3 ಗುಂಪುಗಳ ಜಗಳದಲ್ಲಿ ಮೂರನೆಯವರಿಗೆ ಲಾಭ

ಪಕ್ಷೇತರ ಶಾಸಕ ನಾಗೇಶ್‌ಗೆ ಬಿಜೆಪಿ ಆಸರೆ ಅನಿವಾರ್ಯ | ಪಕ್ಷದಿಂದ ಸ್ಪರ್ಧಿಸಿದ್ರೆ ಮುಖಂಡರಿಂದ ಬೆಂಬಲ

Team Udayavani, Jul 25, 2019, 3:16 PM IST

Udayavani Kannada Newspaper

ಕೋಲಾರ: ಇಬ್ಬರ ಜಗಳದಲ್ಲಿ ಮೂರನೆಯರಿಗೆ ಲಾಭ ಎಂಬ ಗಾದೆ ಮಾತಿನಂತೆ, ಕೋಲಾರ ಜಿಲ್ಲಾ ರಾಜಕಾರಣದಲ್ಲಿ ಮೂರು ಗುಂಪುಗಳ ಜಗಳ ಮೂರನೇ ವ್ಯಕ್ತಿಗೆ ಲಾಭವಾಗುತ್ತಿದೆ.

ಜಿಲ್ಲಾ ರಾಜಕಾರಣದಲ್ಲಿ ಸದ್ಯಕ್ಕೆ ಕಾಂಗ್ರೆಸ್‌ ಪಕ್ಷದ ಎರಡು ಗುಂಪುಗಳು ಹಾಗೂ ಜೆಡಿಎಸ್‌ ಅಥವಾ ಬಿಜೆಪಿ ನಡುವೆ ಪ್ರತಿ ಕ್ಷೇತ್ರದಲ್ಲೂ ಪೈಪೋಟಿ ನಡೆಯುತ್ತಿದೆ. ಇದೇ ರೀತಿಯ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿಯೂ ಕಾಣಿಸುತ್ತಿದೆ. ಈ ಮೂರು ಗುಂಪುಗಳ ನಡುವಿನ ಜಗಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮುಳಬಾಗಿಲು ಶಾಸಕ ಎಚ್.ನಾಗೇಶ್‌ರಿಗೆ ಅಧಿಕಾರ ಅನಾಯಾಸವಾಗಿ ಒಲಿದು ಬರುವಂತಾಗಿದೆ.

ತ್ಯಾಗ ಮಾಡಿಯೇ ಮುಂಬೈಗೆ: ರಾಜ್ಯದಲ್ಲಿ ಒಂದೆರೆಡು ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಎನ್ನಲಾಗುವ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮುಳಬಾಗಿಲು ಶಾಸಕ ಎಚ್.ನಾಗೇಶ್‌ರಿಗೆ ಕೋಲಾರ ಜಿಲ್ಲೆಯಿಂದ ಸಚಿವ ಸ್ಥಾನ ಖಚಿತವೆನ್ನಲಾಗುತ್ತಿದೆ. ಏಕೆಂದರೆ, ಎಚ್.ನಾಗೇಶ್‌ ಮೈತ್ರಿ ಸರ್ಕಾರದಲ್ಲಿ ತಮಗೆ ಕೊಟ್ಟಿದ್ದ ಸಚಿವ ಸ್ಥಾನವನ್ನು ಬಿಜೆಪಿಗಾಗಿ ತ್ಯಾಗ ಮಾಡಿಯೇ ಮುಂಬೈಗೆ ತೆರಳಿದ್ದರು.

ಅದೃಷ್ಟ ಬಲ: 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದ ಎಚ್.ನಾಗೇಶ್‌ ಯಾರು ಎಂದೇ ಮತದಾರರಿಗೆ ತಿಳಿದಿರಲಿಲ್ಲ. ಮೂಲತಃ ಕೋಲಾರ ಜಿಲ್ಲೆಯವರಲ್ಲದ ಎಚ್.ನಾಗೇಶ್‌ ಅಂದು ನಾಮಪತ್ರ ಸಲ್ಲಿಸಿದ್ದ ನಲವತ್ತಕ್ಕೂ ಹೆಚ್ಚು ಮಂದಿ ಪೈಕಿ ಒಬ್ಬರಾಗಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಬೇಕಾಗಿದ್ದ ಕೊತ್ತೂರು ಮಂಜುನಾಥ್‌ರ ಜಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡ ನಂತರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ ಕೆ.ಎಚ್.ಮುನಿಯಪ್ಪರನ್ನು ವಿರೋಧಿಸುತ್ತಿದ್ದ ಕೊತ್ತೂರು ಮಂಜುನಾಥ್‌ ಮತ್ತು ಇತರೇ ಮುಖಂಡರು ಅವರ ಮತ್ತೂರ್ವ ಪುತ್ರಿ ನಂದಿನಿಗೆ ಅವಕಾಶ ನಿರಾಕರಿಸಿದ್ದರು.

