ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ ದಂಪತಿ ಸಾವು, 15 ಕ್ಕೂ ಹೆಚ್ಚು ಮಂದಿ ಗಾಯ
ಮೂವರ ಸ್ಥಿತಿ ಗಂಭೀರ
Team Udayavani, Aug 17, 2022, 8:46 AM IST
ಕೋಲಾರ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ದಂಪತಿ ಮೃತಪಟ್ಟು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.
ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ವಿರುಪಾಕ್ಷಿ ಗೇಟ್ ಬಳಿ ಈ ಘಟನೆ ನಡೆದಿದ್ದು,ಬಸ್ ಪಲ್ಟಿಯಲ್ಲಿ ವಿಜಯವಾಡದ ದಂಪತಿಗಳು ಮೃತಪಟ್ಟಿದ್ದಾರೆ.
ಮೃತರನ್ನು ವಿಜಯವಾಡ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಆಂಧ್ರದ ವಿಜಯವಾಡದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಆಂಧ್ರದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಸ್ ಗೆ ಸೇರಿದ್ದಾಗಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬಸ್ ಪಲ್ಟಿಯಾದ ತಕ್ಷಣ ಬಸ್ ನ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ. ಇನ್ನು ಬಸ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಮುಳಬಾಗಲು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