ಕೋವಿಡ್ ವಾರಿಯರ್ಸ್‌ಗೆ ಲಸಿಕೆ ಹಾಕಲು ಸಿದ್ಧತೆ
Team Udayavani, Jan 10, 2021, 6:23 PM IST
ಮಾಲೂರು: ಕೋವಿಡ್ ವಾರಿಯರ್ ಗಳಿಗೆ ಕೋವಿಡ್ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲೂಕಿನ 6 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ತಹಶೀಲ್ದಾರ್ ಎಂ.ಮಂಜುನಾಥ್ ತಿಳಿಸಿದರು.
ತಾಲೂಕಿನ ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದ ರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕೊರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಅಭಿಯಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಇಲಾ ಖೆಯ ವೈದ್ಯರು, ಸಿಬ್ಬಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ.
ಲಸಿಕೆ ಹಾಕುವ ತಾಲೀಮಿನಲ್ಲಿ ಇಲಾಖೆ ಮುಂದಾಗಿದೆ. ಆರೋಗ್ಯ ಕಾರ್ಯಕರ್ತರ ನಂತರ ವಾರಿಯರ್ ಗಳಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಸೇರಿದಂತೆ ಎಲ್ಲಾ ವಾರಿಯರ್ಗಳಿಗೂ ಲಸಿಕೆ ನೀಡಲಾಗುವುದು. ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯುವಂತೆ ತಿಳಿಸಿದರು.
ಇದನ್ನೂ ಓದಿ:ಎಸ್‌ಬಿಎಂ ರಸ್ತೆ ಅಗಲೀಕರಣ, ಡಾಂಬರೀಕರಣಕ್ಕೆ ಗ್ರಹಣ
ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ಮಾತನಾಡಿ, ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸಿದ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ದೊಡ್ಡಶಿವಾರ, ತೊರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
1300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿದಿನ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಿಕೊಂಡವರನ್ನು 30 ನಿಮಿಷಗಳ ಕಾಲ ನಿಗಾ ವಹಿಸಲಾಗುವುದು. ಬದಲಾವಣೆ ಕಂಡಲ್ಲಿ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗುವುದು. ಬೆಳಗ್ಗೆ 8 ರಿಂದ ಸಂಜೆ 8 ರವರಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ತಾಪಂ ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣಾರೆಡ್ಡಿ, ದೊಡ್ಡಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಜರಿದ್ದರು.