ಅಪಘಾತ ತಡೆಯಲು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಿ


Team Udayavani, Nov 8, 2019, 4:17 PM IST

kolar-tdy-2

ಕೋಲಾರ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಇವುಗಳನ್ನು ತಡೆಯಲು ಶಾಶ್ವತ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ 14 ಅಪಘಾತ ವಲಯಗಳನ್ನು ಗುರುತಿಸಿದ್ದು, ಇಲ್ಲಿ ಸೈನ್‌ಬೋರ್ಡ್‌, ಹಂಪ್ಸ್‌, ರಿಪ್ಲೆಕ್ಟರ್‌ ಇತ್ಯಾದಿ ಸುರಕ್ಷತಾ ಕ್ರಮಗಳನ್ನು 5 ದಿನಗಳೊಳಗೆ ಅಳವಡಿಸುವಂತೆ ಲ್ಯಾಂಕೋ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಿಡ್ಜ್ ನಿರ್ಮಿಸಿ: ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ 1.3 ಕಿ.ಮೀ, ಕೊಂಡರಾಜನಹಳ್ಳಿ ಬಳಿ ಸರ್ವೀಸ್‌ ರಸ್ತೆ ವಿಸ್ತರಣೆಗೆ ಅನುಮೋದನೆ ಯಾಗಿದ್ದು, ಇವು ಸೇರಿದಂತೆ ಮುಂದಿನ 5 ವರ್ಷಗಳಿಗೆ ಅಗತ್ಯವಾದ ಸರ್ವೀಸ್‌ ರಸ್ತೆ ಅಂಡರ್‌ ಪಾಸ್‌, ಫ‌ೂಟ್‌ಓವರ್‌ ಬ್ರಿಡ್ಜ್ ಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲೆಲ್ಲಿ ಹಳ್ಳಿಗಳು ಬರುತ್ತವೆ. ಅಲ್ಲಿ ಕಡ್ಡಾಯವಾಗಿ ಸರ್ವೀಸ್‌ ರಸ್ತೆಯನ್ನು ಒದಗಿಸಬೇಕು. ಹನುಮನಹಳ್ಳಿ ಟೋಲ್‌ ಬಳಿ ಇರುವ ಶೌಚಾಲಯವನ್ನು ಎರಡು ದಿನದಲ್ಲಿ ಸುಸ್ಥಿತಿಗೆ ತಂದು ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಸೂಚಿಸಿದರು.

ಕ್ರಿಮನಲ್‌ ಕೇಸ್‌: ಈ ಸಂದರ್ಭದಲ್ಲಿ ಬೆಂಗಳೂರಿನ ಎನ್‌ಎಚ್‌ಎಐ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಿದ್ದು, ಸಮಿತಿ ಸೂಚಿಸುವ ಅಂಶಗಳನ್ನು ಪಾಲನೆ ಮಾಡುತ್ತಿಲ್ಲ. ಇದೇ ರೀತಿ ಯಾದರೆ ತಮ್ಮ ಹಾಗೂ ಲ್ಯಾಂಕೋ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನೆಗೆ ಕಳುಹಿಸುತ್ತೇವೆ: ಕೋಲಾರ ನಗರದ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆ ಮಾಡಬೇಕು ಎಂದ ಅವರು ಲೋಕೋಪಯೋಗಿ ಇಲಾಖೆಗೆ ಸೂಚಿಸಿರುವ ರಸ್ತೆಗಳನ್ನು ಶುಕ್ರವಾರ ಸಂಜೆ 5 ಗಂಟೆಯೊಳಗೆ ಗುಂಡಿ ಮುಚ್ಚಬೇಕು. ಇಲ್ಲದಿದ್ದರೆ ತಮ್ಮನ್ನು ಕಡ್ಡಾಯವಾಗಿ ಮನೆಗೆ ಕಳುಹಿಸುವ ಕ್ರಮಕೈಗೊಳ್ಳಲಾಗುವುದು ಎಂದು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಕೆಜಿಎಫ್‌ ಎಸ್ಪಿ ಮಹಮದ್‌ ಸುಜೀತಾ, ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜಾಹ್ನವಿ ಸೇರಿದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.