ಎಂಪಿ ಚುನಾವಣೆಯಲ್ಲಿ ಗೆಲುವು ನನ್ನದೇ

ಪಕ್ಷ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ವಿಶ್ವಾಸ

Team Udayavani, May 1, 2019, 2:19 PM IST

kolar-tdy-2..

ಮಾಲೂರು ಪಟ್ಟಣದಲ್ಲಿ ಕೋಲಾರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ, ಮಾಜಿ ಶಾಸಕ ಎ.ನಾಗರಾಜು ಮನೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸಿದರು.

ಮಾಲೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ನೀಡಿರುವ ಜನಪರ ಅಡಳಿತದ ಅಲೆ ಮತ್ತು ಜಿಲ್ಲೆಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ವಿರೋಧದ ಅಲೆ ನಡುವೆ ಬಿಜೆಪಿ ಕಾರ್ಯ ಕರ್ತರು ಹಾಗೂ ಮುಖಂಡರ ಶ್ರಮದಿಂದ ಈ ಬಾರಿ ಗೆಲುವು ನಮ್ಮದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜ್‌ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ನಡೆದಿರುವ ಮತ ದಾನದ ಬಗ್ಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ವ್ಯಾಪಕವಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಸಾಮಾನ್ಯ ಜನರಿಗೆ ತಲುಪಿದೆ. ಜನಪರ ಯೋಜನೆ ಗಳಿಂದ ಜನತೆ ಆಕರ್ಷಿತರಾಗಿದ್ದು, ನರೇಂದ್ರ ಮೋದಿ ಅವರು 2ನೇ ಬಾರಿಯೂ ಪ್ರಧಾನಿಯಾಗುವುದು ಖಚಿತವಾಗಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅವರು 7 ಬಾರಿ ಗೆಲವು ಪಡೆದು ಒಂದು ಬಾರಿ ಸಚಿವರಾದರೂ ಜಿಲ್ಲೆಗೆ ಯಾವುದೇ ರೀತಿಯ ಕೊಡುಗೆ ನೀಡಿಲ್ಲ ಎಂದು ದೂರಿದರು.

ಸೋತು ಮನೆಗೆ: ಕೇಂದ್ರದಿಂದ ಬರುವ ಅನು ದಾನವನ್ನು ಬಳಕೆ ಮಾಡುವಲ್ಲಿ ಕೆಎಚ್ಎಂ ವಿಫಲ ರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ರುವ ಸಂಸದರು ಕುಟುಂಬದ ಸ್ವಾರ್ಥಕ್ಕಾಗಿ ಆಸ್ತಿ ಮಾಡುವುದರಲ್ಲಿ ಕಾಲ ಕಳೆದರು. ಸ್ವಪಕ್ಷೀಯ ಮುಖಂಡರನ್ನು ರಾಜಕೀಯವಾಗಿ ಬೆಳೆಯಲು ಬಿಡದೆ ಕ್ಷೇತ್ರದ ಅಭಿವೃದ್ಧಿಯನ್ನೇ ಮರೆತ್ತಿದ್ದರು. ಅವರ ಪಕ್ಷದವರಿಗೆ ಅವರ ವಿರೋಧಿಗಳಾಗಿದ್ದು, ಇದರಿಂದ ಜನರು ಬೇಸತ್ತು ಕೆ.ಎಚ್.ಮುನಿಯಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸುತ್ತಾರೆ ಎಂದು ಹೇಳಿದರು.

ಕ್ಷೇತ್ರದ ಎಲ್ಲಾ ತಾಲೂಕುಗಳಲ್ಲಿಯೂ ಜನತೆ ಹಾಗೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಪಕ್ಷಾತೀತವಾಗಿ ಬಿಜೆಪಿಗೆ ವ್ಯಾಪಕ ಬೆಂಬಲ ವ್ಯಕ್ತಿಪಡಿಸಿ ಚುನಾವಣೆಯಲ್ಲಿ ಹೆಚ್ಚಿನ ಮತಗಳು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮುಖಂಡರು ಮೋದಿ ಅವರ ಸಾಧನೆಗಳನ್ನು ಜನರ ಮುಂದೆ ಪ್ರಚಾರ ಮಾಡಿಸುವ ಮೂಲಕ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಶ್ರಮವಹಿಸಿದ್ದಾರೆ. ಪಕ್ಷದ ಅಭ್ಯರ್ಥಿಗೆ ಆಯಾ ಮತಗಟ್ಟೆಗಳಲ್ಲಿ ಹೆಚ್ಚಿನ ಮತಗಳನ್ನು ಹಾಕಿಸಿದ ಕಾರ್ಯರ್ತರು ಮುಖಂಡರನ್ನು ಪಕ್ಷಾತೀತವಾಗಿ ಅಭಿನಂದಿಸುವುದಾಗಿ ತಿಳಿಸಿದರು.

ಸಮಸ್ಯೆ ಬಗೆಹರಿಸುತ್ತೇನೆ: ಮೇ 23ರಂದು ನಡೆಯುವ ಮತ ಎಣಿಕೆಯ ನಂತರ ಕ್ಷೇತ್ರದ ಎಲ್ಲಾ ತಾಲೂಕುಗಳ ಮತಗಟ್ಟೆಗಳ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಮುಖಂಡರನ್ನು ಪರಿಚಯಿಸಿಕೊಂಡು ಅಲ್ಲಿನ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಡೆಗಣಿಸಿದ್ದಕ್ಕೆ ತರಾಟೆ: ಇದೇ ವೇಳೆಯಲ್ಲಿ ಪಕ್ಷದ ಕೆಲವು ಯುವ ಕಾರ್ಯಕರ್ತರು ತಾಲೂಕಿನ ಕೆಲವು ಮುಖಂಡರು ಚುನಾವಣೆಯ ಮುನ್ನಾ ದಿನದ ರಾತ್ರಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ತಮ್ಮ ಸ್ವಾರ್ಥಕ್ಕಾಗಿ ಚುನಾವಣೆಯನ್ನು ನಡೆಸಿರುವ ಕ್ರಮವನ್ನು ಖಂಡಿಸಿ ಅಭ್ಯರ್ಥಿಯ ಸಮ್ಮುಖದಲ್ಲಿಯೇ ನೇರವಾಗಿ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜ್‌ ಬಿಜೆಪಿ ಜಿಲ್ಲಾ ಸಂಚಾಲಕ ಎಟ್ಟಕೋಡಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಆರ್‌.ಪ್ರಭಾಕರ್‌, ಪುರಸಭಾ ಮಾಜಿ ಅಧ್ಯಕ್ಷ ಸಿ.ಪಿ.ನಾಗರಾಜ್‌, ಎಂ.ರಾಮಮೂರ್ತಿ, ಮುಖಂಡರಾದ ಬಿ.ಎನ್‌.ರಾಜಾರಾಂ, ತಬಲ ನಾರಾ ಯಣಪ್ಪ, ಎನ್‌.ಟಿ.ರಾಜು, ಹನುಮಪ್ಪ, ಭಾವನಹಳ್ಳಿ ಮುರಳಿ, ಮೋಹನ್‌ ಬಾಬು, ರಾಮಣ್ಣ ಇದ್ದರು

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.