2 ಕೋಟಿ ಹಣ ದುರುಪಯೋಗ: ಕೇಸು ದಾಖಲಿಗೆ ಸೂಚನೆ

ಮುಳಬಾಗಿಲು ನಗರಸಭೆಗೆ ಡೀಸಿ ಮಂಜುನಾಥ್‌ ದಿಢೀರ್‌ ಭೇಟಿ • ದಾಖಲಾತಿಗಳ ಪರಿಶೀಲನೆ

Team Udayavani, May 20, 2019, 11:59 AM IST

kolar-tdy-1..

ಮುಳಬಾಗಿಲು ನಗರಸಭೆಗೆ ಭಾನುವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರು ದಿಢೀರ್‌ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಮುಳಬಾಗಿಲು: ನಗರದ ಅಭಿವೃದ್ಧಿಗಾಗಿ ಸರ್ಕಾರ ದಿಂದ ಬಿಡುಗಡೆಯಾಗಿದ್ದ 2014-15ನೇ ಸಾಲಿನ ಎಸ್‌ಎಫ್ಸಿ ಮತ್ತು 14ನೇ ಹಣಕಾಸು ಯೋಜನೆ ಯಲ್ಲಿನ 2 ಕೋಟಿ ರೂ. ಅನುದಾನ ದುರುಪ ಯೋಗವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಕುರಿತು ಮತ್ತೂಮ್ಮೆ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಪೌರಾಯುಕ್ತ ಎಸ್‌.ರಾಜುಗೆ ಸೂಚಿಸಿದರು.2 ಕೋಟಿ ರೂ.

ನಗರಸಭೆ ಕಚೇರಿಗೆ ಭಾನುವಾರ ದಿಢೀರ್‌ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿಗಳು ಮಾತನಾಡಿ, ನಗರದ ನಾಗರಿಕರಿಗೆ ಮೂಲ ಸೌಕರ್ಯ ಗಳನ್ನು ಕಲ್ಪಿಸಲು ಸರ್ಕಾರದಿಂದ ನೂರಾರು ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿಗಳನ್ನು ಮಾಡು ವುದು ಮಾತ್ರ ಸಿಬ್ಬಂದಿಯ ಕೆಲಸವಲ್ಲ, ಕಂದಾಯ ವಸೂಲಿ ಮಾಡುವುದು ತಮ್ಮ ಕೆಲಸವೆಂಬುದು ತಿಳಿಯರಿ ಎಂದು ತಾಕೀತು ಮಾಡಿದರು.

ಕಠಿಣ ಕ್ರಮದ ಎಚ್ಚರಿಕೆ: ಕಚೇರಿಯ ಲೆಕ್ಕ ಪತ್ರಗಳ ಕಡತಗಳನ್ನು ಪರಿಶೀಲನೆ ನಡೆಸಿ ಕಂದಾಯ ಮತ್ತು ನೀರಿನ ತೆರಿಗೆ ಮಾಡುವಲ್ಲಿ ಸಿಬ್ಬಂದಿಯು ಹಿಂದುಳಿ ದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ನಗರಸಭೆಗೆ ಬರಬೇಕಾಗಿರುವ ಬಾಕಿ ಕಂದಾಯವನ್ನು ಕೂಡಲೇ ವಸೂಲಿ ಮಾಡಿ ಎಂದು ಸೂಚನೆ ನೀಡಿದ ಅವರು, ಈ ರೀತಿ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಅಲ್ಲದೇ, ನಗರದಲ್ಲಿ ಅಂಗಡಿಗಳ ಪರವಾನಗಿ ನವೀಕರಣ ಮಾಡದೇ ಇರುವವರು ಮತ್ತು ತೆರಿಗೆ ಕಟ್ಟದೇ ಇರುವವರಿಗೆ ಕೂಡಲೇ ನೋಟಿಸ್‌ ನೀಡಿ ಮೇ 31ರ ಒಳಗಾಗಿ ಬಾಕಿ ತೆರಿಗೆ ವಸೂಲಿ ಮಾಡಿ ಮತ್ತು ಆದೇಶವನ್ನು ಉಲ್ಲಂಘಿಸುವವರ ಅಂಗಡಿಗೆ ಮೂಲಾಜಿಲ್ಲದೆ ಬೀಗ ಹಾಕಬೇಕು ಎಂದರಲ್ಲದೇ, ನಗರಸಭೆಯಲ್ಲಿನ ಗುತ್ತಿಗೆ ನೌಕರರಿಗೆ ಹಣ ಕ್ರೋಡೀಕರಿಸಿ ವೇತನ ನೀಡುವಂತೆ ಪೌರಾಯುಕ್ತರಿಗೆ ಸೂಚಿಸಿದರು.

ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ನಗರದಲ್ಲಿ ಈಗಾಗಲೇ ಪ್ಲಾಸ್ಟಿಕ್‌ ನಿಷೇಧ ಮಾಡಲು ಕ್ರಮ ತೆಗೆದುಕೊಂಡಿರುವ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಕೊಂಡ ಜಿಲ್ಲಾಧಿಕಾರಿ ಮಂಜುನಾಥ್‌, ಈಗಲೂ ಸಹ ಅಂಗಡಿ ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಆರೋಗ್ಯ ನಿರೀಕ್ಷಕರನ್ನೊಳ ಗೊಂಡ ತಂಡವನ್ನು ರಚಿಸಿ ಪ್ಲಾಸ್ಟಿಕ್‌ ಮುಕ್ತ ನಗರ ವನ್ನಾಗಿ ಮಾಡಲು ಶ್ರಮವಹಿಸಿ, ನಗರಸಭೆಯಿಂದ ಪರವಾನಗಿ ಪಡೆಯದೇ, ಅನಧಿಕೃತವಾಗಿ ತೆರೆದಿರುವ ಅಂಗಡಿ ಮುಂಗಟ್ಟುಗಳ ಮೇಲೆ ಯಾವುದೇ ಮುಲಾ ಜಿಲ್ಲದೆ ಕ್ರಮಕೈಗೊಳ್ಳಿ ಎಂದು ಪೌರಾಯುಕ್ತರಿಗೆ ಸೂಚಿಸಿದರು.

ಕುಡಿಯುವ ನೀರಿಗೆ ಆದ್ಯತೆ ನೀಡಿ: ಬಸ್‌ ನಿಲ್ದಾಣದ ಅಂಚಿನಲ್ಲಿರುವ ನಗರಸಭೆಗೆ ಸೇರಿದ ಹೂ ಮತ್ತು ಹಣ್ಣು ಮಾರುಕಟ್ಟೆಯಲ್ಲಿನ ಅಂಗಡಿಗಳನ್ನು ಹರಾಜು ಹಾಕುವಂತೆ ಮತ್ತು ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಸ್ಥಳ ಗುರುತಿಸಬೇಕೆಂದು ಪೌರಾಯುಕ್ತರಿಗೆ ಸೂಚಿಸಿ ದರು. ಅಲ್ಲದೇ, ನಗರದಲ್ಲಿ ನೀರಿನ ತೀವ್ರ ಅಭಾವ ವಿರುವುದರಿಂದ ಕುಡಿಯುವ ನೀರನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡಿ ಎಂದು ಹೇಳಿದರು.

ಕೂಡಲೇ ಪಂಪ್‌ಸೆಟ್ ಅಳವಡಿಸಿ: ಬೇತಮಂಗಲ ದಲ್ಲಿರುವ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಈಗಾಗಲೇ ನಗರದಲ್ಲಿ ಕೊರೆಯಿಸಿರುವ ಕೊಳವೆ ಬಾವಿಗಳಿಗೆ ಪಂಪು ಮೋಟರ್‌ ಅಳವಡಿಸದೇ ಹಾಗೂ ಪೈಪ್‌ಲೈನ್‌ ಅಳವಡಿಸದೆ ಇರುವುದನ್ನು ಕೇಳಿ ಸ್ಥಳದಿಂದಲೇ ಮಂಡಳಿ ಅಧಿಕಾರಿಗಳಿಗೆ ಕರೆ ಮಾಡಿ ಬಾಕಿ ಉಳಿದಿರುವ ಕೆಲಸಗಳನ್ನು ಕೂಡಲೇ ಮಾಡಬೇಕು, ತಪ್ಪಿದ್ದಲ್ಲಿ ಮಂಡಳಿ ವಿರುದ್ಧ ಕ್ರಮ ತೆಗೆದು ಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪೌರಾಯುಕ್ತ ಎಸ್‌.ರಾಜು, ಪ್ರದೀಪ್‌ಕುಮಾರ್‌, ಆರೋಗ್ಯ ನಿರೀಕ್ಷಕ ಅಶ್ವತ್ಥ್ರೆಡ್ಡಿ, ಸುನಿಲ್ಕುಮಾರ್‌, ಲೆಕ್ಕಾಧಿಕಾರಿ ಅರ್ಚನಾ ಸೇರಿದಂತೆ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.