ರಸ್ತೆ ಕಾಮಗಾರಿ ಶೀಘ್ರ ಪೂರ್ಣ: ಶಾಸಕಿ

ಅಧಿಕಾರಿಗಳಿಗೆಕೆಜಿಎಫ್ ಶಾಸಕಿ ರೂಪಕಲಾ ಸೂಚನೆ

Team Udayavani, Oct 10, 2020, 3:40 PM IST

kolara-tdy-1

ಬೇತಮಂಗಲ: ಸುಮಾರು 3 ವರ್ಷಗಳಿಂದ ನಡೆಯುತ್ತಿರುವ ಬೇತಮಂಗಲ-ಕೊತ್ತೂರು ಹಾಗೂ ರಾಮಸಾಗರ ಕ್ರಾಸ್‌ ಬಳಿ ರಸ್ತೆ ಕಾಮಗಾರಿಗೆ ಮರ ಗಳು ಹಾಗೂ ವಿದ್ಯುತ್‌ ಕಂಬಗಳು ತೆರವುಗೊಳಿಸದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಗ್ಗೆ ಉದಯವಾಣಿ ಕೋಲಾರ ಆವೃತ್ತಿಯಲ್ಲಿ ಅ.7ರಂದು “”ಮರ, ಕಂಬ ತೆರವು ಮಾಡದಿದ್ರೆ ಕಾಮಗಾರಿ ಸ್ಥಗಿತ” ಶೀರ್ಷಿಕೆಯಡಿ ಪ್ರಕಟವಾಗಿದ್ದ ವರದಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಶುಕ್ರವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ ಶಶಿಧರ್‌, ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಶೀಘ್ರ ಪೂರ್ಣ ಭರವಸೆ: ರಾಷ್ಟ್ರೀಯ ಪ್ರಾಧಿಕಾರದ ಹೆದ್ದಾರಿಯಾಗಿರುವ ಈ ರಸ್ತೆಯನ್ನು ಗುಜರಾತ್‌ ಮೂಲದ ಸಂಸ್ಥೆ ಪಿಚ್ಚಹಳ್ಳಿ-ಎನ್‌.ಜಿ.ಹುಲ್ಕೂರು ಗ್ರಾಮ ದವರೆಗೆ ರಸ್ತೆ ಅಭಿವೃದ್ಧಿಗಾಗಿ 54 ಕೋಟಿಗೆ ಗುತ್ತಿಗೆಪಡೆದುಕೊಂಡಿದ್ದು, ರಾಷ್ಟ್ರೀಯ ವಿಪತ್ತು ಎದುರಾಗಿ ಅನುದಾನ ಬಿಡುಗಡೆಯಾಗದೆ, ರಸ್ತೆ ಕಾಮಗಾರಿ ಸ್ಥಗಿತ ಗೊಳಿಸಲಾಗಿತ್ತು. ಅನುದಾನದಲ್ಲಿ ಸ್ವಲ್ಪ ಭಾಗವನ್ನು ಬಿಡುಗಡೆ ಮಾಡಿರುವ ಹಿನ್ನೆಲೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳುವುದಾಗಿ ಭರವಸೆ ನೀಡಿದರು.

ವಿದ್ಯುತ್‌, ಅರಣ್ಯ ಇಲಾಖೆಗೆ ಸೂಚನೆ: ರಸ್ತೆಯ ಅಕ್ಕಪಕ್ಕದಲ್ಲಿ ರಸ್ತೆಗೆ ಅಡ್ಡವಾಗಿರುವ ವಿದ್ಯುತ್‌ ಕಂಬಗಳನ್ನು ಇಂದಿನಿಂದಲೇ (ಶುಕ್ರವಾರ) ಸ್ಥಳ ಗುರುತಿಸಿ ವಿದ್ಯುತ್‌ ಕಂಬಗಳನ್ನು ಮತ್ತೂಂದು ಕಡೆಗೆ ಸ್ಥಳಾಂತರ  ಮಾಡಬೇಕೆಂದರು. ರಸ್ತೆ ಪಕ್ಕದಲ್ಲಿರುವ ಮರಗಳನ್ನು ಶೀಘ್ರವಾಗಿ ಗುತ್ತಿಗೆ ಮೂಲಕ ತೆರವುಗೊಳಿಸಿ ರಸ್ತೆ ಕಾಮಗಾರಿನಡೆಸಲುಅನುವುಮಾಡಿಕೊಡಬೇಕೆಂದು ಸೂಚಿಸಿದರು.

