ಸೊಸೈಟಿಗಳ ಗಣಕೀಕರಣದಿಂದ ವಹಿವಾಟಿನಲ್ಲಿ ಪಾರದರ್ಶಕತೆ


Team Udayavani, Feb 23, 2020, 3:00 AM IST

society

ಕೋಲಾರ: ಸೊಸೈಟಿಗಳ ಗಣಕೀಕರಣ ಹಾಗೂ ಆನ್‌ಲೈನ್‌ ವಹಿವಾಟಿನಿಂದಾಗಿ ಸಹಕಾರ ಸಂಸ್ಥೆ ಮೇಲೆ ಗ್ರಾಹಕರಲ್ಲಿನ ಅಪನಂಬಿಕೆ ದೂರವಾಗಿ ವಿಶ್ವಾಸ ವೃದ್ಧಿಸಲಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್‌ ಸಭಾಂಗಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಸಂಬಂಧಿಸಿದಂತೆ ಪ್ಯಾಕ್ಸ್‌ಗಳ ಸಿಇಒಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಆರ್ಥಿಕ ವರ್ಷದ ಆರಂಭವಾದ ಏ.1ರಿಂದ 65 ಸೊಸೈಟಿಗಳು ಆನ್‌ಲೈನ್‌ ವ್ಯಾಪ್ತಿಗೆ ಒಳಪಡಲಿದ್ದು, ಅಂತಿಮವಾಗಿ ಸೆಪ್ಟೆಂಬರ್‌ ಅಂತ್ಯಕ್ಕೆ ಎರಡೂ ಜಿಲ್ಲೆಯ ಎಲ್ಲಾ ಸೊಸೈಟಿಗಳನ್ನು ಕಂಪ್ಯೂಟರೀಕರಣ ಮಾಡಲಾಗುವುದು ಎಂದು ಹೇಳಿದರು.

ಮೋಸಗಾರರಲ್ಲ: ಹಳ್ಳಿಯಲ್ಲಿ ಜನರ ಜೊತೆಗೆ ಸಂಪರ್ಕ ಇರಿಸಿಕೊಂಡರೆ ಸಾಲ ವಸೂಲಾತಿ ಕಷ್ಟವಲ್ಲ. ರೈತರು, ಮಹಿಳಾ ಸಂಘದವರು ಮತ್ತು ಬಡವರು ಮೋಸಗಾರರಲ್ಲ, ಆಕಸ್ಮಿಕವಾಗಿ ಅವರ ಬಾಳು ಬೀದಿಗೆ ಬಂದಾಗ ಸ್ಪಂದಿಸಿ ಧೈರ್ಯ ತುಂಬುವ ಕೆಲಸವನ್ನು ಸೊಸೈಟಿ ಸಿಬ್ಬಂದಿ ಮಾಡಬೇಕಿದೆ ಎಂದು ಹೇಳಿದರು. ಸೊಸೈಟಿ ವ್ಯಾಪ್ತಿಯ ಎಲ್ಲಾ ಹಾಲಿನ ಡೇರಿಗಳ ಉಳಿತಾಯ ಖಾತೆಯನ್ನು ಸಹಕಾರ ಸಂಸ್ಥೆಗಳಲ್ಲಿ ತೆರೆಸುವ ಜೊತೆಗೆ ಠೇವಣಿಯನ್ನೂ ಪಡೆದುಕೊಳ್ಳಬೇಕು. ಮಾರ್ಚ್‌ 1ರಂದು ನಡೆಯುವ ಸಭೆಯಲ್ಲಿ ಈ ಸಂಬಂಧ ಗುರಿ ಸಾಧನೆ ವರದಿಯನ್ನು ಮಂಡಿಸಬೇಕು ಎಂದು ಸ್ಪಷ್ಟಪಡಿಸಿದರು.

ಮೈಕ್ರೋ ಎಟಿಎಂಗೆ ಏ.1ರಿಂದಲೇ ಚಾಲನೆ: ಏಪ್ರಿಲ್‌ 1ರಿಂದ ಸೊಸೈಟಿಗಳಲ್ಲಿ ಮೈಕ್ರೋ ಎಟಿಎಂ ವ್ಯವಸ್ಥೆ ಚಾಲನೆಗೆ ಬರುತ್ತಿದ್ದು, ಎಸ್‌ಎಂಎಸ್‌ ಅಲರ್ಟ್‌ ಸೇವೆ ಸಹಾ ಲಭ್ಯವಾಗಲಿದೆ. ಸೊಸೈಟಿ ಆನ್‌ಲೈನ್‌ ವ್ಯವಸ್ಥೆಯನ್ನು ರಾಜ್ಯ ಮಟ್ಟದಲ್ಲಿ ಮಾದರಿಯಾಗಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಗಣಕೀಕರಣ ವ್ಯವಸ್ಥೆ ನಂಬಿಕೆಯ ಪ್ರತೀಕ: ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಎಂ.ರವಿ ಮಾತನಾಡಿ, ಸೊಸೈಟಿ ಆನ್‌ಲೈನ್‌ ವ್ಯವಸ್ಥೆಯಿಂದಾಗಿ ಡಿಸಿಸಿ ಬ್ಯಾಂಕ್‌ ಸೇವೆ ಹಳ್ಳಿ ಮಟ್ಟದಲ್ಲಿ ಲಭ್ಯವಾಗಲಿದ್ದು ಇದರಿಂದಾಗಿ ಗ್ರಾಹಕರಲ್ಲಿ ನಂಬಿಕೆ, ವಿಶ್ವಾಸ ವೃದ್ಧಿಯಾಗಲಿದೆ ಎಂದರು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ನಾರಾಯಣರೆಡ್ಡಿ, ಎಂ.ಎಲ್‌.ಅನಿಲ್‌ಕುಮಾರ್‌, ಎಜಿಎಂ ಶಿವಕುಮಾರ್‌, ಕ್ಯಾಲನೂರು ಸೊಸೈಟಿ ಅಧ್ಯಕ್ಷ ರಾಮಾಂಜಿನಪ್ಪ, ಸುಗಟೂರು ಸೊಸೈಟಿ ಅಧ್ಯಕ್ಷ ಟಿ.ವಿ.ತಿಮ್ಮರಾಯಪ್ಪ, ಮದ್ದೇರಿ ಶ್ರೀನಿವಾಸಗೌಡ, ಉತ್ತನೂರು ಮಂಜುನಾಥ, ದೊಡ್ಡಶಿವಾರದ ಗೋವರ್ಧನರೆಡ್ಡಿ, ವಿ.ಸಾಫ್ಟ್‌ ರಾಜ್ಯ ವ್ಯವಸ್ಥಾಪಕ(ಮಾರುಕಟ್ಟೆ) ಸಿರೀಶ್‌ ಹಂಪಿಹೊಳಿ, ತಂತ್ರಜ್ಞರಾದ ಗಜಾನನ ಜೋಷಿ, ಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ

ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.