ಜಿಲ್ಲೆಗೆ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಆಗಮನ


Team Udayavani, Mar 18, 2019, 7:15 AM IST

jillege.jpg

ಕೋಲಾರ: ಜಿಲ್ಲಾದ್ಯಂತ ಮಾ.21ರಿಂದ 71 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಸಂಬಂ ಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಬಿಗಿ ಬಂದೋಬಸ್ತ್ನಲ್ಲಿ ಪ್ರಶ್ನೆಪತ್ರಿಕೆಗಳನ್ನು ಬೆಳಗ್ಗೆ 11 ಗಂಟೆಗೆ ಕೋಲಾರಕ್ಕೆ ತರಲಾಯಿತು.

ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದ್ದು, ಕಾಂಪೌಂಡ್‌ಗೇಟ್‌ಗೆ ಬೀಗ ಹಾಕಿ ಸಾರ್ವಜನಿಕರು ಒಳಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಡಿಡಿಪಿಐ ಕೆ.ರತ್ನಯ್ಯ ಹಾಗೂ ಪರೀಕ್ಷಾ ನೋಡೆಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಬೆಂಗಳೂರಿನಿಂದ ಬೀಗಮುದ್ರೆಯೊಂದಿಗೆ ಆಗಮಿಸಿದ್ದ ವಾಹನದಿಂದ ಪ್ರಶ್ನೆಪತ್ರಿಕೆಗಳ ಬಂಡಲ್‌ಗ‌ಳನ್ನು ಪಡೆದುಕೊಂಡು ಸ್ಥಳದಲ್ಲೇ ಪರಿಶೀಲನೆ ನಡೆಸುತ್ತಿದ್ದುದು ಕಂಡು ಬಂತು.

ಆಯಾ ತಾಲೂಕುವಾರು ಪ್ರಶ್ನೆಪತ್ರಿಕೆ ಬಂಡಲ್‌ಗ‌ಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿದ ನಂತರ ಅಧಿಕಾರಿಗಳು ಪರಿಶೀಲನೆ ನಡೆಸಿ ಬಂಡಲ್‌ ಮುದ್ರೆಗೆ ಯಾವುದೇ ಲೋಪವಾಗಿಲ್ಲ ಎಂಬುದನ್ನು ದೃಢಪಡಿಸಿಕೊಂಡರು.

ತಾಲೂಕುಗಳತ್ತ ಪ್ರಶ್ನೆಪತ್ರಿಕೆ: ಶಸ್ತ್ರಸಜ್ಜಿತ ಪೊಲೀಸ್‌ಬಂದೋಬಸ್ತ್ನಲ್ಲಿ ಆಯಾ ತಾಲೂಕುವಾರು ಪ್ರಶ್ನೆಪತ್ರಿಕೆಗಳನ್ನು ಬೀಗ ಮುದ್ರೆ ಹಾಕಿದ ಪೆಟ್ಟಿಗೆಗಳಲ್ಲಿ ತುಂಬಿ ಪ್ರತ್ಯೇಕ ವಾಹನದಲ್ಲಿ ಆ ವ್ಯಾಪ್ತಿಯ ಕ್ಷೇತ್ರಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕಳುಹಿಸಿಕೊಡುವ ಕಾರ್ಯವನ್ನು ಪರೀಕ್ಷಾ ನೋಡೆಲ್‌ ಅ ಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌ ನಡೆಸಿದರು.

ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶವಿಲ್ಲದಂತೆ ಕಟ್ಟೆಚ್ಚರ ವಹಿಸಿರುವ ಇಲಾಖೆ ಅಧಿಕಾರಿಗಳು, ಪ್ರಶ್ನೆಪತ್ರಿಕೆ ಬಂಡಲ್‌ಗ‌ಳನ್ನು ತುಂಬಿದ ವಾಹನಗಳು ಆಯಾ ತಾಲೂಕು ಮಾರ್ಗಾಧಿಕಾರಿಗಳ ನೇತೃತ್ವದಲ್ಲಿ ಹೋಗುವವರೆಗೂ ಕಚೇರಿ ಕಾಂಪೌಂಡ್‌ ಒಳಕ್ಕೆ ಸಾರ್ವಜನಿಕರಿಗೆ ನಿಷೇಧ ಹಾಕಿದ್ದುದು ಕಂಡು ಬಂತು.

