15 ದಿನಗಳಿಂದ ಕಾದರೂ ಸಿಗುತ್ತಿಲ್ಲ ಅಡುಗೆ ಅನಿಲ

Team Udayavani, Sep 13, 2019, 11:26 AM IST

kopala-tdy-2

ಕುಕನೂರು: ಗ್ಯಾಸ್‌ ಏಜೆನ್ಸಿ ಕಚೇರಿ ಎದುರು ಗ್ಯಾಸ್‌ ಸಿಲಿಂಡರ್‌ಗಾಗಿ ಕಾಯುತ್ತಿರುವ ಗ್ರಾಹಕರು.

ಕುಕನೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪಟ್ಟಣದ ಜನರಿಗೂ ತಟ್ಟಿದೆ. ನೆರೆಯಿಂದ ಅಲ್ಲಲ್ಲಿ ರಸ್ತೆಗಳು ಕೆಟ್ಟು ಹೋಗಿದ್ದರಿಂದ ಸರಕು ಸಾಗಾಟ ವಾಹನಗಳ ಸಂಚಾರ ಸ್ಥಗಿತಗೊಂಡು ಪಟ್ಟಣ ಸೇರಿದಂತೆ ಹಲವೆಡೆ ಸಮಪರ್ಕವಾಗಿ ಸಿಲಿಂಡರ್‌ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಜನತೆ ಅಡುಗೆ ಅನಿಲಕ್ಕಾಗಿ ಪರದಾಡುವಂತಾಗಿದೆ.

ಕಳೆದ ತಿಂಗಳು ಉಂಟಾದ ನೆರೆಯಿಂದ ಬೆಳಗಾವಿ ಮತ್ತು ಧಾರವಾಡದಲ್ಲಿ ಪೆಟ್ರೋಲಿಯಂ ಪ್ಲಾಂಟ್‌ಗಳಿಂದ ಸಿಲಿಂಡರ್‌ ಪೂರೈಕೆಯಾಗುತ್ತಿಲ್ಲ. ನೆರೆಯಿಂದ ಸಿಲಿಂಡರ್‌ ಸಮಸ್ಯೆಯಾಗಿದೆ ಎಂದು ಏಜೆನ್ಸಿ ಕಚೇರಿ ಮುಂದೆ ಬೋರ್ಡ್‌ ಹಾಕಲಾಗಿದೆ. ಈ ಪ್ಲಾಂಟ್‌ಗಳನ್ನೇ ಅವಲಂಬಿಸಿರುವ ತಾಲೂಕಿನಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಒಂದೇ ಸಿಲಿಂಡರ್‌ ಸಂಪರ್ಕ ಹೊಂದಿರುವ ಗ್ರಾಹಕರು ಕಟ್ಟಿಗೆ ಹಾಗೂ ವಿದ್ಯುತ್‌ ಒಲೆಗಳ ಮೊರೆ ಹೋಗುವಂತಾಗಿದೆ.

ಎಚ್ಪಿ ಗ್ಯಾಸ್‌, ಭಾರತ ಪೆಟ್ರೋಲಿಯಂ ಗ್ಯಾಸ್‌ ಸೇರಿದಂತೆ ವಿವಿಧ ಬಗೆಯ ಅಡುಗೆ ಅನಿಲ ಸಿಲಿಂಡರ್‌ಗಳಿಗಾಗಿ ಗ್ರಾಹಕರು ಮೊಬೈಲ್ ಮೂಲಕ ನೋಂದಾಯಿಸಿಕೊಂಡಿದ್ದು, 15 ದಿನಗಳಿಂದ ಕಾದರು ಅಡುಗೆ ಸಿಲಿಂಡರ್‌ ಸಿಗುತ್ತಿಲ್ಲ. 20ರಿಂದ 25 ದಿನಗಳ ಹಿಂದೆ ಗ್ಯಾಸ್‌ ಸಿಲಿಂಡರ್‌ಗಾಗಿ ಬೇಡಿಕೆ ಸಲ್ಲಿಸಿದವರಿಗೆ ಈಗೀಗ ಪೂರೈಕೆಯಾಗುತ್ತಿದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ ಜನ ಬೆಳಗ್ಗೆಯೇ ಖಾಲಿ ಸಿಲಿಂಡರ್‌ಗಳೊಂದಿಗೆ ಗ್ಯಾಸ್‌ ಏಜೆನ್ಸಿ ಕಚೇರಿಗಳಿಗೆ ಧಾವಿಸುತ್ತಿದ್ದಾರೆ. ನಗರದಲ್ಲಿರುವ ಹೊಸಮನಿ ಗ್ಯಾಸ್‌ ಏಜೆನ್ಸಿ ಎದುರು ಬೆಳಗ್ಗೆ 6ರಿಂದಲೇ ಜನರು ಸಾಲುಗಟ್ಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ತಡವಾಗಿ ಬಂದರೆ ಸಿಲಿಂಡರ್‌ ಸಿಗದು ಎನ್ನುತ್ತಾರೆ ಗ್ರಾಹಕರು. ಕಳೆದ ತಿಂಗಳು ನೆರೆ ಉಂಟಾಗಿದ್ದರಿಂದ ನಾಲ್ಕೈದು ದಿನಗಳ ಕಾಲ ಗ್ಯಾಸ್‌ ಪ್ಲಾಂಟ್‌ಗಳು ಬಾಗಿಲು ಮುಚ್ಚಿದ್ದವು. ಅದರೊಂದಿಗೆ ಆರೇಳು ದಿನ ಸಿಲಿಂಡರ್‌ ಸಾಗಿಸುವ ವಾಹನಗಳು ಸಂಚರಿಸಲಿಲ್ಲ. ನೆರೆ ನಿಂತ ಬಳಿಕ ಈ ಭಾಗದ ಬಹುತೇಕ ಗ್ಯಾಸ್‌ ಏಜೆನ್ಸಿಗಳಿಗೆ ವಾಣಿಜ್ಯ ಉದ್ದೇಶಿತ ಸೇರಿದಂತೆ ದಿನಕ್ಕೆ ತಲಾ 200ರಿಂದ 250 ಸಿಲಿಂಡರ್‌ಗಳು ಮಾತ್ರ ಪೂರೈಕೆಯಾಗುತ್ತಿವೆ. ಇದು ಈ ಹಿಂದೆ ಪೂರೈಕೆಯಾಗುತ್ತಿದ್ದ ಸಿಲಿಂಡರ್‌ಗಳ ಸಂಖ್ಯೆಗಿಂತ ಭಾಗಶಃ ಕಡಿಮೆ. ಹೀಗಾಗಿ ಅಡುಗೆ ಅನಿಲ ಸಮಸ್ಯೆ ತೀವ್ರಗೊಂಡಿದೆ ಎಂದು ಹೇಳಲಾಗಿದೆ.

ಪ್ರವಾಹ ನಿಂತು ತಿಂಗಳಾದರೂ ಗ್ರಾಹಕರಿಗೆ ಮಾತ್ರ ಮನೆ ಬಳಕೆಗೆ ಅಡುಗೆ ಅನಿಲ ಸಿಗುತ್ತಿಲ್ಲ. ಆದರೆ ಸಿಲಿಂಡರ್‌ ಸಮಸ್ಯೆಯಿಂದ ಕೆಲವು ಹೋಟೆಲ್ಗಳು ಬಾಗಿಲು ಮುಚ್ಚಿವೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.