬದುಕು: ಎಸ್‌ಎಫ್‌ಸಿಎಸ್‌ ಅಧ್ಯಕ್ಷ ಜಂಬಾಪುರ ವೆಂಕಟರಾಮ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಡಿಸಿಸಿ ಬ್ಯಾಂಕ್‌ ಇಂದು ರೈತರು, ಮಹಿಳೆಯರ ಆರ್ಥಿಕ ಜೀವಾಳವಾಗಿದ್ದು, ಈ ಭಾಗದಲ್ಲಿ ಅನೇಕ ಆರ್ಥಿಕ ಚಟುವಟಿಕೆಗಳಿಗೆ ನೆರವು ನೀಡಿದೆ.

ಇಂದು ಅನೇಕರು ಸ್ವಾವಲಂಬಿ ಬದುಕು ಸಾಗಿಸಲು ಕಾರಣವಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ನಾಗನಾಳ ಸೋಮಣ್ಣ, ಕೆ.ವಿ.ದಯಾನಂದ್‌, ಹಿರಿಯ ಮುಖಂಡ ಮದ್ದೇರಿ ರಾಮೇಗೌಡ, ಸಿ.ಬಿ.ಜಯರಾಮ್‌, ಸೊಸೈಟಿ ಸಿಇಒ ಭಾಸ್ಕರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.