ಸೋಂಕಿತ ವ್ಯಕ್ತಿ ಓಡಾಟ: ಮುಂಜಾಗ್ರತೆ

Team Udayavani, Apr 10, 2020, 4:11 PM IST

ಸೋಂಕಿತ ವ್ಯಕ್ತಿ ಓಡಾಟ: ಮುಂಜಾಗ್ರತೆ

ಕೋಲಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೈಲುನರಸಾಪುರದ ಸೋಂಕಿತ ವ್ಯಕ್ತಿ ತಾಲೂಕಿನ ನರಸಾಪುರ, ವೇಮ ಗಲ್‌ ವ್ಯಾಪ್ತಿಯಲ್ಲಿ ತಿರುಗಾಡಿರುವುದರಿಂದ ಈ ಭಾಗದಲ್ಲಿ ಕೋವಿಡ್‌-19ರ ಆತಂಕವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದೊಳಕ್ಕೆ ಯಾರೂ ಹೊಸಬರು ಬಾರದಂತೆ ನಿಗಾವಹಿಸಿ ಎಂದು ತಾಲೂಕು ವೈದ್ಯಾಧಿಕಾರಿ ಡಾ.ರಮ್ಯದೀಪಿಕಾ ಸೂಚನೆ ನೀಡಿದರು.

ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಸೋಮೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕೋವಿಡ್‌-19ರ ಟಾಸ್ಕ್ಪೋರ್ಸ್‌ ಸಭೆ ಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.

ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಜನತೆ ತಮ್ಮ ವಹಿವಾಟು, ದಿನಸಿ ಖರೀದಿಗೆ ಸಾಮಾನ್ಯ ವಾಗಿ ನರಸಾಪುರವನ್ನು ಅವಲಂಬಿಸಿರು ವುದರಿಂದ ಈ ತುರ್ತು ಸಭೆ ಕರೆಯ ಲಾಗಿದೆ ಎಂದ ಅವರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಜನತೆಗೆ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ವಿನಾಕಾರಣ ಹೊರಗೆ ಓಡಾಡದಿರಿ, ವ್ಯಾಪಾರ, ವಹಿವಾಟಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಈ ಸಂಬಂಧ ಗ್ರಾಪಂ ಚುನಾಯಿತ ಪ್ರತಿನಿಧಿಗಳು ತಮ್ಮ ಗ್ರಾಮಗಳಲ್ಲಿ ನಿಗಾವಹಿಸಬೇಕು ಎಂದು ಮನವಿ ಮಾಡಿದರು. ಗ್ರಾಮಗಳಿಗೆ ಯಾರೇ ಹೊಸದಾಗಿ ಬಂದರೆ ನಿಗಾವಹಿಸಿ ಮಾಹಿತಿ ನೀಡುವಂತೆ ಸೂಚಿಸಿದ ಡಾ. ರಮ್ಯದೀಪಿಕಾ, ಕರೋನಾ ಮಾರಿ ಕೊನೆಗೊಳ್ಳುವವರೆಗೂ ಗ್ರಾಮಗಳಿಂದ ಹೊರಹೋಗುವುದು, ಹೊಸಬರನ್ನು ಗ್ರಾಮಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ತಿಳಿಸಿದರು.

ಗ್ರಾಮದಲ್ಲಿ ಜನತೆಗೆ ಅಗತ್ಯ ವಸ್ತುಗಳ ಪೂರೈಕೆಗೆ ಕೈಗೊಂಡಿರುವ ಕ್ರಮಗಳ ಕುರಿತು ಗಮನಹರಿಸಿದ ಅವರು, ಈ ಕಾರ್ಯಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ, ದಿನಸಿ ಮತ್ತಿತರ ವಸ್ತುಗಳು ಜನತೆಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದರು.

ಹೊಸಬರ ಪ್ರವೇಶ ಗ್ರಾಮಕ್ಕೆ ನಿಷೇದ್ಧ: ಪಿಡಿಒ ಅನುರಾಧಾ, ಬೈಲು ನರಸಾಪುರದ ಸೋಂಕಿತ ವ್ಯಕ್ತಿ ಪಕ್ಕದ ನರಸಾಪುರ ಗ್ರಾಮದಲ್ಲಿ ತಿರುಗಾಡಿ ಹೋಗಿರುವುದರಿಂದ ನಾವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ, ಈ ಸಂಬಂಧ ಗ್ರಾಮದ ಜನತೆಗೆ ನರಸಾಪುರಕ್ಕೆ ಹೋಗದಂತೆ ತಿಳಿಸಿದ್ದೇವೆ, ಗ್ರಾಮಕ್ಕೆ ಹೊಸಬರ ಪ್ರವೇಶಕ್ಕೂ ಅವಕಾಶ ನೀಡುತ್ತಿಲ್ಲ, ಯಾರೇ ಬಂದರೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.

ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಸವಿತಾ ಕೆಂಚೇಗೌಡ, ಉಪಾಧ್ಯಕ್ಷ ಶ್ರೀನಿವಾಸ್‌, ಗ್ರಾಪಂ ಸದಸ್ಯರು, ಹಿರಿಯ ಆರೋಗ್ಯ ಸಹಾಯಕಿ ವಾಣಿ, ಪ್ರೇರಕ ರಾಮ ಚಂದ್ರಪ್ಪ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ನೀರುಗಂಟಿ, ಗ್ರಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.