ರಸ್ತೆ ಎತ್ತರ ಮಾಡಿ: ಈ ರಸ್ತೆಯಲ್ಲಿ ಮಳೆ ನೀರು ನಿಲ್ಲುವುದರಿಂದ ಮಳೆ ಬಂದಾಗ ರಸ್ತೆಯೇ ಕಾಣದೆ ಅಪ ಘಾತ ಸಂಭವಿಸುತ್ತವೆ. ರಸ್ತೆಯನ್ನು ಎತ್ತರ ಮಾಡಿ ನಂತರ ಡಾಂಬರೀಕರಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಈ ರಸ್ತೆ ಕಾಮಗಾರಿ ನಡೆಸಲು ಸ್ಥಳೀಯರಿಂದ ಹಾಗೂ  ಇಲಾಖೆಯಿಂದ ಯಾವುದೇ ಸಮಸ್ಯೆಯಾದರೂ ತಮ್ಮ ಗಮನಕ್ಕೆ ತಂದು ಇತ್ಯರ್ಥಪಡಿಸಿಕೊಂಡು ರಸ್ತೆಗೆ ಮುಕ್ತಿ ನೀಡಿ ಎಂದರು.

ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿ ವೇಣು, ರವೀಂದ್ರ, ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ ರೆಡ್ಡಿ, ಬೇತಮಂಗಲ ಸೊಸೈಟಿ ನಿರ್ದೇಶಕರಾದ ಸುರೇಂದ್ರಗೌಡ, ಒಬಿಸಿ ಮುನಿ ಸ್ವಾಮಿ, ಎಪಿಎಂಸಿ ನಿರ್ದೇಶಕ ರಾಮಚಂದ್ರ, ಮುಖಂಡರಾದ ತಂಬಾರಹಳ್ಳಿ ಮುನೇಗೌಡ, ಶ್ರೀಧರ್‌ರೆಡ್ಡಿ, ಗುತ್ತಿಗೆದಾರರು, ರಾಷ್ಟ್ರೀಯ ಹೆದ್ದಾರಿಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕರು ಹಾಜರಿದ್ದರು.

ಸರ್ಕಾರದಿಂದ ಅನುದಾನ ಬಿಡುಗಡೆಯಾಗದೆ ಹಿನ್ನೆಲೆ ರಸ್ತೆ ಕಾಮಗಾರಿ ಸ್ಥಗಿತ ಮಾಡಲಾಗಿತ್ತು. ಸ್ವಲ್ಪ ಅನುದಾನ ಗುತ್ತಿಗೆದಾರರಿಗೆ ನೀಡಲಾಗಿದೆ. ರಸ್ತೆಯ ಪಕ್ಕದ ಮರ ಹಾಗೂ ವಿದ್ಯುತ್‌ ನಿಗಮದವರುಕಂಬಗಳನ್ನು ತೆರವು ಮಾಡಿದ್ದಾರೆ. ರಸ್ತೆ ಪೂರ್ಣಗೊಳಿಸಲಾಗುವುದು. ಶಾಸಕರು ಅನೇಕ ಬಾರಿ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಚರ್ಚಿಸಿದ್ದಾರೆ. ಮಲ್ಲಿಕಾರ್ಜುನ್‌, ಎಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರ

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.