ಹಲ್ಲೆ ಆರೋಪಿ ಬಂಧನಕ್ಕೆ ನೌಕರರಿಂದ ಪ್ರತಿಭಟನೆ

Team Udayavani, Feb 18, 2019, 7:27 AM IST

ಕೋಲಾರ: ತಾಲೂಕು ಅರಾಭಿಕೊತ್ತನೂರು ಗ್ರಾಪಂ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ವಾಟರ್‌ವೆುನ್‌ ರಾಮಚಂದ್ರಪ್ಪರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸಲು ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು.

ವೆಂಕಟಾಪುರ ಗ್ರಾಮದಲ್ಲಿ ಈಗಾಗಲೇ ಕೊಳಾಯಿ ಸಂಪರ್ಕ ಪಡೆದಿರುವುದಲ್ಲದೇ, ಮತ್ತೆ ಅಕ್ರಮವಾಗಿ 2ನೇ ಕೊಳಾಯಿ ಸಂಪರ್ಕ ಪಡೆದಿದ್ದರು. ಅಕ್ರಮವಾಗಿ 2ನೇ ಕೊಳಾಯಿ ಅಳವಡಿಕೆ ಪತ್ತೆಯಾಗಿ ಮನೆ ಮಾಲಿಕರನ್ನು ಪ್ರಶ್ನಿಸಿದ್ದರು.

ಈ ವೇಳೆ ಮಾಲಿಕರು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿ, ದೊಣ್ಣೆಗಳಿಂದ ಥಳಿಸಿದ್ದಾರೆ. ಕಲ್ಲಿನಿಂದ ಮುಖ ಮತ್ತು ಗುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ. ನೌಕರರ ಮೇಲೆ ವಿನಾಕಾರಣ ದಬ್ಟಾಳಿಕೆ, ದೌರ್ಜನ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಲ್ಲೆ ನಡೆಸಿದ ಆರೋಪಿಯನ್ನು ತಕ್ಷಣ ಬಂಧಿಸಿ, ರಾಮಚಂದ್ರಪ್ಪನವರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಡಿವೈಎಸ್‌ಪಿ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಅಮರನಾರಾಯಣ, ಜಿಲ್ಲಾ ಕಾರ್ಯದರ್ಶಿ ಯಲ್ಲಪ್ಪ, ಖಜಾಂಚಿ ಕೇಶವರಾವ್‌, ಮುಖಂಡರಾದ ವಿಜಯಕೃಷ್ಣ, ಅಶ್ವತ್ಥಪ್ಪ, ವೆಂಕಟರಾಮೇಗೌಡ ಇದ್ದರು.


ಈ ವಿಭಾಗದಿಂದ ಇನ್ನಷ್ಟು

  • ಬೇತಮಂಗಲ: ಹೋಬಳಿ ವ್ಯಾಪ್ತಿಯ ಎನ್‌.ಜಿ.ಹುಲ್ಕೂರು ಗ್ರಾಮ ಪಂಚಾಯ್ತಿನ ಪೂಗಾನಗಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣವಾಗಿ ತಿಂಗಳುಗಳೇ ಗತಿಸಿದರೂ ಆರಂಭಗೊಳ್ಳುವ...

  • ಕೋಲಾರ: ನರೇಗಾ ಜತೆಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಪಿಂಚಣಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳ ಕುರಿತು...

  • ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗುಂಪಿಗೆ ಸಡ್ಡು ಹೊಡೆದು ಕೋಚಿಮುಲ್...

  • ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಲೂರಿನ ಶಾಸಕ ಕೆ.ವೈ.ನಂಜೇಗೌಡ ಎರಡನೇ ಬಾರಿಗೆ ಅವಿರೋಧ ಆಯ್ಕೆಯಾದರು. ಸಚಿವ ಕೃಷ್ಣಬೈರೇಗೌಡರು...

  • ಕೋಲಾರ: ರಾಜ್ಯದ ಸಮ್ಮಿಶ್ರ ಸರ್ಕಾರ ಮಾಡಿದ ಜನಪರ ಕೆಲಸಗಳನ್ನು ಜನರಿಗೆ ತಿಳಿಸುವಲ್ಲಿ ಆದ ವೈಫ‌‌ಲ್ಯವೇ ಲೋಕಸಭಾ ಚುನಾವಣೆಯ ಹಿನ್ನಡೆಗೆ ಕಾರಣವಾಯಿತು ಎಂದು ಜಿಲ್ಲಾ...

ಹೊಸ ಸೇರ್ಪಡೆ