ಸರ್ಕಾರಿ ಆಸ್ಪತ್ರೆಯಲ್ಲಿ ಸೌಕರ್ಯ ಕಲ್ಪಿಸಲು ಆಗ್ರಹ

Team Udayavani, Nov 28, 2019, 4:30 PM IST

ಮುಳಬಾಗಿಲು: ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲವೆಂದು ಆರೋ  ಪಿಸಿ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್‌) ಬಣದ ಕಾರ್ಯಕರ್ತರು ಬುಧವಾರ ನಗರದ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ, ತಾಲೂಕಿನಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಬರುವುದಿಲ್ಲ, ರಾತ್ರಿ ವೇಳೆ ವೈದ್ಯರೇ ಇರುವುದಿಲ್ಲ, ಔಷಧಿ ಇಲ್ಲ, ರೋಗಿಗಳು ಕೇಳಿದರೆ ನಮಗೆ ಬಂದಿಲ್ಲ ಎನ್ನುವ ಉತ್ತರ ಸಿಗುತ್ತದೆ. ಪರಿಸ್ಥಿತಿ ಹೀಗಿದ್ದರೂ ತಾಲೂಕು ಮತ್ತು ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳು ಮೌನವಹಿಸಿದ್ದಾರೆಂದು ದೂರಿದರು. ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ಸ್ವಂತ ಪೂರ್ಣಿಮಾ ನರ್ಸಿಂಗ್‌ ಹೋಂಗೆ ಕೊಟ್ಟ ಕಾಳಜಿಯಲ್ಲಿ ಶೇ.25 ಕಾಳಜಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನೀಡಿದರೆ ಎಷ್ಟೋ ಸುಧಾರಣೆ ಯಾಗುತ್ತದೆ. ಚಮಕಲಹಳ್ಳಿಯಲ್ಲಿ 1 ತಿಂಗಳಲ್ಲಿ 9 ಜನ ಮರಣ ಹೊಂದಿದ್ದು ನಿಖರ ಮಾಹಿತಿ ನೀಡುತ್ತಿಲ್ಲ ಎಂದು ದೂರಿದರು.

ತಾಲೂಕಿನಲ್ಲಿ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆ ಇರುವ ಸಿಬ್ಬಂದಿ ನೇಮಕ ಮಾಡಬೇಕು, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಆಡಳಿತ ವೈದ್ಯಾಧಿಕಾರಿ ವೇಣುಗೋಪಾಲ್‌ರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸಂಚಾಲಕ ಮಂಜುನಾಥ್‌, ರಾಜ್ಯ ಕಾರ್ಯದರ್ಶಿ ಜಿ.ಎಸ್‌.ವೀರಭದ್ರಸ್ವಾಮಿ, ಜಿಲ್ಲಾಧ್ಯಕ್ಷ ಟಿ.ಎನ್‌.ರಾಮೇಗೌಡ, ಜಿಲ್ಲಾ ಉಪಾಧ್ಯಕ್ಷ ವೀರೇಂದ್ರಪಾಟೀಲ್‌, ಗೌರವಾಧ್ಯಕ್ಷ ಜೆಸಿಬಿ ರಮೇಶ್‌, ಜಿಲ್ಲಾಮುಖಂಡ ಸುಬ್ರಮಣಿ, ತಾಲೂಕು ಅಧ್ಯಕ್ಷ ಪಿ.ಎಸ್‌.ಗಂಗಾಧರ್‌,ಉಪಾಧ್ಯಕ್ಷ ತಾತಿಕಲ್ಲು ಸುರೇಶ್‌, ಪ್ರಧಾನ ಕಾರ್ಯದರ್ಶಿ ಬಿ.ಎಂ. ಶ್ರೀನಿವಾಸ್‌, ರೈತ ಮುಖಂಡರಾದ ರಾಂಬಾಬು, ಮೀಸೆ ಕೃಷ್ಣಪ್ಪ,ಕುಮಾರ್‌, ಶ್ರೀನಿವಾಸಪುರ ತಾಲೂಕು ಸಮಿತಿ ಅಧ್ಯಕ್ಷ ಶ್ರೀರಾಮರೆಡ್ಡಿ, ಕೆಜಿಎಫ್ ತಾಲೂಕು ಸಮಿತಿ ಅಧ್ಯಕ್ಷ ವಿಶ್ವನಾಥ್‌ ಇದ್ದರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