ಮಳೆಗೆ ಉದುರಿದ ಮಾವು ಮಾರ್ಕೆಟಲ್ಲಿ ಕೇಳ್ಳೋರಿಲ್ಲ

ಅಕಾಲಿಕ ಮಳೆಗೆ ಉದುರಿ ಹೋಗಿರುವ ಮಾವನ್ನು ಎಂ.ಜಿ. ರಸ್ತೆಯಲ್ಲಿ ಮಾರಾಟ ಮಾಡುತ್ತಿರುವ ರೈತರು.

Team Udayavani, Apr 24, 2019, 10:31 AM IST

KOLAR-TDY-1

ಶ್ರೀನಿವಾಸಪುರ: ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ಮಾವು ನೆಲಕಚ್ಚಿದ್ದು, ಬೆಳೆಗಾರರು ಹತಾಶರಾಗಿದ್ದಾರೆ.

ಯಲ್ದೂರು, ಕಸಬಾ ಹೋಬಳಿಗಳಲ್ಲಿ ಹೆಚ್ಚಿನ ನಷ್ಟವಾಗಿದ್ದು, ಹಿಂದಿನ ವರ್ಷ ಬೆಲೆಯಿಲ್ಲದೆ ಕಂಗಾಲಾಗಿದ್ದ ಬೆಳೆಗಾರ, ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ನಷ್ಟಕ್ಕೆ ಒಳಗಾಗುವಂತಾಗಿದೆ. ಬಿರು ಬಿಸಿಲಿಗೆ ಉದುರಿ ಉಳಿದಿದ್ದ ಮಾವು ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ನೆಲೆಕಚ್ಚಿದೆ. ಕಸಬಾ ಹೋಬಳಿಯಲ್ಲಿ ನೂರಾರು ಎಕರೆಯಲ್ಲಿದ್ದ ಮಾವು ಅರ್ಧ ಭೂಮಿ ಪಾಲಾಗಿದೆ.

ಮಳೆ ಅಭಾವದಿಂದ ಬಾಯಾರಿದ್ದ ನೆಲದಲ್ಲಿ ಮಾವಿನ ಹೂವು ಶೇ.30 ಭಾಗ ಮಾತ್ರ ಕಾಯಿ ಕಟ್ಟಿತ್ತು. ತಿಂಗಳಿಂದ ಮಳೆ ಇಲ್ಲದೆ ಬಿಸಿಲಿನ ಹಬೆಗೆ ಬಾಡಿದ್ದ ಮಾವು ವಾರದ ಹಿಂದೆ ಸುರಿದ ಆಲಿಕಲ್ಲು ಮಳೆಗೆ ನೆಲಕಚ್ಚಿದೆ. ತೋಟಗಳಲ್ಲಿ ಬಿಟ್ಟಿದ್ದ ಶೇ.50ರಿಂದ ಶೇ.65 ಭಾಗದಷ್ಟು ಮಾವಿನ ಪೀಚು ಉದುರಿದೆ. ಅದನ್ನು ತಂದು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹೋದರೆ ಕೇಳುವವರಿಲ್ಲ. ಟನ್‌ಗೆ ಕೇವಲ 2 ರಿಂದ 3 ಸಾವಿರ ರೂ. ಇದೆ ಎಂದು ರೈತರು ನೋವು ತೋಡಿಕೊಂಡರು. ಮಾವಿನ ನಗರಿಯೆಂದೇ ಖ್ಯಾತಿಗಳಿಸಿರುವ ಶ್ರೀನಿವಾಸಪುರ ತಾಲೂಕಿನಲ್ಲಿ 30 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಕೃಷಿ ಹೊಂದಿದ್ದು, 15 ವರ್ಷಗಳಿಂದ ಸಮರ್ಪಕ ಮಳೆಯಾಗದೆ ಫ‌ಸಲು ಇಲ್ಲದೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ವರುಣ ಕೃಪೆಗಾಗಿ ಜನರು ತವಕಿಸುತ್ತಿದ್ದರು. ಇದೀಗ ವಿಪರೀತವಾಗಿ ಬೀಸಿದ ಗಾಳಿ ಮಳೆಗೆ ಕಟ್ಟಿದ ಫ‌ಸಲು ನಾಶವಾಗಿದೆ.

ಪರಿಹಾರಕ್ಕೆ ಒತ್ತಾಯ: ಅಕಾಲಿಕ ಮಳೆಗೆ ಮಾವು ಉದುರಿ ನಷ್ಟಕೊಳ್ಳಗಾಗಿರುವ ರೈತ ರಿಗೆ ತಾಲೂಕು ಆಡಳಿತದಿಂದ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ಕೊಡಬೇಕೆಂದು ಮಾವು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯ ದರ್ಶಿ ನೀಲಟೂರು ಚಿನ್ನಪ್ಪರೆಡ್ಡಿ ಒತ್ತಾಯಿಸಿ ದ್ದಾರೆ. ಕಸಬಾ ಹೋಬಳಿ ವ್ಯಾಪ್ತಿಯ ನಂಬಿಹಳ್ಳಿ, ಜೆ. ತಿಮ್ಮಸಂದ್ರ, ಆರಿಕುಂಟೆ ಗ್ರಾಪಂ ವ್ಯಾಪ್ತಿ ಯಲ್ಲಿ ಎರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದೆ. ಈ ಭಾಗದ ಆರಮಾಹಕಹಳ್ಳಿ, ಶೆಟ್ಟಿಹಳ್ಳಿ, ವೈ.ಹೊಸಕೋಟೆ, ಆಗ್ರಹಾರ, ಎಲವಕುಂಟೆ ಭಾಗದಲ್ಲಿ ಆಲಿಕಲ್ಲು ಮಳೆಗೆ ಬಹುತೇಕ ಗ್ರಾಮಗಳ ಮಾವಿನ ಕಾಯಿ ಮರಗಳಿಂದ ಅರ್ಧಭಾಗ ಕಳಚಿ ಮಣ್ಣುಪಾಲಾಗಿವೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.