ಈ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಅಧಿಕಾರಿಯಾಗಿ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದ ಮಹದೇವಪುರ ವಿಧಾನಸಭಾ ಕ್ಷೇತ್ರದ ಬೆಳತೂರು ಗ್ರಾಮದ ವಾಸಿ ಎಚ್.ನಾಗೇಶ್‌ರನ್ನು ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು. ಅಭ್ಯರ್ಥಿ ಯಾರೆಂದು ತಿಳಿಯದೆ ಕೇವಲ ಮಾಜಿ ಶಾಸಕರಾಗಿದ್ದ ಕೊತ್ತೂರು ಮಂಜುನಾಥ್‌ರ ನಾಮಬಲದಿಂದ ಎಚ್.ನಾಗೇಶ್‌ ಕೋಲಾರ ಜಿಲ್ಲಾ ರಾಜಕಾರಣದಲ್ಲಿ ಶಾಸಕರಾಗಿ ಹೊರಹೊಮ್ಮಿದ್ದರು.

ಸ್ವಂತ ಬಲವಿಲ್ಲ: ಚುನಾವಣೆ ಗೆದ್ದ ನಂತರವೂ ಎಚ್.ನಾಗೇಶ್‌ ಮುಳಬಾಗಿಲು ಕ್ಷೇತ್ರದಲ್ಲಿ ಸ್ವಂತ ಬೆಂಬಲಿಗ ಪಡೆಯನ್ನು ಸೃಷ್ಟಿಸಿಕೊಳ್ಳುವ ಯಾವುದೇ ಪ್ರಯತ್ನಕ್ಕೆ ಕೈಹಾಕಿಲ್ಲ. ಕೊತ್ತೂರು ಮಂಜುನಾಥ್‌ರ ನೆರಳಿನಲ್ಲಿಯೇ ರಾಜಕೀಯ ಮಾಡುತ್ತಿರುವ ಅವರ ಹಿಂಬಾಲಕರನ್ನು ನಂಬಿಕೊಂಡೇ ಮುಂದುವರಿಯುತ್ತಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಮಂತ್ರಿಗಿರಿ ಸಿಗಲಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡಿದ್ದ ಎಚ್.ನಾಗೇಶ್‌ ಕಳೆದ ಒಂದು ವರ್ಷದ ಅವಧಿಯಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಸಭೆ ಸಮಾರಂಭ ನಡೆಸಿದ್ದೇ ಕಡಿಮೆ. ಕೆಲವು ತಿಂಗಳುಗಳ ಹಿಂದಷ್ಟೇ ಮೈತ್ರಿ ಸರ್ಕಾರವು ಎಚ್.ನಾಗೇಶ್‌ರಿಗೆ ಮಂತ್ರಿ ಸ್ಥಾನವನ್ನು ನೀಡಿತ್ತು. ವಿಳಂಬ ಮಾಡಿ ಸಣ್ಣ ಕೈಗಾರಿಕೆಯ ಖಾತೆಯನ್ನು ಹಂಚಿತ್ತು. ಇದಾದ ನಂತರವೂ ಕೋಲಾರ ಮತ್ತು ಮುಳಬಾಗಿಲು ರಾಜಕೀಯದಲ್ಲಿ ಎಚ್.ನಾಗೇಶ್‌ರಿಗೆ ಮಂತ್ರಿ ಸ್ಥಾನ ಸಿಕ್ಕಿದ್ದಕ್ಕೆ ಅಭೂತಪೂರ್ವ ಸ್ವಾಗತವೇನು ಸಿಕ್ಕಿರಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಎಚ್.ನಾಗೇಶ್‌ ತಮಗೆ ಸಿಕ್ಕ ಮಂತ್ರಿಗಿರಿಗೆ ರಾಜೀನಾಮೆ ನೀಡಿ ವಿಶೇಷ ವಿಮಾನದಲ್ಲಿ ಮುಂಬೈ ಸೇರಿಕೊಂಡಿದ್ದರು. ಇದೀಗ ಬದಲಾದ ರಾಜಕೀಯ ಚಿತ್ರಣದಲ್ಲಿ ಕೋಲಾರ ಜಿಲ್ಲೆಯಿಂದ ಅಧಿಕಾರ ಪಡೆಯುವ ಏಕೈಕ ಶಾಸಕರಾಗಿ ನಿಂತಿದ್ದಾರೆ.

