ಕೋಲಾರ ಜಿಲ್ಲೆಯಲ್ಲೂ ಕಠಿಣ ಲಾಕ್ ಡೌನ್ ನಿಯಮ ಜಾರಿ: ಡಿಸಿ  ಡಾ. ಸೆಲ್ವಮಣಿ

Team Udayavani, May 20, 2021, 2:39 PM IST

ಕೋಲಾರ ಜಿಲ್ಲೆಯಲ್ಲೂ ಕಠಿಣ ಲಾಕ್ ಡೌನ್ ನಿಯಮ ಜಾರಿ: ಡಿಸಿ  ಡಾ. ಸೆಲ್ವಮಣಿ

ಕೋಲಾರ: ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಮೇ.21 ಸಂಜೆ 6 ರಿಂದ ಮೇ.25 ಬೆಳಿಗ್ಗೆ 6 ರವರೆಗೆ ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದರು.

ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆ. 6 ರಿಂದ ಸಂಜೆ 6  ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.

ಅಂಗಡಿಗಳಲ್ಲಿ ದಿನಸಿ, ತರಕಾರಿ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಮಾರಾಟಕ್ಕೆ ಈಗ ಬೆಳಿಗ್ಗೆ 6 ರಿಂದ 10ರವರೆಗೆ ಅವಕಾಶವಿತ್ತು. ಅದನ್ನು ಇನ್ನು ಮೂರು ದಿನಗಳ ಕಾಲ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಳೆ ಸಂಜೆವರೆಗೂ ತಮಗೆ ಅಗತ್ಯವಿರುವ ವಸ್ತುಗಳ ಖರೀದಿಯನ್ನು ಮಾಡಿ ಇಟ್ಟುಕೊಳ್ಳುವಂತೆ ಜಿಲ್ಲೆಯ ಜನತೆಗೆ ಜಿಲ್ಲಾಧಿಕಾರಿಗಳು ಕೋರಿದರು.

ಹೋಟೆಲ್ ನಿಂದ ಆಹಾರ ಪಾರ್ಸೆಲ್ ತರುವುದು ಈಗ ಜಾರಿಯಿರುವಂತೆ ಮುಂದುವರೆಯಲಿದೆ ಎಂದ ಅವರು, ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಸಂಜೆ 6 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಬ್ಯಾಂಕಿಂಗ್ ಕಚೇರಿಗಳೂ ಈ ಮೂರು ದಿನ ಮುಚ್ಚಿರುತ್ತವೆ. ಆದರೆ, ಎಟಿಎಂ ವ್ಯವಸ್ಥೆ ಲಭ್ಯವಿರಲಿದೆ. ಸರ್ಕಾರಿ ಕಚೇರಿಗಳು ಈಗಾಗಲೇ ಜಾರಿಯಿರುವ ನಿಯಮದಂತೆ ಕಾರ್ಯ ಮುಂದುವರೆಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ, ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.