ಕೆರೆ, ಕಲ್ಯಾಣಿ, ಪುಷ್ಕರಣಿ ಸುಂದರಗೊಳಿಸಿ

Team Udayavani, Feb 24, 2021, 1:46 PM IST

ಕೆರೆ, ಕಲ್ಯಾಣಿ, ಪುಷ್ಕರಣಿ ಸುಂದರಗೊಳಿಸಿ

ಕೋಲಾರ: ಸರ್ಕಾರದ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯಲ್ಲಿರುವ ಕಲ್ಯಾಣಿಗಳನ್ನು ಸುಂದರ ಗೊಳಿಸಲು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಹೆಚ್ಚು ಕೆಲಸ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್‌ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿ ಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಗ್ರಾಮಾಂತರ ಶಾಲೆಗಳಲ್ಲಿ ಗ್ರಂಥಾಲಯಗಳ ಸ್ಥಾಪನೆಗಾಗಿ ಆದೇಶ ಮಾಡಲಾಯಿತು. ಶಾಲಾ ಹಂತದಲ್ಲಿ ಮಕ್ಕಳಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಕಾರ್ಯಕ್ರಮ ರೂಪಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗೆ ಗ್ರಾಪಂ ವತಿಯಿಂದ ಗ್ರಂಥಾಲಯದ ಕಾರ್ಡ್‌ ವಿತರಿಸಬೇಕು ಎಂದರು.

ಕೋವಿಡ್‌ ಸಮಯದಲ್ಲಿ ವಲಸೆ ಹೋದ ವಿದ್ಯಾರ್ಥಿ ಗಳ ದಾಖಲಾತಿ ಬಗ್ಗೆ ಮಾಹಿತಿ ಸಂಗ್ರಹಿಸ  ಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಸೂಚಿಸಿದರು.ವಿವಿಧ ತರಬೇತಿ: ಈ ವರ್ಷದಲ್ಲಿ ಕೃಷಿ ಚಟುವಟಿಕೆ ಉತ್ತಮವಾಗಿದೆ. ಪಂಚಾಯತಿಗಳು ಸೂಕ್ತವಾಗಿ ತೆರಿಗೆ ವಸೂಲಿ ಮಾಡಬೇಕು. ಗ್ರಾಮೀಣ ಭಾಗದಲ್ಲಿಸಮುದಾಯ ಶೌಚಾಲಯಗಳನ್ನು ನಿರ್ಮಿಸಬೇಕು. ಮಹಿಳೆಯರು ಕಸ ವಿಲೇವಾರಿ ವಾಹನಗಳನ್ನು ಚಲಾಯಿಸುವಂತೆ ಆಗಬೇಕು. ನಿರ್ಮಿತಿ ಕೇಂದ್ರಗಳಲ್ಲಿ ಮಹಿಳೆಯರಿಗೆ ವಿವಿಧ ತರಬೇತಿ ನೀಡಬೇಕು ಎಂದರು.

ಕೃಷಿ ಚಟುವಟಿಕೆ ಹೆಚ್ಚು: ಹಾಲು ಉತ್ಪಾದನೆಯಲ್ಲಿ ಕೋಲಾರ 2ನೇ ಸ್ಥಾನದಲ್ಲಿದ್ದು, ಪಶುಗಳ ಆರೈಕೆ ಮಾಡುವ ಜೊತೆ ಜೊತೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕೆಲಸಗಳಲ್ಲಿ ಪಾಲ್ಗೊಳ್ಳಬೇಕು. ಜಿಲ್ಲೆಯ ಸ್ಥಳೀಯ ಪ್ರವಾಸದ್ಯೋಮಕ್ಕೆ ಪ್ರೋತ್ಸಾಹಿಸಬೇಕು. ಕೆ.ಸಿ.ವ್ಯಾಲಿ ನೀರಿನ ಹರಿವಿನಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎನ್‌.ಎಂ.ನಾಗರಾಜ್‌, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

9 ತಿಂಗಳಿಗೆ ಆಗುವಷ್ಟು ಮೇವು ಲಭ್ಯ :

ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ, ಜಿಲ್ಲೆಯಲ್ಲಿ ಕಸ ವಿಲೇವಾರಿ ಪ್ರಮುಖ ಸಮಸ್ಯೆಯಾಗಿದೆ ಮತ್ತು ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು. ಮೈಕ್ರೋ ಎಂಟರ್‌ಪ್ರೈಸಸ್‌ನಲ್ಲಿ ಮಹಿಳೆಯರು ಹೆಚ್ಚು ಭಾಗವಹಿಸಬೇಕು. ಜಿಲ್ಲೆಯಲ್ಲಿ 9 ತಿಂಗಳಿಗೆ ಸಾಕಾಗುವಷ್ಟು ಜಾನುವಾರು ಮೇವು ಲಭ್ಯವಿದೆ. ತಾಲೂಕು ಆಸ್ಪತ್ರೆಗಳಲ್ಲಿಕೋವಿಡ್‌ ಲಸಿಕೆಯ ಬಗ್ಗೆ ಸರಿಯಾಗಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.