ತಾಲೂಕುವಾರು ಖಜಾನೆಯಲ್ಲಿ ಸಂರಕ್ಷಣೆ: ತಾಲೂಕು ಮಾರ್ಗಾ ಕಾರಿಗಳ ನೇತೃತ್ವದಲ್ಲಿ ಶಸ್ತ್ರಸಜ್ಜಿತ ಪೊಲೀಸರ ರಕ್ಷಣೆಯಲ್ಲಿ ಹೊರಟ ಪ್ರಶ್ನೆಪತ್ರಿಕೆ ಬಂಡಲ್‌ಗ‌ಳನ್ನು ಆಯಾ ತಾಲೂಕು ಖಜಾನೆಗಳಲ್ಲಿ ಠೇವಣಿ ಮಾಡಿ ಸಂರಕ್ಷಿಸಿಡಲು ಡಿಡಿಪಿಐ ಕೆ.ರತ್ನಯ್ಯ ಸೂಚನೆ ನೀಡಿದರು.

ಕೋಲಾರ ತಾಲೂಕಾದ್ಯಂತ ಇರುವ ಒಟ್ಟು 17 ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿ ಸಿದ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡಲಾಗಿದ್ದು, ಕ್ಷೇತ್ರ ಶಿಕ್ಷಣಾಧಿ ಕಾರಿ ಕೆ.ಎಸ್‌.ನಾಗರಾಜಗೌಡ, ತಾಲೂಕು ಪರೀಕ್ಷಾ ನೋಡೆಲ್‌ ಅಧಿಕಾರಿ ಮುನಿರತ್ನಯ್ಯಶೆಟ್ಟಿ ಪ್ರಶ್ನೆಪತ್ರಿಕೆಗಳ ಬಂಡಲ್‌ಗ‌ಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ಖಜಾನೆಗೆ ರವಾನಿಸಿದರು.

ಉಳಿದಂತೆ ಬಂಗಾರಪೇಟೆಯ 11 ಕೇಂದ್ರಗಳ ಪ್ರಶ್ನೆಪತ್ರಿಕೆಗಳು, ಮಾಲೂರಿನ 11 ಕೇಂದ್ರಗಳು, ಮುಳಬಾಗಿಲಿನ 10, ಕೆಜಿಎಫ್‌ನ 10, ಶ್ರೀನಿವಾಸಪುರದ 12 ಕ್ಷೇತ್ರಗಳ ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಗೆ ಸಂರಕ್ಷಿಸಿಡಲು ಪೊಲೀಸ್‌ ಬಂದೋಬಸ್ತ್ನಲ್ಲಿ ಸಾಗಿಸಲಾಯಿತು. 

ಈ ಸಂದರ್ಭದಲ್ಲಿ ಡಿಡಿಪಿಐ ಕೆ.ರತ್ನಯ್ಯ, ಪರೀಕ್ಷಾ ನೋಡೆಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಶಿಕ್ಷಣಾ ಧಿಕಾರಿ ಸಿ.ಆರ್‌.ಅಶೋಕ್‌, ಬಿಇಒಗಳಾದ ಕೆ.ಎಸ್‌.ನಾಗರಾಜಗೌಡ, ಮಾಧವರೆಡ್ಡಿ, ಕೆಂಪಯ್ಯ, ಷಂಷೂನ್ನೀಸಾ, ಕೆಂಪರಾಮು, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ, ಮುಖ್ಯ ಅಧೀಕ್ಷಕರಾದ ಪಟ್ನ ನಾಗರಾಜ್‌, ನಜೀರ್‌ ಮತ್ತಿತರರು ಹಾಜರಿದ್ದರು. 

ಟಾಪ್ ನ್ಯೂಸ್

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

cm

ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಕಿತ್ತೂರು ಉತ್ಸವ ಸಿದ್ಧತೆ ಪರಿಶೀಲಿಸಿದ ಡಿಸಿ-ದೊಡಗೌಡ್ರ

ಕಿತ್ತೂರು ಉತ್ಸವ ಸಿದ್ಧತೆ ಪರಿಶೀಲಿಸಿದ ಡಿಸಿ-ದೊಡಗೌಡ್ರ

ನವೆಂಬರ್‌ದೊಳಗೆ ಏತ ನೀರಾವರಿ ಯೋಜನೆ ಪೂರ್ಣ

ನವೆಂಬರ್‌ದೊಳಗೆ ಏತ ನೀರಾವರಿ ಯೋಜನೆ ಪೂರ್ಣ

ಬಸ್‌ ಪಾಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಬಸ್‌ ಪಾಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.