ಡೆಂಘೀಗೆ ಶಾಸಕ ವರ್ತೂರು ಪತ್ನಿ ಶ್ಯಾಮಲಾ ಬಲಿ
Team Udayavani, Jul 27, 2017, 8:55 AM IST
ಕೋಲಾರ: ಕೆಲ ದಿನಗಳಿಂದ ಡೆಂಘೀ ಜ್ವರ ಪೀಡಿತರಾಗಿದ್ದ ಶಾಸಕ ವರ್ತೂರು ಪ್ರಕಾಶ್ ಅವರ ಪತ್ನಿ ಶ್ಯಾಮಲಾ (40) ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ಜ್ವರಪೀಡಿತರಾಗಿದ್ದು, ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ,ಅದು ಡೆಂಘೀ ಎಂಬುದು ದೃಢಪಟ್ಟಿತ್ತು. ಇದೇ ವೇಳೆ, ಅವರಿಗೆ ಕಿಡ್ನಿ ಮಸ್ಯೆ ಹಾಗೂ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತು. ಮಂಗಳವಾರ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿತು.
ವೈದ್ಯರು ಸಾಕಷ್ಟು ಯತ್ನಿಸಿದರಾದರೂ ಅವರು ಚಿಕಿತ್ಸೆಗೆ ಸ್ಪಂದಿಸಲೇ ಇಲ್ಲ. ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿಯೇ
ಕೊನೆಯುಸಿರೆಳೆದರು. ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಆಂಜನೇಯ, ಶಾಸಕರಾದ ಎಂಟಿಬಿ ನಾಗರಾಜ್, ಭೈರತಿ ಬಸವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಸೇರಿದಂತೆ ಹಲವರು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಬಳಿಕ, ಪಾರ್ಥಿವ
ಶರೀರವನ್ನು ವರ್ತೂರಿಗೆ ತಂದು ಸಾರ್ವಜನಿಕರ ದರ್ಶನಕ್ಕೆ ಕೆಲ ಹೊತ್ತು ಇಡಲಾಗಿತ್ತು. ನಂತರ, ಸ್ವಗೃಹದ ಸಮೀಪವೇ ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ಪತಿ ವರ್ತೂರು ಪ್ರಕಾಶ್, ಪುತ್ರರಾದ ತೇಜಸ್, ಭರತ್ ಮತ್ತು ನಿತಿನ್ರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