ರಾಜಕಾರಣದಿಂದ ಧರ್ಮ ಬೇರ್ಪಡಿಸಿ

Team Udayavani, Sep 6, 2019, 2:52 PM IST

kolar-tdy-2

ಕೋಲಾರ: ಸರ್ಕಾರದ ಕಾರ್ಯಕ್ರಮಗಳನ್ನು ಧರ್ಮದ ಅಡಿಯಾಳಾಗಿಸದಿರುವುದೇ ನಿಜವಾದ ಜಾತ್ಯತೀತ ವ್ಯವಸ್ಥೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಡಾ.ಎಲ್.ಬಸವರಾಜು ಪ್ರತಿಷ್ಠಾನದಿಂದ ಆಯೋಜಿಸಿದ್ದ ಡಾ.ಎಲ್.ಬಸವರಾಜು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ, ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಜಾತ್ಯತೀತ ಎಂದರೆ ಸರ್ವ ಧರ್ಮಗಳನ್ನು ಸಮನಾಗಿ ಕಾಣುವುದು ಎಂದಲ್ಲ. ಧರ್ಮವನ್ನು ರಾಜಕಾರಣದಿಂದ ಬೇರ್ಪಡಿಸುವ ಸಾಮಾಜಿಕ ವ್ಯವಸ್ಥೆಯೇ ಜಾತ್ಯ ತೀತ ಎಂದು ಅಭಿಪ್ರಾಯಪಟ್ಟರು.

ಜಾತ್ಯತೀತ ಎಂದರೆ ಎಲ್ಲ ಧರ್ಮಗಳನ್ನು ಸಮನಾಗಿ ಕಾಣುವುದೇ ಜಾತ್ಯತೀತ ಎನ್ನಲಾಗುತ್ತದೆ. ಅದು ತಪ್ಪು. ಸರ್ಕಾರದ ಕಾರ್ಯಕ್ರಮಗಳು ಧರ್ಮದ ಅಡಿಯಾಳಾಗಿಸದಿರುವುದೇ ನಿಜವಾದ ಜಾತ್ಯತೀತ ವ್ಯವಸ್ಥೆ, ಎಲ್ಲ ಪಾಲಿಸಿಗಳು ಜನಹಿತವಾಗಿರಬೇಕು, ಅದುವೇ ನಿಜವಾದ ಪ್ರಜಾಪ್ರಭುತ್ವ, ಈ ನಿಟ್ಟಿನಲ್ಲಿ ಎಂದೂ ಚರ್ಚೆಯೇ ಆಗಿಲ್ಲ ಎಂದು ನುಡಿದರು. ಅಂಬೇಡ್ಕರ್‌ ಎಂದರೆ ಮೀಸಲಾತಿ ಅಲ್ಲ, ಅಂಬೇಡ್ಕರ್‌ ಅವರನ್ನು ಮೀಸಲಾತಿಗೆ ಸೀಮಿತಗೊಳಿಸಿರುವುದು ಅಸಹ್ಯ ಹುಟ್ಟಿಸುತ್ತಿದೆ. ಮೀಸಲಾತಿ ಸಾಮಾಜಿಕ ನ್ಯಾಯದ ಸಣ್ಣ ಅಣು ಅಷ್ಟೇ. ಶ್ರಮಕ್ಕೆ ಸರಿಯಾಗಿ ಪ್ರತಿಫಲ ನೀಡುವುದೇ ಸಾಮಾಜಿಕ ನ್ಯಾಯ. ಉತ್ಪಾದನೆ ಆಗುವ ಸಂಪತ್ತು ಶ್ರಮಿಕರಿಗೆ ಸಿಗದೆ ಪರರ ಪಾಲಾಗುತ್ತಿರುವುದರಿಂದಲೇ ಬಡತನ, ನಿರುದ್ಯೋಗಕ್ಕೆ ಕಾರಣವಾಗುತ್ತಿದೆ ಎಂದರು.

ಬಾಲ್ಯದಿಂದಲೇ ಬಡತನ, ಕಷ್ಟಗಳನ್ನು ಅನುಭವಿಸಿಕೊಂಡು ಬೆಳೆದ ವಿ.ಗೀತಾ ಎರಪಂಥೀಯ ಹೋರಾಟಗಳ ಮೂಲಕ ರಾಜ್ಯ ಮಟ್ಟಕ್ಕೆ ಬೆಳೆದಿದ್ದಾರೆ. ಹೋರಾಟಗಾರ್ತಿಯನ್ನು ಗುರುತಿಸಿರುವುದು ಜಾತ್ಯತೀತ ಶಕ್ತಿಗೆ ನೀಡಿದ ಗೌರವ ಎಂದು ನುಡಿದರು.

ಚಿಂತಕ ಲಕ್ಷ್ಮೀಪತಿ ಕೋಲಾರ, ಭಾರತವನ್ನು ತಾಯಿನಾಡು, ಮಾತೃಭೂಮಿ ಎಂದು ಉನ್ಮಾದದಲ್ಲಿ ಬಣ್ಣೀಸಲಾಗುತ್ತುದೆಯೇ ವಿನಃ ತಾಯಿಯ ಹೆಸರಿಟ್ಟಿಲ್ಲ, ಭರತ ಎನ್ನುವ ಪುರುಷನ ಹೆಸರಿನಿಂದ ಕರೆಯಲ್ಪಡುತ್ತಿರುವುದು ವೈರುಧ್ಯ ಹಾಗೂ ವ್ಯಂಗ್ಯವೂ ಹೌದು ಎಂದರು. ಸನ್ಮಾನ ಸ್ವೀಕರಿಸಿದ ವಿ.ಗೀತಾ, ದಲಿತ ಮತ್ತು ಕಮ್ಯನಿಸ್ಟ್‌ ಚಳವಳಿಗಳು ಇನ್ನು ಇಂದಿಗೂ ಚಳವಳಿಯಾಗಿಯೇ ಉಳಿಯಲು ಕಾರಣವಾಗಿದೆ. ನನ್ನನ್ನು ಪೋಷಣೆ ಮಾಡಿದ್ದು, ಬೆಳೆಸಿದ್ದು ಕೂಡ ಚಳವಳಿಯ ನಾಯಕರೇ ಎಂದರು.

ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮೀನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪುರುಷೋತ್ತಮರಾವ್‌, ವಿಮರ್ಶಕ ಡಾ.ಚಂದ್ರಶೇಖರ ನಂಗಲಿ, ಕಸಾಪ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್‌ ಇತರರಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.