ಖರೀದಿ ಮಿತಿ: ಆದೇಶ ವಾಪಸ್‌ಗೆ ಮನವಿ

Team Udayavani, Mar 4, 2020, 5:24 PM IST

kolar-tdy-1

ಕೋಲಾರ: ರಾಗಿ ಖರೀದಿ ಪ್ರತಿ ಎಕರೆಗೆ 15 ಕ್ವಿಂಟಲ್‌ನಿಂದ 10 ಕ್ವಿಂಟಲ್‌ಗೆ ಇಳಿಸಿರುವ ಆದೇಶ ಹಿಂಪಡೆಯಬೇಕು ಹಾಗೂ ರೈತರು ತರುವ ಚೀಲದಲ್ಲೇ ಖರೀದಿ ಮಾಡ ಬೇಕೆಂದು ಒತ್ತಾಯಿಸಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ, ಸತತ ಬರಗಾಲದಿಂದ ತತ್ತರಿಸಿದ್ದ ಜಿಲ್ಲೆಯ ಜನತೆಗೆ ದೇವರ ಕೃಪೆಯಿಂದ ಸುರಿದ ಮಳೆಯಿಂದ ಉತ್ತಮ ರಾಗಿ ಫ‌ಸಲು ಬೆಳೆದಿದ್ದು, ಆದರಂತೆ ಉತ್ತಮ ಇಳುವರಿ ಸಹ ಬಂದಿದೆ. ಇದರಿಂದ ಸಂಕಷ್ಟದಲ್ಲಿದ್ದ ರೈತರು ಮುಖದಲ್ಲಿ ನಗು ಕಾಣುವಂತಾಗಿದೆ ಎಂದು ಹೇಳಿದರು.

ಸರ್ಕಾರ ರೈತರಿಗೆ ದಲ್ಲಾಳಿಗಳಿಂದ ನಷ್ಟ ಆಗಬಾರದು ಎಂದು ಸರ್ಕಾರವೇ ನೇರವಾಗಿ ರೈತರಿಂದ ರಾಗಿ ಖರೀದಿ ಮಾಡಿ ಬೆಂಬಲ ಬೆಲೆಯಾಗಿ ಪ್ರತಿ ಕ್ವಿಂಟಲ್‌ ರಾಗಿಗೆ 3150 ರೂ. ನಂತೆ ಪ್ರತಿ ಎಕರೆಗೆ 15 ಕ್ವಿಂಟಲ್‌ ರಾಗಿ ಖರೀದಿ ಮಾಡಲು ಸಂಬಂಧಪಟ್ಟ ಇಲಾಖೆಗಳಿಗೆ ಆದೇಶ ಮಾಡಿ ಕರಪತ್ರ ಮುದ್ರಿಸಿ ಹಂಚಿದ್ದರು. ರೈತರು ರಾಗಿ ಬೆಳೆದಿರುವ ತಮ್ಮ ಜಮೀನಿನ ದಾಖಲೆಗಳೊಂದಿಗೆ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ರಾಗಿ ಮಾರಾಟ ಮಾಡಿ ಲಾಭ ಪಡೆಯಬಹುದೆಂದು ಪ್ರಕಟಣೆ ಮಾಡಿದ್ದರು ಎಂದು ಹೇಳಿದರು.

ಬೆಲೆ ಪಡೆಯಲಾಗದೇ ವಂಚಿತ: ನಂತರ ರೈತರು ಈ ಆದೇಶದಂತೆ ಈ ಅವಕಾಶ ಪಡೆಯಲು ಮುಂದೆ ಬಂದರೆ, ಹಳೆಯ ಗಾದೆಯಂತೆ ದೇವರು ವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬಂತೆ ಕಂದಾಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೂರಾರು ರೈತರು ರಾಗಿ ಬೆಳೆದರೂ ಬೆಂಬಲ ಬೆಲೆ ಪಡೆಯಲು ವಂಚಿತರಾಗಿ ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ರೈತರು ರೋಸಿ ಹೋಗಿದ್ದು, ಆಹಾರ ನಿಗಮದ ವ್ಯವಸ್ಥಾಪಕರು ಸರ್ಕಾರ ಮೊದಲು ನಿಗದಿ ಮಾಡಿರುವಂತೆ ಪ್ರತಿ ಎಕರೆಗೆ 15 ಕ್ವಿಂಟಲ್‌ ರಾಗಿ ಖರೀದಿ ಮಾಡಿ, ರೈತರು ತರುವ ಚೀಲದಲ್ಲಿ ರಾಗಿ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಚೀಲ ಬದಲಾವಣೆ ಮಾಡಬಾರದು ಎಂದು ರೈತ ಲಿಂಗರಾಜಪ್ಪ ಒತ್ತಾಯಿಸಿದರು.

ಮನವಿ ನೀಡುವಾಗ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಳಿನಿಗೌಡ, ಮಂಗಸಂದ್ರ ತಿಮ್ಮಣ್ಣ, ಈಕಂಬಳ್ಳಿ ಮಂಜುನಾಥ್‌, ಸುಪ್ರೀಂಚಲ, ಶಿವ, ಜಗದೀಶ್‌, ವಿನೋದ್‌, ರವಿ, ಐತಾಂಡಹಳ್ಳಿ ಮಂಜುನಾಥ್‌, ರೈತರಾದ ಬಸವರಾಜಪ್ಪ, ದಳವಾಯಪ್ಪ, ಮುನಿಕೃಷ್ಣಪ್ಪ, ಮುನಿಸ್ವಾಮಿಗೌಡ, ಶ್ರೀರಾಮಪ್ಪ, ನಟರಾಜ್‌, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.