ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

Team Udayavani, Dec 30, 2019, 3:33 PM IST

kolar-tdy-1

ಕೋಲಾರ: ದಲಿತರ ಮನೆಗೆ ಉಡುಪಿ ಸ್ವಾಮೀಜಿಗಳು ಬರಲು ಸಾಧ್ಯವೇ ಇದೆಲ್ಲಾ ಗಿಮಿಕ್‌ ಎಂದೆಲ್ಲಾ ಕೂಗು ಎಬ್ಬಿಸಿದ್ದವರ ಬಾಯಿ ಮುಚ್ಚಿಸಿದ್ದ ಪೇಜಾವರ ಶ್ರೀಗಳು, 2014 ರ ನವೆಂಬರ್‌ ನಲ್ಲಿ ಕೋಲಾರದ ದಲಿತರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಪೂಜೆ ಸಲ್ಲಿಸಿ ಹಾಲು ಸೇವಿಸಿ ಅಸ್ಪೃಶ್ಯತೆ ವಿರುದ್ಧ ಸಂದೇಶ ನೀಡಿದ್ದರು.

ನಗರದ ಗಾಂಧಿನಗರ, ಮೋಚಿಪಾಳ್ಯದ ದಲಿತರ ಮನೆಗೆ ನೇರವಾಗಿ ಪ್ರವೇಶಿಸಿದ ಸ್ವಾಮೀಜಿ, ಜನತೆ ಆಶ್ಚರ್ಯಪಡುವಂತೆ ಮಾಡಿದ್ದರು. ಹಿಂದೂ ಧರ್ಮಕ್ಕೆ ಶಾಪವಾಗಿದ್ದ ಅಸ್ಪೃಶ್ಯತೆ ವಿರುದ್ಧ ಸ್ವತಃ ಹೋರಾಟಕ್ಕಿಳಿದಿದ್ದ ವಿಶ್ವೇಶತೀರ್ಥರು, ಕೋಲಾರದ ಹಲವು ದಲಿತರ ಮನೆಗಳಿಗೆ ಹೋಗಿ ಪೂಜೆ ಸಲ್ಲಿಸಿ ಆತ್ಮಸ್ಥೈರ್ಯ ತುಂಬಿ, ನೀವು ಹಿಂದೂ ಧರ್ಮದ ಪ್ರಮುಖ ಭಾಗ ಎಂಬ ಸಂದೇಶ ರವಾನಿಸಿದ್ದರು. ಶ್ರೀಗಳು ದಲಿತರ ಮನೆಗಳಿಗೆ ಭೇಟಿ ನೀಡಿ ಹೋದ ನಂತರ ಇಲ್ಲಿನ ದಲಿತ ಮುಖಂಡರ ಮನಸ್ಥಿತಿ ಬದಲಾಯಿತು, ಶ್ರೀಗಳ ವಿರುದ್ಧದ ಟೀಕೆ ನಿಲ್ಲುವಂತಾಗಿತ್ತು. ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ಶ್ರೀಗಳ ವಿರುದ್ಧ ಕೆಲವರು ಪಂಕ್ತಿಬೇಧ, ಮಡಿ, ಮೈಲಿಗೆ ಹೆಸರಿನಲ್ಲಿ ಅಸ್ಪೃಶ್ಯತೆ ಉಳಿಯಲು ನೀವು ಕಾರಣರು ಎಂಬ ಆರೋಪಕ್ಕೆ ತಿರುಗೇಟು ನೀಡಿದ್ದರು.

ಕೋಲಾರಕ್ಕೆ ನೀರು: ಕೋಲಾರಕ್ಕೆ ನೀರಾವರಿ ಯೋಜನೆಯಡಿ ನೀರು ತರುವ ವಿಷಯದಲ್ಲೂ ಸಹಮತ ಹೊಂದಿದ್ದ ಶ್ರೀ, ಜಿಲ್ಲೆಯ ಜನರ ನೀರಿನ ಸಂಕಷ್ಟ ಅರಿತು ಇಲ್ಲಿಗೆ ಯಾವುದೇ ಮೂಲದಿಂದಾದರೂ ನೀರು ಹರಿಸಲು ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದ್ದರು. ದಲಿತ ಕೇರಿಗಳಿಗೆ ಶ್ರೀಗಳ ಭೇಟಿ ಬಳಿಕ, ಅವರಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹೆಚ್ಚಾದರು. ಕೋಲಾರ ಜಿಲ್ಲೆಯಲ್ಲಿ ಬ್ರಾಹ್ಮಣ ಸಮುದಾಯ ಮಾತ್ರವಲ್ಲದೇ ಅವರನ್ನು ಗುರುಗಳೆಂದು ಭಾವಿಸುವ ದಲಿತ ಹಾಗೂ ಇತರೆ ಸಮುದಾಯ ಇದ್ದದ್ದು ವಿಶೇಷ.

ಗೀತಾ ಅಭಿಯಾನ: 2013ರಲ್ಲಿ ಕೋಲಾರದಲ್ಲಿ ನಡೆದಿದ್ದ ಭಗವದ್ಗೀತಾ ಅಭಿಯಾನದಲ್ಲಿ ಪೇಜಾವರ ಶ್ರೀ ಪಾಲ್ಗೊಂಡು ಮಾತನಾಡಿದ್ದರು. ಕೋಲಾರದಲ್ಲಿ ಅವರ ಅಪಾರ ಭಕ್ತವೃಂದ ಇದ್ದ ಕಾರಣ ಹಲವು ಬಾರಿ ಭೇಟಿ ನೀಡಿದ್ದರು. ಇದೇ 2019 ಡಿ.11 ರಂದು ಕೋಲಾರ ಹೊರವಲಯದ ವುಡ್‌ಲ್ಯಾಂಡ್‌ ಹೋಟೆಲ್‌ ನಲ್ಲಿ ನಡೆದ ಪೂಜಾಕಾರ್ಯದಲ್ಲಿ ಪಾಲ್ಗೊಂಡಿದ್ದೇ ಕೋಲಾರ ಜಿಲ್ಲೆಯ ಕೊನೇ ಭೇಟಿಯಾಗಿತ್ತು. ಕೋಲಾರಕ್ಕೂ ಶ್ರೀಗಳಿಗೆ ಅಪಾರ ನಂಟಿದ್ದು, ಇದೀಗ ಶ್ರೀಗಳ ಅಗಲಿಕೆಗೆ ಸಾವಿರಾರು ಮಂದಿ ದುಃಖೀಸಿದ್ದಾರೆ. ಶ್ರದ್ಧಾಂಜಲಿ ಅರ್ಪಿಸಿದ್ದಾರೆ, ಆದರೆ ಅವರ ಚಿಂತನೆಗಳನ್ನು ಕಾರ್ಯಗತ ಮಾಡುವ ಮೂಲಕ ಹಿಂದೂ ಧರ್ಮದ ಉಳಿವಿಗೆ ಸಂಕಲ್ಪ ಮಾಡಬೇಕಾಗಿದೆ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ.

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.