ಬಿಜೆಪಿಯೇ ಆಸರೆ: ಪಕ್ಷೇತರ ಶಾಸಕ ಎಚ್.ನಾಗೇಶ್‌ರಿಗೆ ಕೋಲಾರ ಜಿಲ್ಲೆಯ ರಾಜಕೀಯ ನಂಟು ಇಲ್ಲವೇ ಇಲ್ಲ. ಮಹದೇವಪುರ ಕ್ಷೇತ್ರದ ನಾಗೇಶ್‌ರಿಗೆ ಅಲ್ಲಿಯೇ ರಾಜಕೀಯ ಮಾಡುವ ಬಯಕೆ. ಆದರೆ, ಅದೃಷ್ಟದ ಆಟದಲ್ಲಿ ಶಾಸಕರಾಗಿ ಸಚಿವರಾಗುತ್ತಿರುವ ಎಚ್.ನಾಗೇಶ್‌ ಕೋಲಾರ ಜಿಲ್ಲೆಯಲ್ಲಿಯೇ ರಾಜಕೀಯ ಮಾಡಬೇಕಾದರೆ ಬಿಜೆಪಿಯನ್ನು ಅಶ್ರಯಿಸುವುದು ಅನಿವಾರ್ಯವಾಗುತ್ತದೆ.

2018ರ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಎಚ್.ನಾಗೇಶ್‌ 74 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಅವರ ಪ್ರತಿಸ್ಪರ್ಧಿ ಜೆಡಿಎಸ್‌ನ ಸಮೃದ್ಧಿ ಮಂಜುನಾಥ್‌ 67 ಸಾವಿರ ಮತಗಳನ್ನು ಗಳಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಮಾಜಿ ಶಾಸಕ ಅಂಬರೀಶ್‌ ಕೇವಲ 8 ಸಾವಿರ ಮತಗಳನ್ನು ಪಡೆಯುವಲ್ಲಿ ಸಫ‌ಲವಾಗಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷೇತರ ಎಚ್.ನಾಗೇಶ್‌ ಮುಳಬಾಗಿಲು ಕ್ಷೇತ್ರದಿಂದಲೇ ಚುನಾವಣೆ ಎದುರಿಸಲು ಮುಂದಾದರೆ ಬಿಜೆಪಿಯೇ ಆಸರೆಯಾಗಲಿದೆ.

ಮೂವರ ಜಗಳದಲ್ಲಿ ಎಚ್.ನಾಗೇಶ್‌ಗೆ ಲಾಭ: ಕೋಲಾರ ಜಿಲ್ಲೆಯ ಕಾಂಗ್ರೆಸ್‌ನಲ್ಲಿನ ಕೆ.ಎಚ್.ಮುನಿಯಪ್ಪ ಹಾಗೂ ಕೆ.ಆರ್‌.ರಮೇಶ್‌ಕುಮಾರ್‌ ನೇತೃತ್ವದ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಬಣಗಳ ಪೈಪೋಟಿಯಲ್ಲಿಯೇ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿಯ ಕಮಲ ಅರಳುವಂತಾಗಿತ್ತು.

ಲೋಕಸಭಾ ಚುನಾವಣೆಯಲ್ಲಿ ಎಚ್.ನಾಗೇಶ್‌, ಕೊತ್ತೂರು ಮಂಜುನಾಥ್‌ರನ್ನು ಹಿಂಬಾಲಿಸಿ ಬಿಜೆಪಿ ಬೆಂಬಲಿಸಿದ್ದರು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದಲ್ಲಿ ಎಚ್.ನಾಗೇಶ್‌ರಿಗೆ ಮಂತ್ರಿ ಸ್ಥಾನ ಕೊಟ್ಟಿದ್ದನ್ನು ಕೆ.ಎಚ್.ಮುನಿಯಪ್ಪ ಆಕ್ಷೇಪಿಸಿದ್ದರು. ಆದರೆ, ರಮೇಶ್‌ಕುಮಾರ್‌ ಬಣವು ನಾಗೇಶ್‌ರಿಗೆ ಸಿಕ್ಕ ಮಂತ್ರಿಗಿರಿಯನ್ನು ಸ್ವಾಗತಿಸಲೂ ಇಲ್ಲ, ವಿರೋಧಿಸಲೂ ಇಲ್ಲ.

ಕೋಲಾರ ಜಿಲ್ಲೆಯಲ್ಲಿ ಪ್ರಬಲವಾಗಿರುವ ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ಪೈಪೋಟಿಯಲ್ಲಿ ಪಕ್ಷೇತರರಾಗಿ ಗೆದ್ದಿರುವ ಎಚ್.ನಾಗೇಶ್‌ ದಿನಕ್ಕೊಂದು ನಿಲುವು ತೆಗೆದುಕೊಂಡರೂ ಅಧಿಕಾರ ಅವರನ್ನು ಹಿಂಬಾಲಿಸುವಂತಾಗಿದೆ. ಎಚ್.ನಾಗೇಶ್‌ರಿಗೆ ಸಿಗುತ್ತಿರುವ ಈ ಅಧಿಕಾರವು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಹೇಗೆ ಸಹಕಾರಿಯಾಗಬಹುದು ಎನ್ನುವುದನ್ನು ಮುಂದಿನ ದಿನಗಳೇ ನಿರೂಪಿಸಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.