ಕೆಲಸ ಬಹಿಷ್ಕರಿಸಿ ಬೆಮೆಲ್‌ ಕಾರ್ಮಿಕರ ಮುಷ್ಕ ರ

ಸೇವಾ ಅವಧಿ ಇಳಿಕೆ ಖಂಡಿಸಿದ ಕಾರ್ಮಿಕರು | ಸಂಸಾರ ಸಮೇತ ಧರಣಿ ನಡೆಸುವ ಎಚ್ಚರಿಕೆ

Team Udayavani, Apr 30, 2019, 2:19 PM IST

kolar-4-tdy..

ಕೆಜಿಎಫ್ ಬೆಮೆಲ್‌ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ಇಂದು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆಜಿಎಫ್: ಬೆಮೆಲ್ ರೈಲ್ವೆ ಕೋಚ್‌ನಲ್ಲಿ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗದಲ್ಲಿ ಕಡಿತ ಮಾಡಿ, ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಗುತ್ತಿಗೆ ನೌಕರರು ಸೋಮವಾರ ಕೆಲಸ ಬಹಿಷ್ಕರಿಸಿ, ಬೆಮೆಲ್ ಕಾರ್ಖಾನೆ ಮುಂಭಾಗದಲ್ಲಿ ಧರಣಿ ನಡೆಸಿದರು.

ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ವಿಫ‌ಲವಾಗಿರುವುದರಿಂದ ಐದು ದಿನಗಳ ಕಾಲ ವಿವಿಧ ರೀತಿಯ ಮುಷ್ಕರ ನಡೆಸಲು ಕಾರ್ಮಿಕರು ನಿರ್ಧರಿಸಿದ್ದಾರೆ.

ಬೆಮೆಲ್ ರೈಲ್ವೆ ಕೋಚ್‌ನಲ್ಲಿ ಸಾಧಾರಣವಾಗಿ ಗುತ್ತಿಗೆ ನೌಕರರಿಗೆ ನೀಡುತ್ತಿದ್ದ ಕೆಲಸದ ಅವಧಿಯನ್ನು ಹನ್ನೊಂದು ದಿನಕ್ಕೆ ಇಳಿಸಲು ಆಡಳಿತ ವರ್ಗ ನಿರ್ಧರಿಸಿದ ಕಾರಣ, ಕಾರ್ಮಿಕರು ಪ್ರತಿಭಟನೆಗೆ ಮುಂದಾದರು.

ಕಾರ್ಖಾನೆಯಲ್ಲಿ ಉತ್ಪಾದನೆ ಕುಸಿತಗೊಂಡಿದೆ ಎಂಬ ಕಾರಣವೊಡ್ಡಿ, ನಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿದೆ. ಕೆಲಸವನ್ನು ನಂಬಿ ಸಂಸಾರ ಪೋಷಣೆ ಮಾಡುತ್ತಿರುವ ನಾವುಗಳು ಕೇವಲ ಹನ್ನೊಂದು ದಿನದ ಸಂಬಳದಿಂದ ಸಂಸಾರವನ್ನು ಹೇಗೆ ನಿಭಾಯಿಸುವುದು. ಬಿಜಿಎಂಎಲ್ ಮುಚ್ಚಿದಾಗ, ಅದರ ನೌಕರರ ಕುಟುಂಬದವರಿಗೆ ಆಸರೆಯಾಗಬೇಕೆಂಬ ಹಿನ್ನೆಲೆಯಲ್ಲಿ ರೈಲ್ವೆ ಕೋಚ್ 2 ರಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಗುತ್ತಿಗೆ ಕಾರ್ಮಿಕರನ್ನು ಆಸಡ್ಡೆಯಿಂದ ಕಾಣಲಾಗುತ್ತಿದೆ ಎಂದು ಪ್ರತಿಭಟನಾ ನಿರತ ಕಾರ್ಮಿಕರು ತಿಳಿಸಿದರು.

ಗುತ್ತಿಗೆ ಕಾರ್ಮಿಕರಿಗೆ ಇಷ್ಟೆಲ್ಲಾ ತೊಂದರೆಯಾಗುತ್ತಿದ್ದರೂ ಕ್ಷೇತ್ರದ ಶಾಸಕರಾಗಲಿ, ಸಂಸದರಾಗಲಿ ಸ್ಥಳಕ್ಕೆ ಆಗಮಿಸಿ ವಿಚಾರಿಸಿಲ್ಲ. ನಮ್ಮ ಕಷ್ಟ ಸುಖಗಳಿಗೆ ಸ್ಪಂದಿಸಿಲ್ಲ. ಜನಪ್ರತಿನಿಧಿಗಳು ಕೂಡ ನಮ್ಮ ಬಗ್ಗೆ ತಾತ್ಸಾರ ಮನೋಭಾವ ತೋರಿದ್ದಾರೆ ಎಂದು ಕಾರ್ಮಿಕರು ದೂರಿದರು.

ಶೈಕ್ಷಣಿಕ ವರ್ಷ ಇದೀಗ ಆರಂಭವಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಮ್ಮ ಮಕ್ಕಳಿಗೆ ಫೀಸ್‌ ಕಟ್ಟುವುದು ಹೇಗೆ. ಸಂಸಾರ ನಿಭಾಯಿಸುವುದು ಹೇಗೆ ಎಂದು ನೌಕರರು ಮುಖಂಡರನ್ನು ಪ್ರಶ್ನಿಸಿದರು. ತಕ್ಷಣ ಕಾರ್ಖಾನೆಯ ಆಡಳಿತ ವರ್ಗ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಂಗಳವಾರದಂದು ಸಂಸಾರ ಸಮೇತ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.